ಸನಾತನ ಧರ್ಮ(Sanatana Dharma) ದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)ಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು.
ಮದ್ರಾಸ್ ಹೈಕೋರ್ಟ್ನ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಎಂ ಪುತ್ರ ಉದಯನಿಧಿ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಡಿಸ್ ಜಾರಿ ಮಾಡಿದೆ. ಯಾರದೋ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವಿಚಾರ ಇದಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:09 pm, Fri, 22 September 23