AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅರ್ಜಿ; 20 ಬಂಡಾಯ ಸಂಸದರ ಅನರ್ಹತೆ ಕುರಿತು ಸುಪ್ರೀಂ ಕೋರ್ಟ್ ನೋಟಿಸ್

ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭಾ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಪಕ್ಷದ 20 ಬಂಡಾಯ ಸಂಸದರಿಗೆ ನೋಟಿಸ್ ಜಾರಿ ಮಾಡಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಬಳಿ ಬಾಕಿ ಇರುವ ಅನರ್ಹತಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಕೋರಿ ಅಭಿಷೇಕ್ ಬ್ಯಾನರ್ಜಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪ್ರಮುಖ ಪ್ರತಿವಾದಿಯನ್ನಾಗಿ ಮಾಡಲಾಗಿದ್ದರೂ, ಸುಪ್ರೀಂ ಕೋರ್ಟ್ ಅವರಿಗೆ ಪ್ರತ್ಯೇಕ ನೋಟಿಸ್ ಜಾರಿಗೊಳಿಸಿಲ್ಲ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅರ್ಜಿ; 20 ಬಂಡಾಯ ಸಂಸದರ ಅನರ್ಹತೆ ಕುರಿತು ಸುಪ್ರೀಂ ಕೋರ್ಟ್ ನೋಟಿಸ್
Abhishek Banerjee With Mamata BanerjeeImage Credit source: PTI
ಸುಷ್ಮಾ ಚಕ್ರೆ
|

Updated on: Aug 25, 2026 | 5:37 PM

Share

ನವದೆಹಲಿ, ಆಗಸ್ಟ್ 25: ತೃಣಮೂಲ ಕಾಂಗ್ರೆಸ್ (TMC) ತೊರೆದು ಇತರ ಪಕ್ಷಗಳನ್ನು ಸೇರಿರುವ 20 ಶಾಸಕರು ಮತ್ತು ಸಂಸದರ ವಿರುದ್ಧ ಸಲ್ಲಿಕೆಯಾಗಿರುವ ಅನರ್ಹತಾ ಅರ್ಜಿಗಳನ್ನು ನಿರ್ದಿಷ್ಟ ಸಮಯಮಿತಿಯೊಳಗೆ ವಿಲೇವಾರಿ ಮಾಡುವಂತೆ ಕೋರಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ (Abhishek Banerjee) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ನೋಟಿಸ್ ಜಾರಿ ಮಾಡಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ಅನರ್ಹತಾ ಅರ್ಜಿಗಳ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಈ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿದೆ. ಆದರೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಚಿವಾಲಯದ ಪರವಾಗಿ ಪ್ರತಿನಿಧಿಸುತ್ತಿರುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕಚೇರಿ ಹಾಗೂ ಲೋಕಸಭೆಯ ಮಹ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸುವುದನ್ನು ನ್ಯಾಯಾಲಯ ನಿರಾಕರಿಸಿದೆ.

ಇದನ್ನೂ ಓದಿ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ; ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಅರೆಸ್ಟ್ ವಾರಂಟ್ ಜಾರಿ

ಏನಿದು ಪ್ರಕರಣ?:

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಅರ್ಜಿಯಲ್ಲಿ ಸಯಾನಿ ಘೋಷ್, ಕಾಕೋಲಿ ಘೋಷ್ ದಸ್ತಿದಾರ್, ಸುದೀಪ್ ಬಂಡೋಪಾಧ್ಯಾಯ, ಶತಾಬ್ದಿ ರಾಯ್, ಪ್ರಸನ್ ಬ್ಯಾನರ್ಜಿ, ಅರೂಪ್ ಚಕ್ರವರ್ತಿ, ದೀಪಕ್ ದೇವ್ ಅಧಿಕಾರಿ ಮತ್ತು ಯೂಸುಫ್ ಪಠಾಣ್ ಸೇರಿದಂತೆ 20 ಬಂಡಾಯ ಸಂಸದರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಈ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಟಿಕೆಟ್‌ನಿಂದ ಗೆದ್ದು ಬಂದಿದ್ದ ಈ ನಾಯಕರು, ಮೇ ತಿಂಗಳಲ್ಲಿ ಫಲಿತಾಂಶ ಬಂದ ತಕ್ಷಣವೇ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಎಂಬ ಪಕ್ಷದ ಜೊತೆ ವಿಲೀನಗೊಂಡಿದ್ದರು. ಸಂಸತ್ತಿನಲ್ಲಿ ಪ್ರತ್ಯೇಕ ಗುಂಪಾಗಿ ಗುರುತಿಸಿಕೊಳ್ಳಲು ಕೋರಿದ್ದ ಇವರಿಗೆ, ಇತ್ತೀಚೆಗೆ ನಡೆದ ಮುಂಗಾರು ಅಧಿವೇಶನದಲ್ಲಿ ಪ್ರತ್ಯೇಕ ಆಸನಗಳನ್ನು ಕಲ್ಪಿಸಲಾಗಿತ್ತು.

ಇದನ್ನೂ ಓದಿ: ಟಿಎಂಸಿ ಬಂಡಾಯ ಸಂಸದರಿಗೂ ಆಹ್ವಾನ ವಿರೋಧಿಸಿ ಸರ್ವಪಕ್ಷ ಸಭೆಯಿಂದ ಹೊರನಡೆದ ವಿರೋಧ ಪಕ್ಷಗಳು

ಸಂಸದರು ತಮ್ಮ ಪಕ್ಷದ ಚಿಹ್ನೆಯಡಿಯಲ್ಲಿ ಆಯ್ಕೆಯಾಗಿದ್ದು, ಮತ್ತೊಂದು ರಾಜಕೀಯ ಒಕ್ಕೂಟದೊಂದಿಗೆ ಕೈಜೋಡಿಸಿರುವುದು ಸ್ವಯಂಪ್ರೇರಿತವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಂತಾಗುತ್ತದೆ; ಹೀಗಾಗಿ ಪಕ್ಷಾಂತರ ನಿಗ್ರಹ ಕಾಯ್ದೆಯಡಿ ಅವರು ಅನರ್ಹತೆಗೆ ಅರ್ಹರಾಗುತ್ತಾರೆ ಎಂದು ಟಿಎಂಸಿ ವಾದಿಸಿದೆ. ಆದರೆ, ತಮ್ಮ ನಡೆ ಸಿಂಧುವಾದ ವಿಲೀನವಾಗಿದೆ ಎಂದು ಬಂಡಾಯ ಸಂಸದರ ಬಣ ಪ್ರತಿಪಾದಿಸಿದೆ.

ಪಕ್ಷಾಂತರ ನಿಗ್ರಹ ಕಾಯ್ದೆ ಅಡಿಯಲ್ಲಿ ಇವರನ್ನು ಅನರ್ಹಗೊಳಿಸಬೇಕೆಂದು ಟಿಎಂಸಿ ಪಟ್ಟು ಹಿಡಿದಿದೆ. ಅಭಿಷೇಕ್ ಬ್ಯಾನರ್ಜಿ ಅವರು ಈ ಮುಂಚೆಯೇ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿ ತಕ್ಷಣವೇ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಈ ಸಂಬಂಧ ಜುಲೈ 27ರಂದು ಮತ್ತೊಮ್ಮೆ ಮನವಿ ಮಾಡಿದ್ದ ಅಭಿಷೇಕ್ ಬ್ಯಾನರ್ಜಿ, ಆಗಸ್ಟ್ 12ರಂದು ಸಭಾಪತಿಯನ್ನು ಭೇಟಿಯಾಗಿ ಚರ್ಚಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ