AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ: 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ರದ್ದು ಮಾಡಿದ ಸುಪ್ರೀಂಕೋರ್ಟ್

"ಅಧಿವೇಶನದ ನಂತರ ಶಾಸಕರನ್ನು ಅಮಾನತುಗೊಳಿಸುವುದು ಅಸಂವಿಧಾನಿಕ ಮತ್ತು ಕಾನೂನುಬಾಹಿರ" ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ: 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ರದ್ದು ಮಾಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 28, 2022 | 1:11 PM

ಮುಂಬೈ: ಅಶಿಸ್ತಿನ ವರ್ತನೆ ಆರೋಪದ ಮೇಲೆ 12 ಬಿಜೆಪಿ (BJP) ಶಾಸಕರನ್ನು ಒಂದು ವರ್ಷದವರೆಗೆ ಅಮಾನತುಗೊಳಿಸುವ ಮಹಾರಾಷ್ಟ್ರ ವಿಧಾನಸಭೆಯ (Maharashtra assembly) ನಿರ್ಣಯವನ್ನು ಸುಪ್ರೀಂಕೋರ್ಟ್ (Supreme Court) ರದ್ದು ಮಾಡಿದೆ. “ಅಧಿವೇಶನದ ನಂತರ ಶಾಸಕರನ್ನು ಅಮಾನತುಗೊಳಿಸುವುದು ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಧಿವೇಶನಕ್ಕೆ ಅಮಾನತುಗೊಳಿಸಬಹುದು ಎಂದು ನಿಯಮಗಳು ಹೇಳುತ್ತಿದ್ದರೂ, 12 ಶಾಸಕರನ್ನು ಅಧಿವೇಶನದ ನಂತರ ಒಂದು ವರ್ಷ ಅಮಾನತುಗೊಳಿಸಲಾಗಿದೆ. ವಿಧಾನಸಭೆಯ ನಿರ್ಣಯಗಳು ಕಾನೂನಿನ ದೃಷ್ಟಿಯಲ್ಲಿ ದುರುದ್ದೇಶಪೂರಿತವಾಗಿವೆ ಮತ್ತು ನಿಷ್ಪರಿಣಾಮಕಾರಿ ಎಂದು ಘೋಷಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಸಭಾಧ್ಯಕ್ಷರ ಚೇಂಬರ್‌ನಲ್ಲಿ ಸಭಾಧ್ಯಕ್ಷ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ರಾಜ್ಯ ಸರ್ಕಾರ ಆರೋಪಿಸಿದ ನಂತರ ಶಾಸಕರನ್ನು ಕಳೆದ ವರ್ಷ ಜುಲೈ 5 ರಂದು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿತ್ತು.  ಅಮಾನತುಗೊಂಡಿದ್ದ 12 ಶಾಸಕರು -ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಖಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ.

ಶಾಸಕರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಮಂಡಿಸಿದರು ಮತ್ತು ಧ್ವನಿ ಮತದಿಂದ ಅಂಗೀಕರಿಸಿದರು.

ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಆರೋಪವನ್ನು ಸುಳ್ಳು ಎಂದು ಬಣ್ಣಿಸಿದ್ದಾರೆ ಮತ್ತು ಘಟನೆಯ ಬಗ್ಗೆ ಜಾಧವ್ ಅವರ ನಿರ್ಧಾರ “ಏಕಪಕ್ಷೀಯ” ಎಂದು ಹೇಳಿದರು.  ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ (ಇತರ ಹಿಂದುಳಿದ ವರ್ಗಗಳ) ಕೋಟಾದಲ್ಲಿ ಸರ್ಕಾರದ ಸುಳ್ಳನ್ನು ನಾವು ಬಹಿರಂಗಪಡಿಸಿದ್ದರಿಂದ ಇದು ಸುಳ್ಳು ಆರೋಪ ಮತ್ತು ವಿರೋಧ ಪಕ್ಷದ  ಸಂಖ್ಯೆಯನ್ನು ಕಡಿಮೆ ಮಾಡುವ ಪ್ರಯತ್ನವಾಗಿದೆ. ಬಿಜೆಪಿ ಸದಸ್ಯರು ಅಧ್ಯಕ್ಷರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಆದೇಶದ ನಂತರ ಅಮಾನತುಗೊಂಡವರಲ್ಲಿ ಒಬ್ಬರಾದ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರು  ಪ್ರತಿಕ್ರಿಯಿಸಿದ್ದು ಸುಪ್ರೀಂಕೋರ್ಟ್ ತೀರ್ಪು ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದ ಮುಖಕ್ಕೆ ಕಪಾಳಮೋಕ್ಷವಾಗಿದೆ. ಅಮಾನತು ಪ್ರತೀಕಾರದ ಕೃತ್ಯವಾಗಿತ್ತು. ಅವರು ಸ್ಪೀಕರ್ ಚುನಾವಣೆಯಿಂದ ದೂರ ಉಳಿಯಲು ಬಯಸಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪು ನ್ಯಾಯಯುತವಾಗಿದೆ ಮತ್ತು ತಪ್ಪನ್ನು ರದ್ದುಗೊಳಿಸಿದೆ ಎಂದಿದ್ದಾರೆ.

ತೀರ್ಪನ್ನು ಸ್ವಾಗತಿಸಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದ ವೇಳೆ ಒಬಿಸಿಗಳ ಪರವಾಗಿ ಹೋರಾಡುತ್ತಿರುವ ನಮ್ಮ 12 ಬಿಜೆಪಿ ಮಹಾರಾಷ್ಟ್ರ ಶಾಸಕರ ಅಮಾನತು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರಕ್ಕಾಗಿ ನಾವು ಗೌರವಾನ್ವಿತ ಸುಪ್ರೀಂಕೋರ್ಟನ್ನು  ಸ್ವಾಗತಿಸುತ್ತೇವೆ ಮತ್ತು ಧನ್ಯವಾದಗಳು.” “ಈ ನಿರ್ಧಾರವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುತ್ತದೆ ಮತ್ತು ಇದು ಅಸಂವಿಧಾನಿಕ, ಅನೈತಿಕ, ಅನ್ಯಾಯ, ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳು ಮತ್ತು ಚಟುವಟಿಕೆಗಳಿಗಾಗಿ ಎಂವಿಎ ಸರ್ಕಾರದ ಮುಖದ ಮೇಲೆ ಮತ್ತೊಂದು ಬಿಗಿಯಾದ ಕಪಾಳಮೋಕ್ಷವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bihar bandh ಬಿಹಾರ ಬಂದ್ ಕೈ ಬಿಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಶಿಕ್ಷಕ; ಯಾರು ಈ ಖಾನ್​​​​​ ಸರ್?

Published On - 12:57 pm, Fri, 28 January 22

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ