ಕುಶಿನಗರ ಮಸೀದಿ ಧ್ವಂಸ ಪ್ರಕರಣ; ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

|

Updated on: Feb 17, 2025 | 4:49 PM

ಉತ್ತರ ಪ್ರದೇಶದ ಕುಶಿನಗರ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ‘ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಏಕೆ ಪ್ರಾರಂಭಿಸಬಾರದು?’ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ನಿಷೇಧ ಹೇರಿದ ನಂತರವೂ ಮಸೀದಿ ಧ್ವಂಸಗೊಳಿಸಿದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ. ಈ ತಿಂಗಳ ಆರಂಭದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮಸೀದಿಯ ಅಕ್ರಮ ಭಾಗವನ್ನು ಬುಲ್ಡೋಜರ್ ಬಳಸಿ ಕೆಡವಿತ್ತು.

ಕುಶಿನಗರ ಮಸೀದಿ ಧ್ವಂಸ ಪ್ರಕರಣ; ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
Supreme Court
Follow us on

ನವದೆಹಲಿ: ಸುಪ್ರೀಂ ಕೋರ್ಟ್ ನಿಷೇಧ ಹೇರಿದ ನಂತರವೂ ಮಸೀದಿಯನ್ನು ಧ್ವಂಸಗೊಳಿಸಿದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಕಳುಹಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಮಸೀದಿ ಕೆಡವಿದ ಸಿಎಂ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ನಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಅಧಿಕಾರಿಗಳು ಕುಶಿನಗರದಲ್ಲಿ ಬುಲ್ಡೋಜರ್ ಕ್ರಮ ಕೈಗೊಂಡಿದ್ದರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ.

ಕುಶಿನಗರದಲ್ಲಿ ಬುಲ್ಡೋಜರ್ ಮೂಲಕ ಮಸೀದಿ ಕೆಡವಿದ್ದ ಅಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಮಸೀದಿಯನ್ನು ಕೆಡವಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್​ ನೀಡಲಾಗಿದೆ. ಮಸೀದಿ ಧ್ವಂಸಗೊಳಿಸುವ ಪ್ರಕ್ರಿಯೆ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ 2024ರ ನವೆಂಬರ್ 13ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಸುಪ್ರೀಂ ಕೋರ್ಟ್​ನ ಆ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆರೋಪ ಕೇಳಿಬಂದಿದೆ. ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈ ನೋಟಿಸ್‌ನಲ್ಲಿ ಕುಶಿನಗರದಲ್ಲಿ ಮಸೀದಿಯನ್ನು ಕೆಡವುವ ಮೂಲಕ ಉತ್ತರ ಪ್ರದೇಶ ಸರ್ಕಾರವು 2024ರ ನವೆಂಬರ್ 13ರ ತನ್ನ ಆದೇಶವನ್ನು ಉಲ್ಲಂಘಿಸಿದೆಯೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಆ ಆದೇಶದಲ್ಲಿ ಸುಪ್ರೀಂ ಕೋರ್ಟ್ ಪೂರ್ವ ಸೂಚನೆ ಇಲ್ಲದೆ ಮತ್ತು ಇತರ ಪಕ್ಷವನ್ನು ಕೇಳದೆ ಧ್ವಂಸಗೊಳಿಸುವ ಕ್ರಮವನ್ನು ನಿಷೇಧಿಸಿತ್ತು. ಕುಶಿನಗರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪ್ರಸ್ತುತ ಯಾವುದೇ ಹೆಚ್ಚಿನ ಧ್ವಂಸಗೊಳಿಸುವ ಕ್ರಮವನ್ನು ನಿಷೇಧಿಸಿದೆ.

ಇದನ್ನೂ ಓದಿ: ಇವಿಎಂ ಡೇಟಾ ಡಿಲೀಟ್ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ

ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿ, ನ್ಯಾಯಾಲಯ ನಿಂದನೆಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಕೇಳಿದೆ? ಈ ಅರ್ಜಿಯ ಕುರಿತು ಆದೇಶ ಹೊರಡಿಸುವಾಗ ಸುಪ್ರೀಂ ಕೋರ್ಟ್ ಕುಶಿನಗರ ಪ್ರಕರಣದಲ್ಲಿ ಯಾವುದೇ ಹೆಚ್ಚಿನ ಧ್ವಂಸಗೊಳಿಸುವ ಕ್ರಮವನ್ನು ನಿಷೇಧಿಸಿದೆ. ಕುಶಿನಗರ ಜಿಲ್ಲೆಯ ಮದ್ನಿ ಮಸೀದಿಯ ಒಂದು ಭಾಗವನ್ನು ಯೋಗಿ ಸರ್ಕಾರ ಕೆಡವಿದೆ. ಮಸೀದಿಯನ್ನು ಅತಿಕ್ರಮಣವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮಸೀದಿಯ ಅಕ್ರಮ ಭಾಗವನ್ನು ಬುಲ್ಡೋಜರ್ ಬಳಸಿ ಕೆಡವಿತ್ತು.

ಈ ಹಿನ್ನೆಲೆಯಲ್ಲಿ ಮದ್ನಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಉತ್ತರ ಪ್ರದೇಶ ರಾಜ್ಯದ ಕುಶಿನಗರದಲ್ಲಿ ಮದ್ನಿ ಮಸೀದಿಯ ಒಂದು ಭಾಗವನ್ನು ಧ್ವಂಸ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ