ಕರ್ನಾಟಕದ 3 ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ, ರಫ್ತಿಗೆ ಸುಪ್ರೀಂ ಕೋರ್ಟ್​ ಅನುಮತಿ

| Updated By: ಸುಷ್ಮಾ ಚಕ್ರೆ

Updated on: May 20, 2022 | 1:23 PM

Iron Ore Export: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆ ಮಾಡಿದ ಕಬ್ಬಿಣದ ಅದಿರು ಮಾರಾಟದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.

ಕರ್ನಾಟಕದ 3 ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ, ರಫ್ತಿಗೆ ಸುಪ್ರೀಂ ಕೋರ್ಟ್​ ಅನುಮತಿ
ಕಬ್ಬಿಣದ ಅದಿರು ರಫ್ತು
Image Credit source: Financial Express
Follow us on

ಬೆಂಗಳೂರು: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಅಗೆದ ಕಬ್ಬಿಣದ ಅದಿರನ್ನು ರಫ್ತು (Iron Ore Export) ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ (Supreme Court) ಇಂದು ಅನುಮತಿ ನೀಡಿದೆ. ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಅಗೆದ ಕಬ್ಬಿಣದ ಅದಿರಿನ ದಾಸ್ತಾನು ಇತ್ಯಾದಿಗಳನ್ನು ಮಾರಾಟ ಮಾಡಲು ನಾವು ಮೇಲ್ಮನವಿದಾರರಿಗೆ ಅನುಮತಿ ನೀಡುತ್ತೇವೆ. ಕಬ್ಬಿಣದ ಅದಿರಿನ ಇ-ಹರಾಜಿಗೆ ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕಬ್ಬಿಣದ ಅದಿರು ಹಂಚಿಕೆಗೆ ಅನುಮತಿ ನೀಡುತ್ತಿದ್ದೇವೆ. ಕರ್ನಾಟಕದಲ್ಲಿ ಉತ್ಪಾದಿಸಲಾದ ಕಬ್ಬಿಣದ ಅದಿರನ್ನು ಭಾರತ ಸರ್ಕಾರದ ನೀತಿಗಳ ಪ್ರಕಾರ ವಿದೇಶಗಳಿಗೆ ರಫ್ತು ಮಾಡಲು ಅರ್ಜಿದಾರರಿಗೆ ಅನುಮತಿ ನೀಡಲಾಗಿದೆ ಎಂದು ತೀರ್ಪು ನೀಡಲಾಗಿದೆ.

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ತೆಗೆದುಹಾಕಿದೆ. ಹಾಗೇ ಅಧಿಕಾರಿಗಳು ವಿಧಿಸಿರುವ ಷರತ್ತುಗಳನ್ನು ಗಮನಿಸುವಂತೆ ಸಂಸ್ಥೆಗಳಿಗೆ ಸೂಚಿಸಿದೆ. ಕರ್ನಾಟಕದಿಂದ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ಸುಪ್ರೀಂ ಕೋರ್ಟ್ 2012ರಲ್ಲಿ ನಿಷೇಧಿಸಿತ್ತು. ಪರಿಸರದ ಅವನತಿಯನ್ನು ತಡೆಗಟ್ಟುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: Supreme Court judges: ಒಂದೇ ದಿನ ಸುಪ್ರೀಂ ಕೋರ್ಟ್‌ಗೆ ಇಬ್ಬರು ಜಡ್ಜ್ ಗಳ ನೇಮಕ: ಯಾರವರು, ಹಿನ್ನೆಲೆಯೇನು?

ಇದನ್ನೂ ಓದಿ
ಕಬ್ಬಿಣದ ಅದಿರು ರಫ್ತು ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ; ಸಚಿವ ಜೆ.ಸಿ.ಮಾಧುಸ್ವಾಮಿ
ತುಮಕೂರು: ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರು, ನೂರಾರು ರೈತರಿಂದ ಪ್ರತಿಭಟನೆ
ಚಾಮರಾಜನಗರ ಜಿಲ್ಲೆಯ ಕಲ್ಲು ಕ್ವಾರಿಗಳಿಗೆ ಡಿಸಿ ನೇತೃತ್ವದಲ್ಲಿ ತಜ್ಞರ ತಂಡ ಭೇಟಿ

ಕಬ್ಬಿಣದ ಅದಿರಿನ ಮಾರಾಟ ಮತ್ತು ರಫ್ತಿನ ಮೇಲಿನ ನಿರ್ಬಂಧಗಳನ್ನು ಮಿತಿಮೀರಿದ ಉಲ್ಲಂಘನೆಗಳ ಕಾರಣದಿಂದ ಹಿಂದೆಗೆದುಕೊಳ್ಳುವಂತೆ ಕೋರಿ ಗಣಿಗಾರಿಕೆ ಸಂಸ್ಥೆಗಳು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ಆದೇಶವನ್ನು ನೀಡಲಾಗಿದೆ. ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಗಣಿಗಾರಿಕೆ ಮಾಡಿದ ಕಬ್ಬಿಣದ ಅದಿರು ಮಾರಾಟದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಉತ್ಖನನ ಮಾಡಿದ ಕಬ್ಬಿಣದ ಅದಿರನ್ನು ರಫ್ತು ಮಾಡಲು ನ್ಯಾಯಾಲಯ ಅನುಮತಿ ನೀಡಿದೆ.

ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಗಣಿಗಾರಿಕೆಗೆ ಸಮತಟ್ಟಾದ ಮೈದಾನದ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. 2011ರ ಆದೇಶವನ್ನು ಸಡಿಲಿಸುವ ಅಗತ್ಯವಿದೆ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ನ್ಯಾಯಪೀಠ ಹೇಳಿದೆ. ಕಬ್ಬಿಣದ ಅದಿರಿನ ಮಾರಾಟದ ಮೇಲಿನ ನಿರ್ಬಂಧವನ್ನು ತೆಗೆದುಹಾಕಬೇಕು. ಈಗಾಗಲೇ ಹೊರತೆಗೆಯಲಾದ ಕಬ್ಬಿಣದ ಅದಿರನ್ನು ಇ-ಹರಾಜಿನ ಮಾರ್ಗವನ್ನು ತೆಗೆದುಕೊಳ್ಳದೆ ನ್ಯಾಯಾಲಯದಿಂದ ಮಾರಾಟ ಮಾಡಲು ಮತ್ತು ನೇರ ಒಪ್ಪಂದಗಳಿಗೆ ಅನುಮತಿ ನೀಡಲಾಗಿದ್ದು, ಕಬ್ಬಿಣದ ಅದಿರು ಹಂಚಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 20 May 22