ಮೇಕೆದಾಟು ಜಲಾಶಯ ನಿರ್ಮಾಣ ವಿವಾದ; ಜನವರಿ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧದ ವಿಚಾರಣೆಯನ್ನು ನ್ಯಾ.ಖಾನ್ವಿಲ್ಕರ್, ನ್ಯಾ.ಸಿ.ಟಿ.ರವಿಕುಮಾರ್ ಪೀಠ ವಿಚಾರಣೆ ಮುಂದೂಡಿದೆ.

ಮೇಕೆದಾಟು ಜಲಾಶಯ ನಿರ್ಮಾಣ ವಿವಾದ; ಜನವರಿ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
Follow us
TV9 Web
| Updated By: ಆಯೇಷಾ ಬಾನು

Updated on: Jan 03, 2022 | 12:19 PM

ದೆಹಲಿ: ಮೇಕೆದಾಟು ಜಲಾಶಯ ನಿರ್ಮಾಣ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್‌ನಲ್ಲಿದ್ದ ಮಹತ್ವದ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಲಾಗಿದೆ. ಎನ್ಜಿಟಿ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧದ ವಿಚಾರಣೆಯನ್ನು ನ್ಯಾ.ಖಾನ್ವಿಲ್ಕರ್, ನ್ಯಾ.ಸಿ.ಟಿ.ರವಿಕುಮಾರ್ ಪೀಠ ವಿಚಾರಣೆ ಮುಂದೂಡಿದೆ.

ಮೇಕೆದಾಟು ಯೋಜನೆಗೆ ಆರಂಭದಿಂದಲೂ ತಮಿಳುನಾಡು ಅಡ್ಡಗಾಲು ಹಾಕುತ್ತಲೇ ಬಂದಿದೆ. ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೈಬಿಟ್ಟಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದರಿಂದ 5912 ಕೋಟಿ ರೂಪಾಯಿ ಅಂದಾಜು ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಅಡ್ಡಿ ಎದುರಾಗಿದೆ. ಅಂದಹಾಗೆ ಕರ್ನಾಟಕ ಸರ್ಕಾರ, ಅರಣ್ಯ ಮತ್ತು ವನ್ಯಜೀವಿ ಅಭಯಾರಣ್ಯ ಒಳಗೊಂಡ ಜಾಗದಲ್ಲಿ ಅಣೆಕಟ್ಟು ನಿರ್ಮಿಸುತ್ತಿದೆ. ಇದರಿಂದ ಪರಿಸರಕ್ಕೆ ಉಂಟಾಗುವ ಹಾನಿಯನ್ನು ಪರಿಗಣಿಸಲು ನ್ಯಾಯಮಂಡಳಿ ವಿಫಲವಾಗಿದೆ ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಹೇಳಿದೆ. ಈ ವಿಷ್ಯವಾಗಿ ಸುಪ್ರೀಂಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದ್ರೆ ಸುಪ್ರೀಂಕೋರ್ಟ್‌ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಬಿಜೆಪಿಯವರು ದೊಡ್ಡ ಮನುಷ್ಯರ ರೀತಿ ಮಾತನಾಡುತ್ತಾರೆ; ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ