ಸುಪ್ರೀಂಕೋರ್ಟ್‌ಗೆ ಕರ್ನಾಟಕದವರು ಸೇರಿ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ಕೊನೆಗೂ ತಾರ್ಕಿಕ ಅಂತ್ಯ ಕಂಡಿದ್ದು, ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅಂಗೀಕರಿಸಿತ್ತು.
ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟ್ನಾ ಹೈಕೋರ್ಟ್ ಸಿಜೆ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಸಿಜೆ ಪಿವಿ ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಮುಂಬಡ್ತಿ ಪಡೆದಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Fri, 10 February 23