AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಏಕರೂಪ ಐಸಿಯು ನಿಯಮಾವಳಿ ಜಾರಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ

ದೇಶಾದ್ಯಂತ ಇರುವ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕಗಳ (ಐಸಿಯು) ಭದ್ರತಾ ನಿಯಮಾವಳಿಗಳು ಹಾಗೂ ದಾಖಲಾತಿ ಮಾರ್ಗದರ್ಶಿ ಸೂತ್ರಗಳನ್ನು ಏಕರೂಪವಾಗಿ ರೂಪಿಸುವ ಮತ್ತು ಜಾರಿಗೊಳಿಸುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು. ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಆರ್‌ ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಈ ಮೊದಲು ಮೇ 20ರಂದು ಈ ಬಗ್ಗೆ ವಿಚಾರಣೆ ನಡೆಸಿ, ಇಂದಿಗೆ ವಿಚಾರಣೆಯನ್ನು ಮುಂದೂಡಲಾಗಿತ್ತು.

ಭಾರತದಲ್ಲಿ ಏಕರೂಪ ಐಸಿಯು ನಿಯಮಾವಳಿ ಜಾರಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ
ಐಸಿಯುImage Credit source: Getty Images
ಸುಷ್ಮಾ ಚಕ್ರೆ
|

Updated on:Sep 21, 2026 | 7:45 PM

Share

ನವದೆಹಲಿ, ಸೆಪ್ಟೆಂಬರ್ 21: ದೇಶದಾದ್ಯಂತ ಇರುವ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕಗಳ (ಐಸಿಯು) ನಿರ್ವಹಣೆ, ಕನಿಷ್ಠ ಸೌಲಭ್ಯಗಳು ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಏಕರೂಪದ ಮಾನದಂಡಗಳನ್ನು ರೂಪಿಸುವುದು ಹಾಗೂ ಜಾರಿಗೊಳಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಆರ್‌. ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠವು ಈ ಪ್ರಮುಖ ಪ್ರಕರಣದ ವಿಚಾರಣೆ ನಡೆಸಿತು. ದೇಶದ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಐಸಿಯು ವ್ಯವಸ್ಥೆಯಲ್ಲಿ ಮೂಲಸೌಕರ್ಯ, ವೈದ್ಯಕೀಯ ಸಿಬ್ಬಂದಿ, ವೆಂಟಿಲೇಟರ್, ಆಮ್ಲಜನಕ ಸೌಲಭ್ಯ ಹಾಗೂ ಭದ್ರತಾ ನಿಯಮಗಳಲ್ಲಿ ಅಪಾರ ಭಿನ್ನತೆಗಳಿದ್ದು, ಇದು ರೋಗಿಗಳ ಪ್ರಾಣಕ್ಕೆ ಕಂಟಕವಾಗುತ್ತಿದೆ ಎಂಬ ಅರ್ಜಿಯ ಆಧಾರದ ಮೇಲೆ ಈ ವಿಚಾರಣೆ ನಡೆಯುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ:

ದೇಶದ ಪ್ರತಿಯೊಂದು ಆಸ್ಪತ್ರೆಯ ಐಸಿಯು ಘಟಕದಲ್ಲೂ ಅನುಸರಿಸಬೇಕಾದ ವೈದ್ಯಕೀಯ ಗುಣಮಟ್ಟ, ನೈರ್ಮಲ್ಯ ಹಾಗೂ ತಾಂತ್ರಿಕ ಮಾನದಂಡಗಳನ್ನು ನಿಗದಿಪಡಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಮಂಡಳಿಗೆ ಸೂಕ್ತ ನಿರ್ದೇಶನ ನೀಡಲು ಕೋರ್ಟ್ ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಅಸ್ತು

ತುರ್ತು ನಿಗಾ ಸೇವೆಗಳ ಸಂಘಟನೆ ಮತ್ತು ವಿತರಣೆಗೆ ಸಂಬಂಧಿಸಿದ ಮಾರ್ಗದರ್ಶಿ ಸೂತ್ರಗಳು ಹಾಗೂ ಅನುಷ್ಠಾನದ ಕಾಲಮಿತಿಯ ಕುರಿತು ಸಮಿತಿಯು ಸಿದ್ಧಪಡಿಸಿದ ಪ್ರಸ್ತಾಪವನ್ನು ನಮ್ಮ ಮುಂದೆ ಇಡಲಾಗಿದೆ. ಸೂಚಿಸಲಾದ 12 ತಿಂಗಳವರೆಗಿನ ಕಾಲಮಿತಿಗೆ ನಾವು ಒಪ್ಪಿಗೆ ನೀಡುತ್ತಿದ್ದೇವೆ. ಆದರೆ, ಸಂಪೂರ್ಣ ಪಾಲನೆಗಾಗಿ ಈ ಅವಧಿಯನ್ನು 9 ತಿಂಗಳಿಗೆ ಇಳಿಸಿ ಬದಲಾಯಿಸಲಾಗಿದೆ. ಅದರಂತೆ, ‘ಹಂತ-1ರ ಐಸಿಯು’ಗೆ ಅಗತ್ಯವಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮೇಲ್ಕಂಡ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಕೋರ್ಟ್ ಹೇಳಿದೆ.

ಈ ಕುರಿತಾದ ಸ್ಟೇಟಸ್ ರಿಪೋರ್ಟ್ ಅನ್ನು ಹೊಸ  ಅಪ್‌ಡೇಟ್‌ಗಳೊಂದಿಗೆ ನವೆಂಬರ್ 5ರೊಳಗೆ ಈ ನ್ಯಾಯಾಲಯಕ್ಕೆ ಸಲ್ಲಿಸತಕ್ಕದ್ದು. ಜೊತೆಗೆ ಇದರ ಒಂದು ಪ್ರತಿಯನ್ನು ಸಮಿತಿಗೆ ನೀಡಬೇಕು ಹಾಗೂ ಸಮಿತಿಯು ಅದರ ಬಗ್ಗೆ ತನ್ನ ಅಭಿಪ್ರಾಯ/ಟಿಪ್ಪಣಿಯನ್ನು ಸಲ್ಲಿಸಬೇಕು. ಐಸಿಯುಗಳನ್ನು ಪರಿಣಾಮಕಾರಿಯಾಗಿ ನಡೆಸಲು ಅಗತ್ಯವಿರುವ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಬೇಕು. ಈ ಪ್ರಕ್ರಿಯೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕು. ಸೂಚಿಸಲಾದ ಕಾಲಮಿತಿಯನ್ನು ಸರ್ಕಾರಗಳು, ಮುಖ್ಯವಾಗಿ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಖಾಸಗಿ ಆಸ್ಪತ್ರೆಗಳ ದರ ಹಾಗೂ ನಿಯಂತ್ರಣ:

ಐಸಿಯು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ವಿಧಿಸುವ ಅತಿಯಾದ ಶುಲ್ಕ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಕಳವಳ ವ್ಯಕ್ತಪಡಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಾರದರ್ಶಕ ನಿಯಮಾವಳಿಗಳು ಪ್ರತಿಯೊಂದು ಆಸ್ಪತ್ರೆಯಲ್ಲೂ ಕಡ್ಡಾಯವಾಗಬೇಕು ಎಂದು ಕೋರಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ವೈದ್ಯಕೀಯ ಮಂಡಳಿಗಳ ನಿಲುವನ್ನು ಆಲಿಸಿದ ನ್ಯಾಯಪೀಠವು, ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಕುರಿತು ನಿರ್ದೇಶನ ನೀಡಲು ವಿಚಾರಣೆಯನ್ನು ಮುಂದೂಡಿದೆ.

ಇದನ್ನೂ ಓದಿ: ರಾಮಮಂದಿರ ದೇಣಿಗೆ ಕಳ್ಳತನದ ಎಲ್ಲ ಆರೋಪಿಗಳ ಗುರುತು ಪತ್ತೆ; ಸುಪ್ರೀಂ ಕೋರ್ಟ್‌ಗೆ ಎಸ್‍ಐಟಿ ಮಾಹಿತಿ

ಈಗಾಗಲೇ ರಾಜ್ಯಗಳು ಹಾಗೂ ಕೋರ್ಟ್ ರಚಿತ ಸಮಿತಿಯ ನಡುವಿನ ಒಮ್ಮತದ ಮೂಲಕ ರೂಪಿಸಲಾದ 3 ಹಂತದ ಐಸಿಯು ಮಾದರಿಗೆ ನ್ಯಾಯಾಲಯವು ಅನುಮೋದನೆ ನೀಡಿದೆ. ಈ ಚೌಕಟ್ಟು ಕನಿಷ್ಠ ಐಸಿಯು ಅಗತ್ಯತೆಗಳ ಮೂಲಸೌಕರ್ಯವನ್ನು ಒದಗಿಸುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅದಕ್ಕೆ ತಕ್ಕಂತೆ ಇಲ್ಲದಿರುವ ಆರೋಗ್ಯ ಮೂಲಸೌಕರ್ಯಗಳ ನಡುವಿನ ಅಂತರವನ್ನು ಉಲ್ಲೇಖಿಸಿದ ಪೀಠವು, ಭಾರತವು ಪ್ರಸ್ತುತ ಭಯಾನಕ ಪರಿಸ್ಥಿತಿಯಲ್ಲಿದೆ ಮತ್ತು ತುರ್ತು ನಿಗಾ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಈಡೇರಿಸಲು ವ್ಯವಸ್ಥೆಯು ಹೆಣಗಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಮೇ 20ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಎಲ್ಲಾ ರಾಜ್ಯಗಳು ಮುಂಬರುವ 2 ತಿಂಗಳೊಳಗೆ ತಮ್ಮ ಐಸಿಯು ಮೂಲಸೌಕರ್ಯಗಳ ಕೊರತೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಕನಿಷ್ಠ ‘ಹಂತ-1 ಐಸಿಯು’ ಮಾನದಂಡಗಳನ್ನು ಜಾರಿಗೆ ತರಲು ರಾಜ್ಯಗಳು ತಕ್ಷಣವೇ ಕಾರ್ಯಸೂಚಿಯನ್ನು ರೂಪಿಸಬೇಕು. ತುರ್ತು ಸಂದರ್ಭಗಳಲ್ಲಿ ಸ್ಥಳೀಯ ಜನರಿಗೆ ಕನಿಷ್ಠ ‘ಹಂತ-1’ ಐಸಿಯು ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಐಸಿಯು ಮೂಲಸೌಕರ್ಯ ಅಭಿವೃದ್ಧಿಗಾಗಿ ಸಿಎಸ್‌ಆರ್ ಹಾಗೂ ಎನ್‌ಜಿಒ ನಿಧಿಯನ್ನು ಪ್ರತ್ಯೇಕ ಖಾತೆಯಲ್ಲಿ ನಿರ್ವಹಿಸಿ ಬಳಸಿಕೊಳ್ಳಬೇಕು. ವೆಂಟಿಲೇಟರ್ ಹಾಗೂ ತರಬೇತಿ ಪಡೆದ ಸಿಬ್ಬಂದಿ ಹೊಂದಿರುವ ಮಾನಕೀಕೃತ ಆಂಬ್ಯುಲೆನ್ಸ್‌ಗಳ ಕಾರ್ಯಸಾಧ್ಯತೆಯ ಅಧ್ಯಯನ ನಡೆಸಬೇಕು ಮತ್ತು ಪ್ರತಿಯೊಂದು ರಾಜ್ಯದಲ್ಲೂ ಕನಿಷ್ಠ 5 ಇಂತಹ ತುರ್ತು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು. ದೇಶಾದ್ಯಂತ ಆಸ್ಪತ್ರೆಗಳು ಹಾಗೂ ಐಸಿಯು ಸೌಲಭ್ಯಗಳನ್ನು ಟ್ರ್ಯಾಕ್ ಮಾಡಲು ಕೇಂದ್ರ ಸರ್ಕಾರವು ಜಿಪಿಎಸ್ (GPS) ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಆದೇಶ ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Mon, 21 September 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ