ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ

ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಕ್ಲೀನ್‌ಚಿಟ್ ನೀಡಿರುವುದರ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಅವ್ಯವಹಾರ ನಡೆದಿದೆ ಎಂದು ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು.

ರಾಹುಲ್ ಗಾಂಧಿಗೆ ತರಾಟೆ: ‘ಚೌಕಿದಾರ್​ ಚೋರ್​ ಹೈ’ ಎಂದಿದ್ದ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.  ರಾಹುಲ್​ ಗಾಂಧಿ ಮಾತಾಡುವಾಗ ಎಚ್ಚರಿಕೆಯಿಂದಿರಬೇಕು. ರಾಹುಲ್ ಕ್ಷಮೆಯಾಚಿಸಿದ್ದನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್​, ರಾಹುಲ್ ಹೇಳಿಕೆ ದುರದೃಷ್ಟಕರವೆಂದಿದೆ. ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ ಕೈಬಿಟ್ಟಿದೆ.

ಸುಪ್ರೀಂಕೋರ್ಟ್​ ತೀರ್ಪಿನ ನಂತರ ‘ಚೌಕಿದಾರ್​ ಚೋರ್​ ಹೈ’ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ತನ್ನ ಹೇಳಿಕೆಯನ್ನು ಸುಪ್ರೀಂಕೋರ್ಟ್​ ಹೇಳಿದೆ ಎಂದಿದ್ದರು. ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

Published On - 11:06 am, Thu, 14 November 19

Click on your DTH Provider to Add TV9 Kannada