AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರ ಜನವರಿಯೊಳಗೆ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ಮಹಾರಾಷ್ಟ್ರ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು 2026ರ ಜನವರಿ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಹಾರಾಷ್ಟ್ರವನ್ನು ಪ್ರತಿನಿಧಿಸುವ ವಕೀಲರು ಈ ಪ್ರಕ್ರಿಯೆಯು ಮುಂದುವರೆದಿದೆ ಎಂದು ಹೇಳಿದರು. ರಾಜ್ಯ ಚುನಾವಣಾ ಆಯೋಗವು ಸ್ವಲ್ಪ ಹೆಚ್ಚುವರಿ ಸಮಯವನ್ನು ಕೋರುತ್ತಿದೆ, ಈ ನಿಟ್ಟಿನಲ್ಲಿ ಮಧ್ಯಂತರ ಅರ್ಜಿಯನ್ನು ಸಹ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

2026ರ ಜನವರಿಯೊಳಗೆ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ
Supreme Court
ಸುಷ್ಮಾ ಚಕ್ರೆ
|

Updated on: Sep 16, 2025 | 4:05 PM

Share

ಮುಂಬೈ, ಸೆಪ್ಟೆಂಬರ್ 16: ಮಹಾರಾಷ್ಟ್ರ ಸರ್ಕಾರ (Maharashtra Government) ಮತ್ತು ರಾಜ್ಯ ಚುನಾವಣಾ ಆಯೋಗವು (Election Commission) ಜನವರಿ 31, 2026ರೊಳಗೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶಿಸಿದೆ. ಹಾಗೇ, ಅಕ್ಟೋಬರ್ 10ರೊಳಗೆ ಸೀಮಾ ನಿರ್ಣಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ (Supreme Court) ಮಹಾರಾಷ್ಟ್ರದ ಅಧಿಕಾರಿಗಳಿಗೆ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಆದೇಶವನ್ನು ಅಂಗೀಕರಿಸಿದೆ.

“ಯಾವುದೇ ಲಾಜಿಸ್ಟಿಕ್ ನೆರವಿನ ಅಗತ್ಯವಿದ್ದರೆ, ಅಕ್ಟೋಬರ್ 31ರ ಮೊದಲು ಅರ್ಜಿ ಸಲ್ಲಿಸಬೇಕು. ನಂತರ ಯಾವುದೇ ಮನವಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೇ 6ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 4 ವಾರಗಳಲ್ಲಿ ಘೋಷಿಸಿ 4 ತಿಂಗಳೊಳಗೆ ಚುನಾವಣೆ ನಡೆಸುವಂತೆ ಸ್ಪಷ್ಟ ಆದೇಶ ನೀಡಿದ್ದರೂ, ರಾಜ್ಯ ಚುನಾವಣಾ ಆಯೋಗವು ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 4 ತಿಂಗಳೊಳಗೆ ಚುನಾವಣೆ ನಡೆಸಬೇಕೆಂದು ಮೇ ತಿಂಗಳ ಆದೇಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಮಹಾರಾಷ್ಟ್ರ ಸರ್ಕಾರವನ್ನು “ಈಗಾಗಲೇ ಚುನಾವಣೆ ನಡೆಸಲಾಗಿದೆಯೇ?” ಎಂದು ಕೇಳಿದರು.

ಇದನ್ನೂ ಓದಿ: ಆಧಾರ್ ಪೌರತ್ವದ ದಾಖಲೆಯಲ್ಲ, ಆದರೆ ಗುರುತಿನ ಚೀಟಿಯಾಗಿ ಬಳಸಬಹುದು; ಸುಪ್ರೀಂ ಕೋರ್ಟ್

ಅದಕ್ಕೆ ಆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಹಾರಾಷ್ಟ್ರವನ್ನು ಪ್ರತಿನಿಧಿಸುವ ವಕೀಲರು ಹೇಳಿದರು. ಗಡಿ ನಿರ್ಣಯ ಪೂರ್ಣಗೊಂಡಿದೆ ಮತ್ತು ರಾಜ್ಯ ಚುನಾವಣಾ ಆಯೋಗವು ಸ್ವಲ್ಪ ಹೆಚ್ಚುವರಿ ಸಮಯವನ್ನು ಕೋರುತ್ತಿದೆ. ಈ ನಿಟ್ಟಿನಲ್ಲಿ ಮಧ್ಯಂತರ ಅರ್ಜಿಯನ್ನು ಸಹ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

“ಜನವರಿಯವರೆಗೆ ನಾವು ನಿಮಗೆ ಏಕೆ ಸಮಯ ನೀಡಬೇಕು?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಶ್ನಿಸಿದರು.

29 ಪುರಸಭೆ ನಿಗಮಗಳಿದ್ದು, ಮೊದಲ ಬಾರಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯುತ್ತಿವೆ. ಪ್ರಸ್ತುತ ತಮ್ಮ ಬಳಿ 65,000 ಇವಿಎಂ ಯಂತ್ರಗಳಿವೆ ಮತ್ತು ಇನ್ನೂ 50,000 ಯಂತ್ರಗಳು ಬೇಕಾಗಿವೆ. ಅದಕ್ಕಾಗಿ ಈಗಾಗಲೇ ಆದೇಶಗಳನ್ನು ನೀಡಲಾಗಿದೆ ಎಂದು ವಕೀಲರು ಹೇಳಿದರು.

ಇದನ್ನೂ ಓದಿ: ಅಕ್ರಮ ಕಂಡುಬಂದರೆ ಬಿಹಾರದ SIR ಪ್ರಕ್ರಿಯೆ ರದ್ದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಹೀಗಾಗಿ, ಸುಪ್ರೀಂ ಕೋರ್ಟ್ ಹೊಸ ಗಡುವನ್ನು ನಿಗದಿಪಡಿಸಿದೆ. ಮಹಾರಾಷ್ಟ್ರದಲ್ಲಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ಹೊಸ ಗಡುವನ್ನು ನಿಗದಿಪಡಿಸಿದ ನ್ಯಾಯಾಲಯವು ಈಗ ಹೆಚ್ಚುವರಿ ವಿಸ್ತರಣೆಗೆ ಅನುಮತಿ ನೀಡಿದೆ. ಹಾಗೇ, ಇನ್ನೂ ಹೆಚ್ಚಿನ ವಿಸ್ತರಣೆಗಳನ್ನು ನೀಡಲಾಗುವುದಿಲ್ಲ ಎಂದು ಕೂಡ ಹೇಳಿದೆ.

ನವೆಂಬರ್ 30ರೊಳಗೆ ಇವಿಎಂಗಳ ಲಭ್ಯತೆಯ ಕುರಿತು ಅನುಸರಣಾ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

2022ರಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಜಿಲ್ಲಾ ಪರಿಷತ್ತುಗಳು, ಪಂಚಾಯತ್ ಸಮಿತಿಗಳು ಮತ್ತು ಪುರಸಭೆಗಳಿಗೆ ಚುನಾವಣೆಗಳು ನಡೆದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ