ಬಡವರಿಗೆ ಮಿಡಿವ ಹೃದಯ, ಕಠಿಣ ತೀರ್ಪು ನೀಡಿ ಹೆಸರುವಾಸಿಯಾಗಿರುವ ನ್ಯಾ. ನಾಗರತ್ನ ಪರಿಚಯ ಇಲ್ಲಿದೆ

Justice BV Nagarathna: ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಸುಪ್ರೀಂಕೋರ್ಟ್ ಕೊಲಿಜಿಯಮ್ ನ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. 2027ರಲ್ಲಿ ನ್ಯಾ.ಬಿ.ವಿ.ನಾಗರತ್ನ ಅವರು ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಗಳಾಗುವ ಸಾಧ್ಯತೆ ದಟ್ಟವಾಗಿದೆ. ನ್ಯಾ.ಬಿ.ವಿ.ನಾಗರತ್ನ ಅವರ ಸಂಪೂರ್ಣ ಪರಿಚಯವನ್ನು ಇಲ್ಲಿ ನೀಡಲಾಗಿದೆ.

ಬಡವರಿಗೆ ಮಿಡಿವ ಹೃದಯ, ಕಠಿಣ ತೀರ್ಪು ನೀಡಿ ಹೆಸರುವಾಸಿಯಾಗಿರುವ ನ್ಯಾ. ನಾಗರತ್ನ ಪರಿಚಯ ಇಲ್ಲಿದೆ
ನ್ಯಾಯಮೂರ್ತಿ ಬಿ.ವಿ. ನಾಗರತ್ನ
Follow us
TV9 Web
| Updated By: shivaprasad.hs

Updated on:Aug 26, 2021 | 2:02 PM

ನವದೆಹಲಿ: ಮೂವರು ಮಹಿಳಾ ನ್ಯಾಯಮೂರ್ತಿಗಳು ಸೇರಿದಂತೆ ಒಂಬತ್ತು  ಹೊಸ ನ್ಯಾಯಾಧೀಶರನ್ನು ಗುರುವಾರ ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇಮಕಾತಿಗೆ ಸಹಿ ಹಾಕಿದ್ದಾರೆ. ಇವರಲ್ಲಿ ಕರ್ನಾಟಕ ಮೂಲದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಪ್ರಸ್ತುತ ದೇಶದ ಗಮನ ಸೆಳೆದಿದ್ದಾರೆ. ಕಾರಣ, ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿಶೇಷ ಪರಿಚಯವನ್ನು ಇಲ್ಲಿ ನೀಡಲಾಗಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ಪರಿಚಯ: ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಸುಪ್ರೀಂಕೋರ್ಟ್ ಕೊಲಿಜಿಯಮ್ ನ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್‌ ಗೆ ಹಾಲಿ ಇರುವ ಸಂಪ್ರದಾಯದ ಪ್ರಕಾರವೇ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮುಂದುವರಿದರೆ 2027 ರಲ್ಲಿ ಭಾರತದ ಪ್ರಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿ ಸ್ಥಾನವನ್ನು ನಾಗರತ್ನ ಅವರು ಅಲಂಕರಿಸಲಿದ್ದಾರೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ತಂದೆ ಶ್ರೀ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಜೂನ್ 19, 1989 ರಿಂದ ಡಿಸೆಂಬರ್ 17, 1989 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಶ್ರೀ ಇ.ಎಸ್.ವೆಂಕಟರಾಮಯ್ಯ ಕಾರ್ಯನಿರ್ವಹಿಸಿದ್ದರು. ಅಕ್ಟೋಬರ್ 30, 1962 ರಲ್ಲಿ ಜನಿಸಿದ ಬಿ.ವಿ.ನಾಗರತ್ನ ಕಾನೂನು ವಿದ್ಯಾಭ್ಯಾಸ ಪೂರ್ಣಗೊಳಿಸಿ 1987 ರಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿಕೊಂಡರು. ಸಂವಿಧಾನ, ಸೇವಾ ಕಾನೂನು, ಆಡಳಿತ, ವಾಣಿಜ್ಯ ಕಾನೂನು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.

ಹಲವು ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಇತ್ತೀಚೆಗೆ ಮಲತಾಯಿ ಮಕ್ಕಳ ನಡುವಿನ ಆಸ್ತಿ ವಿವಾದದ ತೀರ್ಪೊಂದನ್ನು ನೀಡುವಾಗ ಅನೈತಿಕ ಸಂಬಂಧದ ತಂದೆ ತಾಯಿ ಇರಬಹುದು; ಆದರೆ ಅನೈತಿಕ ಮಕ್ಕಳು ಇರಲು ಸಾಧ್ಯವಿಲ್ಲ. ಹೀಗಾಗಿ ಅನೈತಿಕ ಸಂಬಂಧಕ್ಕೆ ಜನಿಸಿದ ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲಿದೆ ಎಂದು ಮಹತ್ವದ  ತೀರ್ಪು ನೀಡಿದ್ದರು. ಶಿಕ್ಷಣಕ್ಕೆ ಸಂಬಂಧಿಸಿದಂತೆಯೂ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಲವು ಆದೇಶಗಳನ್ನು ನೀಡಿದ್ದರು. ಅದರಲ್ಲೂ ಹೆಣ್ಣುಮಕ್ಕಳ ಆರೋಗ್ಯದ ದೃಷ್ಟಿಯಿಂದ ಶುಚಿ ಯೋಜನೆ ಜಾರಿಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರು. ಹೈಕೋರ್ಟ್ ಆದೇಶದ ನಂತರ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಒದಗಿಸುವ ಯೋಜನೆಗೆ ಸರ್ಕಾರ ಹಣ ಮಂಜೂರು ಮಾಡಿದೆ.

ಕೋವಿಡ್​ನಿಂದಾಗಿ ಶಾಲೆಗಳು ಮುಚ್ಚಿರುವುದರಿಂದ ಆನ್‌ಲೈನ್‌ ಮೂಲಕ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ತಲುಪಬೇಕು. ಹೀಗಾಗಿ ಖಾಸಗಿ ಕಂಪೆನಿಗಳ ಸಿಎಸ್‌ಆರ್ ನಿಧಿಯಡಿ ಹಣ ಸಂಗ್ರಹಿಸಿ ಬಡ ಮಕ್ಕಳಿಗೂ ಉಚಿತ ಲ್ಯಾಪ್‌ಟಾಪ್‌ ಒದಗಿಸುವಂತೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸಲಹೆ ನೀಡಿದ್ದರು. ಬಡವರಿಗೂ ಆನ್‌ಲೈನ್‌ ಶಿಕ್ಷಣ ಒದಗಿಸಲು ಹೇಗೆ ಕ್ರಮ ಕೈಗೊಳ್ಳುತ್ತೀರಿ ಎಂದು ವಿವರಿಸುವಂತೆ ಸರ್ಕಾರಕ್ಕೆ ಅವರು ಸೂಚಿಸಿದ್ದರು. 9 ಮತ್ತು 10 ನೇ ತರಗತಿಗಳು ಆರಂಭವಾಗಿರುವ ಸಂದರ್ಭದಲ್ಲಿ ಮಕ್ಕಳಿಗೆ ಕೋವಿಡ್ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರು.

ಪಠ್ಯಪುಸ್ತಕವನ್ನೇ ಒದಗಿಸದೇ ತರಗತಿ ಆರಂಭಿಸಿದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಕೂಡಲೇ ಪಠ್ಯಪುಸ್ತಕ ಒದಗಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದರು. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ನ್ಯಾ.ಬಿ.ವಿ.ನಾಗರತ್ನ ಎಸ್ಎಸ್‌ಎಲ್‌ಸಿ ಪರೀಕ್ಷೆಗೂ ಗ್ರೀನ್ ಸಿಗ್ನಲ್ ನೀಡಿದ್ದರು. ಬೋರ್ಡ್ ಪರೀಕ್ಷೆ ಬರೆಯದಿದ್ದರೇ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದ್ದ ರು. ಕೋವಿಡ್ ನಡುವೆಯೂ ಕಳೆದ ವರ್ಷ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ರವರೊಂದಿಗೆ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿಯಾಗಿ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸಲು ಸರ್ಕಾರ ಬಿಬಿಎಂಪಿಗೆ ಸಾಲು ಸಾಲು ನಿರ್ದೇಶನಗಳನ್ನು ನೀಡಿದ್ದರು.

ಈ ಹಿಂದೆ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಬಗ್ಗೆಯೂ ಪಿಐಎಲ್‌ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್‌.ಕುಮಾರ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಬಿಬಿಎಂಪಿ ಗೆ ಸಾಲು ಸಾಲು ನಿರ್ದೇಶನಗಳನ್ನು ನೀಡಿದ್ದರು. ಅಲ್ಲದೇ ತ್ಯಾಜ್ಯ ವಿಲೇವಾರಿ ಘಟಕಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದರು. ಹೀಗೆ ಜನಪರ ಕಾಳಜಿ ಕಾನೂನಿನ ಅಪಾರ ಜ್ಞಾನ ಹೊಂದಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾದರೆ, ಕರ್ನಾಟಕ ಹಾಗೂ ದೇಶದ ಜನತೆ ಹೆಮ್ಮೆ ಪಡುವ ವಿಷಯವಾಗಲಿದೆ.

ಇದನ್ನೂ ಓದಿ:

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗಾಗಿ ಇ-ಶ್ರಮ್ ಪೋರ್ಟಲ್: ಸರ್ಕಾರಿ ಯೋಜನೆಗಳನ್ನು ಒದಗಿಸಲು ಮಹತ್ವದ ಕ್ರಮ

(Supreme Court new Judge Justice BV Nagarthna complete details and profile)

Published On - 1:50 pm, Thu, 26 August 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ