ಸಿಬಿಎಸ್​ಇ, ಐಎಸ್​ಸಿಇ 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂಕೋರ್ಟ್

CBSE, CISCE Class XII Exams:  ಮೌಲ್ಯಮಾಪನಕ್ಕಾಗಿ ಎರಡೂ ಸಂಸ್ಥೆಗಳು ರೂಪಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ಎಲ್ಲ ಅರ್ಜಿಗಳನ್ನೂ ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಸಿಬಿಎಸ್​ಇ, ಐಎಸ್​ಸಿಇ 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
|

Updated on: Jun 22, 2021 | 6:57 PM

ದೆಹಲಿ: ಕೊವಿಡ್ 2ನೇ ಅಲೆ ವ್ಯಾಪಿಸಿರುವ ಹಿನ್ನೆಲೆಯಲ್ಲಿ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಸೆಂಟ್ರಲ್ ಬೋರ್ಡ್ ಅಫ್ ಸೆಕಂಡರಿ ಎಜ್ಯುಕೇಶನ್ (Central Board of Secondary Education – CBSE) ಮತ್ತು ಸಿಐಸಿಎಸ್​ಇ (Council for the Indian School Certificate Examinations – CISCE) ಸಂಸ್ಥೆಗಳು ತೆಗೆದುಕೊಂಡಿದ್ದ ನಿರ್ಧಾರವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ಪರೀಕ್ಷೆ ರದ್ದತಿಯನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಮಂಗಳವಾರ ವಜಾಗೊಳಿಸಿದೆ.

ಮೌಲ್ಯಮಾಪನಕ್ಕಾಗಿ ಎರಡೂ ಸಂಸ್ಥೆಗಳು ರೂಪಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನೂ ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಸಿಬಿಎಸ್​ಇ ಮತ್ತು ಐಸಿಎಸ್​ಇ ರೂಪಿಸಿರುವ ಕ್ರಮಗಳಲ್ಲಿ ನಾವು ಮಧ್ಯಪ್ರವೇಶಿಸಬೇಕಾದ ಅಗತ್ಯವಿದೆ ಎನಿಸುತ್ತಿಲ್ಲ. ಎಲ್ಲ ವಿದ್ಯಾರ್ಥಿಗಳ ಹಿತವನ್ನು ನಾವು ಗಮನದಲ್ಲಿರಿಸಿಕೊಂಡಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಎ.ಎಂ.ಖಾನ್​ವಿಲ್ಕರ್ ಮತ್ತು ದಿನೇಶ್ ಮಾಹೇಶ್ವರಿ ಅವರಿದ್ದ ಪೀಠವು ಹೇಳಿತು.

ಪರೀಕ್ಷೆಗಳನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ನ್ಯಾಯಪೀಠವು, ಈ ಕುರಿತು ನಾವು ಪ್ರಜ್ಞಾಪೂರ್ವಕ ನಿರ್ಧಾರ ತೆಗೆದುಕೊಂಡಿದ್ದೇವೆ. ಸಾರ್ವಜನಿಕ ಹಿತವನ್ನು ಗಮನದಲ್ಲಿರಿಸಿಕೊಂಡು ಯೋಚಿಸಬೇಕಾಗಿದೆ. ಈ ವಿಚಾರದಲ್ಲಿ ಅರ್ಜಿದಾರರ ಪರ ತೀರ್ಪುಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ಐಐಟಿ, ಜೆಇಇ ಅಥವಾ ಕ್ಲಾಟ್ (IIT-JEE or CLAT) ಪರೀಕ್ಷೆಗಳು ನಡೆಯಬಹುದಾದರೆ 12ನೇ ತರಗತಿಯ ಪರೀಕ್ಷೆಗಳು ಏಕೆ ರದ್ದಾಗಬೇಕು ಎಂದು ಅನ್ಷುಲ್ ಗುಪ್ತಾ ಎಂಬುವವರು ಪ್ರಶ್ನಿಸಿದರು. ಈ ಪ್ರಶ್ನೆಗೆ ಉತ್ತರಿಸಿದ ನ್ಯಾಯಪೀಠವು, ಈ ಕುರಿತು ಆಯಾ ಮಂಡಳಿಗಳು ನಿರ್ಧಾರ ತೆಗೆದುಕೊಳ್ಳಬೇಕು. ನಾವು ಮಧ್ಯಪ್ರವೇಶಿಸಲು ಆಗುವುದಿಲ್ಲ ಎಂದು ಹೇಳಿತು.

ಪ್ರತಿ ಪರೀಕ್ಷಾ ಮಂಡಳಿಯೂ ಪ್ರತ್ಯೇಕವಾದ ಅಸ್ತಿತ್ವ ಹೊಂದಿವೆ. ಅವುಗಳ ಉದ್ದೇಶ ಮತ್ತು ಅಗತ್ಯಗಳೂ ಬೇರೆಯೇ ಆಗಿವೆ. ಈ ಕುರಿತು ಆಯಾ ಪರೀಕ್ಷಾ ಮಂಡಳಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸುವ ಸಮಸ್ಯೆಯೂ ಈ ವಿಚಾರದಲ್ಲಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮಂಡಳಿಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಪೀಠವು ಹೇಳಿತು.

‘ನಮ್ಮ ಅಭಿಪ್ರಾಯದಲ್ಲಿ ಅನ್ಷುಲ್ ಗುಪ್ತಾ ಅವರ ಅರ್ಜಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕೆಲ ಸಂಸ್ಥೆಗಳು ಪರೀಕ್ಷೆ ನಡೆಸುತ್ತಿವೆ ಎಂದ ಮಾತ್ರಕ್ಕೆ ಎಲ್ಲ ಮಂಡಳಿಗಳೂ ಪರೀಕ್ಷೆ ನಡೆಸಬೇಕು ಎಂದೇನಿಲ್ಲ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಮಂಡಳಿಗಳು ಪರೀಕ್ಷೆ ರದ್ದುಪಡಿಸಿವೆ. 13 ತಜ್ಞರ ಅಭಿಪ್ರಾಯ ಪಡೆದ ನಂತರವೇ ಸಿಬಿಎಸ್​ಇ ಪರೀಕ್ಷೆ ರದ್ದುಪಡಿಸಲು ತೀರ್ಮಾನಿಸಿದೆ’ ಎಂದು ನ್ಯಾಯಾಧೀಶರು ಹೇಳಿದರು.

ಉತ್ತರ ಪ್ರದೇಶ ಪೋಷಕರ ಒಕ್ಕೂಟದ ಪರವಾಗಿ ವಾದ ಮಂಡಿಸಿದ ವಕೀಲ ವಿಕಾಸ್ ಸಿಂಗ್, ಇಷ್ಟಪಡುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಆಯ್ಕೆಯೂ ಇರಬೇಕು. ತಮಗೆಷ್ಟು ಅಂಕ ಸಿಕ್ಕಿದೆ ಎಂದು ಅವರು ಕಾಯುವಂತಿರಬಾರದು ಎಂದು ಹೇಳಿದರು. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಈ ವಾದಕ್ಕೆ ನಾವು ಮಾನ್ಯತೆ ನೀಡಿದರೆ ಗೊಂದಲ ಹೆಚ್ಚಿಸಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟಿತು. ಜುಲೈ 31ರಂದು ಫಲಿತಾಂಶ ಘೋಷಣೆಯಾದ ನಂತರ ಸುಧಾರಣೆಯ ಪರೀಕ್ಷೆ ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿತು.

ಸರ್ಕಾರದ ಪರವಾಗಿ ನ್ಯಾಯಪೀಠದ ಎದುರು ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳ ಹಿಂದಿನ ಅಂಕಗಳಿಕೆಯನ್ನು ಪರಿಗಣಿಸುವುದು ಅತ್ಯಗತ್ಯ ಎಂದು ಹೇಳಿದರು. ಈ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿತು. ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಆಫ್​ಲೈನ್ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂಬ ಅರ್ಜಿಯನ್ನೂ ನ್ಯಾಯಾಲಯ ತಳ್ಳಿಹಾಕಿತು. ಇಂಥ ಅಭ್ಯರ್ಥಿಗಳಿಗಾಗಿ ಆಗಸ್ಟ್​ 15ರಿಂದ ಸೆಪ್ಟೆಂಬರ್ 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಫಲಿತಾಂಶಗಳೂ ಸಾಧ್ಯವಾದಷ್ಟೂ ಬೇಗನೇ ಪ್ರಕಟವಾಗಲಿವೆ. ಆಸಕ್ತರು ಇದನ್ನು ತೆಗೆದುಕೊಳ್ಳಬಹುದು ಎಂದು ನ್ಯಾಯಪೀಠವು ಹೇಳಿತು.

ಸಿಬಿಎಸ್​ಇ ಮತ್ತು ಐಸಿಎಸ್​ಇ ತೆಗೆದುಕೊಂಡಿರುವ ನಿರ್ಧಾರಗಳಲ್ಲಿ ನಾವು ಮಧ್ಯಪ್ರವೇಶಿಸುವ ಅಗತ್ವವಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ನಾವು ಎಲ್ಲ ವಿದ್ಯಾರ್ಥಿಗಳ ಗೊಂದಲವನ್ನೂ ಪರಿಗಣಿಸಿದ್ದೇವೆ. ಆದರೆ ರಿಟ್ ಅರ್ಜಿಗಳನ್ನು ವಜಾ ಮಾಡುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿತು.

(Supreme Court Junks Petition Questioning CBSE CISCE Class XII board okays evaluation schemes)

ಇದನ್ನೂ ಓದಿ: ಸಿಬಿಎಸ್​ಇ, ಐಸಿಎಸ್​ಇ ಆಡಳಿತ ಮಂಡಳಿಗಳಿಗೆ ಮೌಲ್ಯಮಾಪನ ಸೂತ್ರ ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಸೂಚನೆ

ಇದನ್ನೂ ಓದಿ: ಸಿಬಿಎಸ್​ಇ 12ನೇ ತರಗತಿ ಫಲಿತಾಂಶವು 30:30:40 ಮಾದರಿಯಲ್ಲಿರಲಿದೆ; ಸುಪ್ರೀಂಗೆ ಮಾಹಿತಿ ನೀಡಿರುವ ಬೋರ್ಡ್​

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ