ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಎಸ್ಐಟಿ ತನಿಖೆಗೆ ಮನವಿ; ಕೇಂದ್ರ, ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

Post Poll Violence: ಕಳೆದ ವಾರ ಪಶ್ಚಿಮ ಬಂಗಾಳ ಸರ್ಕಾರವು ಜೂನ್ 18 ರ ಆದೇಶವನ್ನು ಹಿಂಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.ಇದರಲ್ಲಿ ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ಚುನಾವಣೋತ್ತರ ಹಿಂಸಾಚಾರದ ಸಮಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂಬ ಆರೋಪಗಳ ಬಗ್ಗೆ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಎನ್‌ಎಚ್‌ಆರ್‌ಸಿ ಅಧ್ಯಕ್ಷರಿಗೆ ನಿರ್ದೇಶಿಸಿತ್ತು.

ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಎಸ್ಐಟಿ ತನಿಖೆಗೆ ಮನವಿ; ಕೇಂದ್ರ, ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್
ಸುಪ್ರೀಂ​ ಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 01, 2021 | 4:27 PM

ದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಕಾರಣಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯ ಮೇರೆಗೆ ಕೇಂದ್ರ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಗುರುವಾರ ನೋಟಿಸ್ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ವಿನೀತ್ ಸರನ್ ನೇತೃತ್ವದ ನ್ಯಾಯಪೀಠವು ಚುನಾವಣೋತ್ತರ ಹಿಂಸಾಚಾರ ಬಗ್ಗೆ ಎಸ್‌ಐಟಿ ತನಿಖೆ ನಡೆಸುವಂತೆ ನಿರ್ದೇಶನ ಕೋರಿ ವಕೀಲ ಹರಿಶಂಕರ್ ಜೈನ್ ಅವರ ಮನವಿಯನ್ನು ಆಲಿಸಿತ್ತು. ಏತನ್ಮಧ್ಯೆ, ಹಿಂಸಾಚಾರದಿಂದಾಗಿ ಜನರನ್ನು ಸ್ಥಳಾಂತರಿಸುವ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಕಲ್ಕತ್ತಾ ಹೈಕೋರ್ಟ್‌ಗೆ ಸಂಕ್ಷಿಪ್ತ ವರದಿಯನ್ನು ಸಲ್ಲಿಸಿದೆ ಎಂದು ಲೈವ್ ಲಾ ಬುಧವಾರ ವರದಿ ಮಾಡಿದೆ. ವರದಿಯನ್ನು ಪರಿಶೀಲಿಸಲು ನ್ಯಾಯಾಲಯ ಈ ವಿಷಯವನ್ನು ಜುಲೈ 2 ಕ್ಕೆ ಮುಂದೂಡಿದೆ.

ಕಳೆದ ವಾರ ಪಶ್ಚಿಮ ಬಂಗಾಳ ಸರ್ಕಾರವು ಜೂನ್ 18 ರ ಆದೇಶವನ್ನು ಹಿಂಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.ಇದರಲ್ಲಿ ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ಚುನಾವಣೋತ್ತರ ಹಿಂಸಾಚಾರದ ಸಮಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂಬ ಆರೋಪಗಳ ಬಗ್ಗೆ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಎನ್‌ಎಚ್‌ಆರ್‌ಸಿ ಅಧ್ಯಕ್ಷರಿಗೆ ನಿರ್ದೇಶಿಸಿತ್ತು.

ನ್ಯಾಯಾಲಯದ ಆದೇಶಗಳನ್ನು ಅನುಸರಿಸಿ ಜೂನ್ 21 ರಂದು, ಎನ್ಎಚ್ಆರ್ಸಿ ಅಧ್ಯಕ್ಷ ನ್ಯಾಯಮೂರ್ತಿ (ನಿವೃತ್ತ) ಅರುಣ್ ಮಿಶ್ರಾ ಅವರು ಮಾಜಿ ಗುಪ್ತಚರ ಬ್ಯೂರೋ ಮುಖ್ಯಸ್ಥ ರಾಜೀವ್ ಜೈನ್ ನೇತೃತ್ವದ ಸಮಿತಿಯನ್ನು ರಚಿಸಿದ್ದರು. ಆದರೆ, ಎನ್‌ಎಚ್‌ಆರ್‌ಸಿ ತಂಡವು ಮಂಗಳವಾರ ಮಧ್ಯಾಹ್ನ ಜಾದವ್‌ಪುರದಲ್ಲಿ ರೇಗಿಸುವ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಎದುರಿಸಿದೆ ಎಂದು ವರದಿಯಾಗಿದೆ. ತಂಡದಲ್ಲಿದ್ದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಅತೀಫ್ ರಶೀದ್, ಜನಸಮೂಹವೊಂದು ಅವರನ್ನು ಬೆನ್ನಟ್ಟಲು ಯತ್ನಿಸಿದೆ. ಅವರೊಂದಿಗೆ ಬಂದ ಪೊಲೀಸ್ ಸಿಬ್ಬಂದಿ ಯಾವುದೇ ಸಹಾಯವನ್ನು ನೀಡಿಲ್ಲ ಎಂದು ಹೇಳಿದರು.

ಮೇ ತಿಂಗಳಲ್ಲಿ, ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ.ಆರ್. ಗವಾಯಿ ಅವರ ರಜಾ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಗೆ ನೋಟಿಸ್ ನೀಡಿತ್ತು. ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರವನ್ನು ತಡೆಯಲು ಸುಪ್ರೀಂಕೋರ್ಟ್ ಹಸ್ತಕ್ಷೇಪ ಕೋರಿದ್ದು, ಆಪಾದಿತ ಅಪರಾಧಗಳ ಬಗ್ಗೆ ಎಸ್‌ಐಟಿ ತನಿಖೆ ಮತ್ತು ಹೊಣೆಗಾರಿಕೆಯನ್ನು ಸರಿಪಡಿಸಲು ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಹಿಂಸಾಚಾರದ ಬಗ್ಗೆ ಆರೋಪಗಳು “ಸುಳ್ಳು” ಮತ್ತು ದಾರಿತಪ್ಪಿಸುವಂತವುಗಳು ಎಂದು ಟಿಎಂಸಿ ಸರ್ಕಾರ ನ್ಯಾಯಾಲಯದಲ್ಲಿ ಹೇಳಿದೆ.

ಎಲ್ಲಾ ಹಿಂಸಾಚಾರದ ಘಟನೆಗಳನ್ನು ಚುನಾವಣೋತ್ತರ ಹಿಂಸಾಚಾರ ಎಂದು ವರ್ಗೀಕರಿಸಲಾಗುವುದಿಲ್ಲ. ರಾಜ್ಯ ಪ್ರಾಯೋಜಿತ ಹಿಂಸಾಚಾರದ ಆರೋಪಗಳು “ಕ್ಷುಲ್ಲಕ ಮತ್ತು ರಾಜಕೀಯ ಪ್ರೇರಿತ” ಎಂದು ಬಂಗಾಳ ಸರ್ಕಾರ ಹೇಳಿದೆ.

ಇದನ್ನೂ ಓದಿ:  ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಎನ್‌ಎಚ್‌ಆರ್‌ಸಿ ತನಿಖೆ: ಬಂಗಾಳ ಸರ್ಕಾರದ ಮನವಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಇದನ್ನೂ ಓದಿ: ಚುನಾವಣೋತ್ತರ ಹಿಂಸಾಚಾರ ದೂರುಗಳ ಬಗ್ಗೆ ಮಾನವ ಹಕ್ಕುಗಳ ಆಯೋಗ ಪರಿಶೀಲಿಸಬೇಕು ಎಂಬ ಆದೇಶ ಹಿಂಪಡೆಯುವಂತೆ ಕಲ್ಕತ್ತಾ ಹೈಕೋರ್ಟ್ ಮೊರೆ ಹೋದ ಬಂಗಾಳ ಸರ್ಕಾರ

(Supreme Court issued notice to the Centre West Bengal government EC over plea seeking SIT investigation of Post-poll violence)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ