ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರ; ಜುಲೈ 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂಕೋರ್ಟ್, ವಿಚಾರಣೆ ಮುಗಿಯುವವರೆಗೆ ಚರ್ಚೆ ನಡೆಸದಂತೆ CWMAಗೆ ಕೇಳಲು 2 ರಾಜ್ಯಗಳಿಗೂ ಸೂಚಿಸಿದೆ.
ದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ (Mekedatu Water Project) ಜಾರಿ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ (Supreme Court) ಜುಲೈ 26ಕ್ಕೆ ವಿಚಾರಣೆ ಮುಂದೂಡಿದೆ. ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂಕೋರ್ಟ್, ವಿಚಾರಣೆ ಮುಗಿಯುವವರೆಗೆ ಚರ್ಚೆ ನಡೆಸದಂತೆ CWMAಗೆ ಕೇಳಲು 2 ರಾಜ್ಯಗಳಿಗೂ ಸೂಚಿಸಿದೆ. ಇನ್ನು ಕಳೆದ ವಾರ ತಮಿಳುನಾಡು ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚಿಸದಂತೆ ಸೂಚಿಸಲು ಸುಪ್ರೀಂಕೋರ್ಟ್ಗೆ ಮನವಿ ಮಾಡಿತ್ತು.
ತಮಿಳುನಾಡು ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ: ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ ವ್ಯಕ್ತಪಡಿಸಿದ್ದರು. ಕೇಂದ್ರಕ್ಕೆ ಸೂಚನೆ ನೀಡುವಂತೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ. ಸುಪ್ರೀಂಗೆ ತಮಿಳುನಾಡು ಸಲ್ಲಿಸಿರುವ ಅರ್ಜಿ ಸರಿಯಾದ ಕ್ರಮವಲ್ಲ. ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಕೊಟ್ಟಿತ್ತು. ನೋಟಿಸ್ಗೆ ನಾವು ಸಮರ್ಥವಾದ ಉತ್ತರ ಕೊಟ್ಟಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರಾಧಿಕಾರ ರಚಿಸಲಾಗಿದೆ. ಕಾವೇರಿ ನದಿ ನೀರು ಹಂಚಿಕೆಗೆ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದರು.
ಇದನ್ನೂ ಓದಿ: India Covid Updates: ಭಾರತದಲ್ಲಿ ಹೊಸದಾಗಿ 20,557 ಮಂದಿ ಕೊರೊನಾ ಸೋಂಕಿತರು ಪತ್ತೆ, 40 ಸಾವು
ಕಾವೇರಿ ನದಿಗೆ ಸಂಬಂಧಪಟ್ಟ ಯಾವ ಯೋಜನೆ ಜಾರಿಗೊಳಿಸಬೇಕು. ಯಾವುದು ಜಾರಿಗೊಳಿಸಬಾರದು ಎಂದು ತೀರ್ಮಾನಿಸುವ ಅಧಿಕಾರ ಪ್ರಾಧಿಕಾರಕ್ಕೆ ಮಾತ್ರ ಇದೆ. ಮೇಕೆದಾಟು ಯೋಜನೆ ಸಂಬಂಧ 16 ರಿಂದ 17 ಸಭೆಗಳು ಆಗಿವೆ ಅಂತ ಸಿಎಂ ಹೇಳಿದ್ದರು.
ಈಗಾಗಲೇ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಡಿ ಮಾಡಿದ್ದಾರೆ. ಈ ವೇಳೆ ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ವಿಷಯದ ಬಗ್ಗೆ ಚರ್ಚೆ ಮಾಡಿ ಒಪ್ಪಿಗೆ ನೀಡಿ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ಹಲಾಲ್ ಬಳಿಕ ಇದೀಗ ಮದರಸಾಗಳಲ್ಲಿ ಪಠ್ಯ ಬದಲಾವಣೆಯ ಫೈಟ್: ಶಿಕ್ಷಣ ಇಲಾಖೆಗೆ ಬೇಡಿಕೆಯಿಟ್ಟ ಮುಸ್ಲಿಂ ಪೋಷಕರು
Published On - 12:23 pm, Wed, 20 July 22