
ಉದ್ಯೋಗಾಕಾಂಕ್ಷಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು ಒದಗಿಸಿದೆ. ಒಟ್ಟು 250 ತಾತ್ಕಾಲಿಕ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (Junior Court Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್-6 ರ ಅಡಿಯಲ್ಲಿ 35,400 ರೂ. ಆರಂಭಿಕ ಮೂಲ ವೇತನ ಹಾಗೂ ಸರ್ಕಾರದ ನಿಯಮಗಳ ಪ್ರಕಾರ ಇತರ ಭತ್ಯೆಗಳು ಸಿಗಲಿವೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಷ್ಟಪಡುವ ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Degree) ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕಂಪ್ಯೂಟರ್ ಕಾರ್ಯಾಚರಣೆಯ ಮೂಲಭೂತ ಜ್ಞಾನ ಮತ್ತು ಕಂಪ್ಯೂಟರ್‌ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳ (35 wpm) ಇಂಗ್ಲಿಷ್ ಟೈಪಿಂಗ್ ವೇಗವನ್ನು ಹೊಂದಿರಬೇಕಾಗುತ್ತದೆ.
ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 1, 2026 ರ ವೇಳೆಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಬಾರದು. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ SC, ST, OBC (ನಾನ್-ಕ್ರೀಮಿ ಲೇಯರ್), ಅಂಗವಿಕಲ ವ್ಯಕ್ತಿಗಳು ಮತ್ತು ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ದೊರೆಯಲಿದೆ. ಅಲ್ಲದೆ ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತರಿಗೆ ಗರಿಷ್ಠ 5 ವರ್ಷಗಳವರೆಗೆ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರಲಿದೆ.
ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಆಯ್ಕೆ ಪ್ರಕ್ರಿಯೆಯನ್ನು ಒಟ್ಟು ನಾಲ್ಕು ಪ್ರಮುಖ ಹಂತಗಳಲ್ಲಿ ನಡೆಸಲಾಗುತ್ತದೆ:
ಇದನ್ನೂ ಓದಿ: ಎಸ್‌ಬಿಐ ನೇಮಕಾತಿ: ವಾರ್ಷಿಕ 97 ಲಕ್ಷ ರೂ.ವರೆಗೆ ವೇತನ; 207 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಾಮಾನ್ಯ ಮತ್ತು ಮೀಸಲಾತಿ ರಹಿತ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1,500ರೂ. ನಿಗದಿಪಡಿಸಲಾಗಿದೆ. SC, ST, OBC (ನಾನ್-ಕ್ರೀಮಿ ಲೇಯರ್), ಮಾಜಿ ಸೈನಿಕರು ಮತ್ತು ಅಂಗವಿಕಲ ವರ್ಗದ ಅಭ್ಯರ್ಥಿಗಳು 750ರೂ. ಪಾವತಿಸಬೇಕು. ಶುಲ್ಕವನ್ನು ಯುಕೋ ಬ್ಯಾಂಕ್ ಪಾವತಿ ಗೇಟ್‌ವೇ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಲು ಅವಕಾಶವಿದ್ದು, ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.
ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 7 ರಿಂದ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 20, ರಂದು ರಾತ್ರಿ 11:55 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ www.sci.gov.in ಮೂಲಕವೇ ಆನ್‌ಲೈನ್ ಅರ್ಜಿ ಸಲ್ಲಿಸಬೇಕು; ಅಂಚೆ ಅಥವಾ ಇನ್ಯಾವುದೇ ಮಾರ್ಗಗಳಲ್ಲಿ ಕಳುಹಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ