ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್

| Updated By: ರಶ್ಮಿ ಕಲ್ಲಕಟ್ಟ

Updated on: Nov 22, 2022 | 10:31 PM

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
Follow us on

ಸುಪ್ರೀಂಕೋರ್ಟ್‌ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರು ಬಳಸಬಹುದಾದ ಆನ್‌ಲೈನ್ ಪೋರ್ಟಲ್ ಅನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಾರಂಭಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. registry.sci.gov.in/rti_app ಎಂಬ ಪೋರ್ಟಲ್ ಭಾರತೀಯ ನಾಗರಿಕರು ಆರ್‌ಟಿಐ ಅರ್ಜಿ ಸಲ್ಲಿಸಲು, ಮೊದಲ ಮನವಿ ಸಲ್ಲಿಸಲು ಮತ್ತು ಆರ್‌ಟಿಐ ಕಾಯ್ದೆಯಡಿ ಶುಲ್ಕಗಳು, ಇತರ ಶುಲ್ಕಗಳು ಇತ್ಯಾದಿಗಳಿಗೆ ಪಾವತಿ ಮಾಡಲು ಮಾತ್ರ ಬಳಸಬಹುದು.ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಪೋರ್ಟಲ್ ಪ್ರಾರಂಭವಾಗುವವರೆಗೆ ಸುಪ್ರೀಂಕೋರ್ಟ್‌ಗೆ ಆರ್‌ಟಿಐ ಅರ್ಜಿಗಳನ್ನು ನೇರವಾಗಿ ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬೇಕಾಗಿತ್ತು. ಆನ್‌ಲೈನ್ ಆರ್‌ಟಿಐ ಪೋರ್ಟಲ್‌ಗಾಗಿ ಸುಪ್ರೀಂಕೋರ್ಟ್‌ಗೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಹೇಳಿತ್ತು.