AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್

ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ...

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
TV9 Web
| Edited By: |

Updated on:Oct 19, 2022 | 10:22 PM

Share

ಸುಪ್ರೀಂಕೋರ್ಟ್ (Supreme Court) ಬುಧವಾರ ಮೊಬೈಲ್ ಫೋನ್ (Mobile Phone) ಮೂಲಕ ಅಹವಾಲು ಆಲಿಸಿದ್ದು ಪ್ರಕರಣದಲ್ಲಿ ಯಾವುದೇ ಪರಿಹಾರವನ್ನು ನೀಡಲು ನಿರಾಕರಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯನ್ನು ತಿರಸ್ಕರಿಸುವ ಮೊದಲು ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರ ವಿಚಾರಣೆಯನ್ನು ಆಲಿಸಿತು. ಅರ್ಜಿದಾರರು ತಮ್ಮ ಮಗಳಿಗೆ ಈ ವರ್ಷ ಪದವಿಪೂರ್ವ ವೈದ್ಯಕೀಯ ಸೀಟು ಕಲ್ಪಿಸುವಂತೆ ಕೋರಿದ್ದರು. ಆದಾಗ್ಯೂ ಅವರ ಮಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ 2022 (NEET 2002)ಗೆ ಹಾಜರಾಗಿರಲಿಲ್ಲ. ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ವರ್ಷ ಪರೀಕ್ಷೆಗೆ ಹಾಜರಾಗದಿದ್ದರೆ ನಮಗೆ ಸೀಟು ನೀಡಲು ಸಾಧ್ಯವಿಲ್ಲ, ಸೀಟು ಇಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ನ್ಯಾಯಮೂರ್ತಿ ಕೊಹ್ಲಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಮೇಡಮ್ ನಾವು ಈ ರೀತಿಯ ಪ್ರವೇಶವನ್ನು ನೀಡಲು ಸಾಧ್ಯವಿಲ್ಲ.ಆಕೆ ಪರೀಕ್ಷೆಗೆ ಹಾಜರಾಗದ ಕಾರಣ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು. ಇದಾದನಂತರ ನ್ಯಾಯಾಲಯವು ವಿಷಯವನ್ನು ವಿಲೇವಾರಿ ಮಾಡಲು ಮುಂದಾಯಿತು. ಅದೇ ವೇಳೆ ನೀಟ್ ಪರೀಕ್ಷೆಗೆ ಹಾಜರಾದ ನಂತರ ನಂತರ ಸುಪ್ರೀಂಕೋರ್ಟ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಿತು.

Published On - 10:17 pm, Wed, 19 October 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್