ಶರದ್ ಪವಾರ್ ಹೆಸರು, ಚಿತ್ರ ಬಳಸಿದ್ದಕ್ಕೆ ಅಜಿತ್ ಪವಾರ್ ಬಣವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ನೀವು ಈಗ ಬೇರೆ ರಾಜಕೀಯ ಪಕ್ಷವಾಗಿದ್ದೀರಿ. ನೀವು ಅವರೊಂದಿಗೆ ಇರಬಾರದು ಎಂದು ನಿರ್ಧರಿಸಿದ್ದೀರಿ. ಹೀಗಿರುವಾಗ ಅವರ ಚಿತ್ರ ಬಳಸುತ್ತಿರುವುದೇಕೆ? ಈಗ ನಾವು ನಿಮ್ಮದೇ ಗುರುತಿನೊಂದಿಗೆ ಹೋಗಿ ಎಂದು ಪೀಠ ಹೇಳಿದ್ದು, ಶರದ್ ಪವಾರ್ ಅವರ ಹೆಸರು, ಚಿತ್ರಗಳನ್ನು ಬಳಸಲಾಗುವುದಿಲ್ಲ ಎಂದು ನಮಗೆ ಸ್ಪಷ್ಟವಾದ ಮತ್ತು ಬೇಷರತ್ತಾದ ಒಪ್ಪಂದದ ಅಗತ್ಯವಿದೆ ಎಂದಿದೆ.

ಶರದ್ ಪವಾರ್ ಹೆಸರು, ಚಿತ್ರ ಬಳಸಿದ್ದಕ್ಕೆ ಅಜಿತ್ ಪವಾರ್ ಬಣವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್
ಅಜಿತ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 14, 2024 | 4:28 PM

ದೆಹಲಿ ಮಾರ್ಚ್ 14: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಂಸ್ಥಾಪಕ ಶರದ್ ಪವಾರ್ (Sharad Pawar) ಅವರ ಹೆಸರು ಮತ್ತು ಚಿತ್ರಗಳನ್ನು ಪ್ರಚಾರಕ್ಕಾಗಿ ಬಳಸಿರುವ ಆರೋಪದ ಮೇಲೆ ಸುಪ್ರೀಂಕೋರ್ಟ್ (Supreme Court) ಗುರುವಾರ ಅಜಿತ್ ಪವಾರ್ (Ajit Pawar) ಬಣವನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಶನಿವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಅಜಿತ್ ಪವಾರ್ ಬಣಕ್ಕೆ ಸೂಚಿಸಿದ್ದು, ಪಕ್ಷದ ವಿಭಜನೆಯ ಹೊರತಾಗಿಯೂ ಶರದ್ ಪವಾರ್ ಅವರ ಚಿತ್ರವನ್ನು ನಿರಂತರವಾಗಿ ಬಳಸುವುದರ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದೆ.

“ನೀವು ಈಗ ಬೇರೆ ರಾಜಕೀಯ ಪಕ್ಷವಾಗಿದ್ದೀರಿ. ನೀವು ಅವರೊಂದಿಗೆ ಇರಬಾರದು ಎಂದು ನಿರ್ಧರಿಸಿದ್ದೀರಿ. ಹೀಗಿರುವಾಗ ಅವರ ಚಿತ್ರ ಬಳಸುತ್ತಿರುವುದೇಕೆ? ಈಗ ನಾವು ನಿಮ್ಮದೇ ಗುರುತಿನೊಂದಿಗೆ ಹೋಗಿ ಎಂದು ಪೀಠ ಹೇಳಿದೆ. ಅದೇ ವೇಳೆ ಶರದ್ ಪವಾರ್ ಅವರ ಹೆಸರು, ಚಿತ್ರಗಳನ್ನು ಬಳಸಲಾಗುವುದಿಲ್ಲ ಎಂದು ನಮಗೆ ಸ್ಪಷ್ಟವಾದ ಮತ್ತು ಬೇಷರತ್ತಾದ ಒಪ್ಪಂದದ ಅಗತ್ಯವಿದೆ” ಎಂದು ಪೀಠ ಹೇಳಿದ್ದು, ಮುಂದಿನ ವಿಚಾರಣೆಯನ್ನು ಮಾರ್ಚ್ 19ಕ್ಕೆ ನಿಗದಿಪಡಿಸಿದೆ.

ಅಜಿತ್ ಪವಾರ್ ಬಣ ಮತದಾರರನ್ನು ಓಲೈಸಲು ಶರದ್ ಪವಾರ್ ಅವರ ಹೆಸರು ಮತ್ತು ಚಿತ್ರಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಶರದ್ ಪವಾರ್ ಬಣ ಸಲ್ಲಿಸಿದ ಅರ್ಜಿಯನ್ನು ಅನುಸರಿಸಿ ನ್ಯಾಯಾಲಯ ಮಧ್ಯಪ್ರವೇಶ ಮಾಡಿದೆ. ಅಜಿತ್ ಪವಾರ್ ನೇತೃತ್ವದ ಬಂಡಾಯದ ನಂತರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯಲ್ಲಿ ಒಡಕು ಉಂಟಾಗಿತ್ತು. ಭಾರತೀಯ ಚುನಾವಣಾ ಆಯೋಗವು “ಶಾಸಕ ಬಹುಮತದ ಪರೀಕ್ಷೆ” ಆಧಾರದ ಮೇಲೆ ಅಜಿತ್ ಬಣವನ್ನು ನಿಜವಾದ NCP ಎಂದು ಗುರುತಿಸಿದೆ.

“ಅಜಿತ್ ಪವಾರ್ ಬಣವು ಶಾಸಕರ ಬಹುಮತದ ಬೆಂಬಲವನ್ನು ಹೊಂದಿತ್ತು. ಆಯೋಗವು ಅಜಿತ್ ಪವಾರ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎಂದು ಹೇಳುತ್ತದೆ.ಅದರ ಹೆಸರು ಮತ್ತು ‘ಗಡಿಯಾರ’ದ ಚಿಹ್ನೆಯನ್ನು ಬಳಸಲು ಅರ್ಹರಾಗಿದ್ದಾರೆ” ಎಂದು ಇಸಿಐ ಆದೇಶ ಹೇಳಿದೆ.

ಇದನ್ನೂ ಓದಿ: Sudha Murty: ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್’ ಎಂಬ ಹೆಸರು ಬಳಸುವಂತೆ ಚುನಾವಣಾ ಆಯೋಗ ಹೇಳಿತ್ತು. ಇದಕ್ಕೂ ಮೊದಲು, ಮಹಾರಾಷ್ಟ್ರ ಉಪಮುಖ್ಯಮಂತ್ರಿ ನೇತೃತ್ವದ ಗುಂಪನ್ನು ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಎಂದು ಗುರುತಿಸುವ ಚುನಾವಣಾ ಆಯೋಗದ ಫೆಬ್ರವರಿ 6 ರ ಆದೇಶದ ವಿರುದ್ಧ ಶರದ್ ಪವಾರ್ ಅವರ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಅಜಿತ್ ಪವಾರ್ ನೇತೃತ್ವದ ಬಣದಿಂದ ಪ್ರತಿಕ್ರಿಯೆ ಕೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು