AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​

ಸನಾತನ ಧರ್ಮದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​
ಉದಯನಿಧಿ ಸ್ಟಾಲಿನ್
ನಯನಾ ರಾಜೀವ್
|

Updated on:Sep 22, 2023 | 2:03 PM

Share

ಸನಾತನ ಧರ್ಮ(Sanatana Dharma) ದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು.

ಮದ್ರಾಸ್ ಹೈಕೋರ್ಟ್​ನ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಎಂ ಪುತ್ರ ಉದಯನಿಧಿ ವಿರುದ್ಧ ಎಫ್​ಐಆರ್ ದಾಖಲಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಡಿಸ್ ಜಾರಿ ಮಾಡಿದೆ. ಯಾರದೋ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವಿಚಾರ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:09 pm, Fri, 22 September 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್