ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಆ ಕುರಿತು ಕೆಲವು ಮಾಹಿತಿ ಇಲ್ಲಿದೆ.

ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಕೇಜ್ರಿವಾಲ್
Follow us
|

Updated on:Apr 30, 2024 | 8:47 PM

ನವದೆಹಲಿ: ಲೋಕಸಭಾ ಚುನಾವಣೆ ವೇಳೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನದ ಕುರಿತು ಸುಪ್ರೀಂ ಕೋರ್ಟ್ (Supreme Court) ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದು, ಶುಕ್ರವಾರದೊಳಗೆ ಇಡಿ ಪ್ರತಿಕ್ರಿಯೆ ನೀಡಬೇಕೆಂದು ಸೂಚಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಮಾರ್ಚ್ 21ರಂದು ಇಡಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ವಾದವನ್ನು ನ್ಯಾಯಾಲಯ ಪರಿಗಣಿಸಿತು.

ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಮಯದ ಕುರಿತು ಪ್ರತಿಯಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರನ್ನು ಕೇಳಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಜೀವನ ಮತ್ತು ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ಅದನ್ನು ನೀವು ಅಲ್ಲಗಳೆಯುವಂತಿಲ್ಲ ಎಂದು ಹೇಳಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕಾರಣ ಏನೆಂದು ಕೋರ್ಟ್​ ಪ್ರಶ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಶುಕ್ರವಾರದವರೆಗೆ ಗಡುವು ನೀಡಿದೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಜೈಲೇ ಗತಿ; ಬಂಧನ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಿಎಂ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಕ್ರಮ ಹಣ ವರ್ಗಾವಣೆಯ ಬಗ್ಗೆ ಸಾಕ್ಷಿಗಳು ಇಲ್ಲ. ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂಬುವುದಕ್ಕೆ ದಾಖಲೆಗಳಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Tue, 30 April 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?