ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಕ್ಲೀನ್‌ಚಿಟ್ ನೀಡಿರುವುದರ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಅವ್ಯವಹಾರ ನಡೆದಿದೆ ಎಂದು ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು. […]

ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ
ಸಾಧು ಶ್ರೀನಾಥ್​

Updated on: Nov 14, 2019 | 11:30 AM

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಕ್ಲೀನ್‌ಚಿಟ್ ನೀಡಿರುವುದರ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಅವ್ಯವಹಾರ ನಡೆದಿದೆ ಎಂದು ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು.

ರಾಹುಲ್ ಗಾಂಧಿಗೆ ತರಾಟೆ:
‘ಚೌಕಿದಾರ್​ ಚೋರ್​ ಹೈ’ ಎಂದಿದ್ದ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.  ರಾಹುಲ್​ ಗಾಂಧಿ ಮಾತಾಡುವಾಗ ಎಚ್ಚರಿಕೆಯಿಂದಿರಬೇಕು. ರಾಹುಲ್ ಕ್ಷಮೆಯಾಚಿಸಿದ್ದನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್​, ರಾಹುಲ್ ಹೇಳಿಕೆ ದುರದೃಷ್ಟಕರವೆಂದಿದೆ. ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ ಕೈಬಿಟ್ಟಿದೆ.

ಸುಪ್ರೀಂಕೋರ್ಟ್​ ತೀರ್ಪಿನ ನಂತರ ‘ಚೌಕಿದಾರ್​ ಚೋರ್​ ಹೈ’ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ತನ್ನ ಹೇಳಿಕೆಯನ್ನು ಸುಪ್ರೀಂಕೋರ್ಟ್​ ಹೇಳಿದೆ ಎಂದಿದ್ದರು.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

 

Published On - 11:06 am, Thu, 14 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us