AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಣೆ

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ನಾವು ಯಾವುದೇ ಮಗುವನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ವಿಚಾರಣೆ ವೇಳೆ ಹೇಳಿದೆ.

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2023 | 4:23 PM

Share

ದೆಹಲಿ, ಅ.16: 26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ಕೋರ್ಟ್​ ನಿರಾಕರಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ನಾವು ಯಾವುದೇ ಮಗುವನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಈ ಹಿಂದಿನ ವಿಚಾರಣೆ ವೇಳೆಯಲ್ಲೂ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ನೇತೃತ್ವದಲ್ಲಿ ಈ ವಿಚಾರಣೆಯನ್ನು ನಡೆಸಲಾಗಿದೆ. ಮಹಿಳೆಯ ಜೀವಕ್ಕೆ ಯಾವುದೇ ಅಪಾಯವಿಲ್ಲದ ಕಾರಣ 26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸುವ ಕ್ರಮವನ್ನು ಸುಪ್ರೀಂ ಕೋರ್ಟ್​​​ ನಿರಕಾರಿಸಿದೆ.

ಒಂದು ವೇಳೆ ತಾಯಿಗೆ ಮಗುವಿನ ಅಗತ್ಯವಿಲ್ಲ ಅಥವಾ ಇಷ್ಟವಿಲ್ಲವೆಂದರೆ ಮಗುವನ್ನು ತಾಯಿ ದತ್ತು ನೀಡಬಹುದು ಎಂದು ಪೀಠವು ಹೇಳಿದೆ. ಗರ್ಭಧಾರಣೆಯು 26 ವಾರಗಳು ಮತ್ತು 5 ದಿನ, ಈ ಸಮಯದಲ್ಲಿ ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯಿದೆ (Medical Termination of Pregnancy Act) ಸೆಕ್ಷನ್ 3 ಮತ್ತು 5 ಉಲ್ಲಂಘಿಸಿದಂತೆ, ಈ ಕಾರಣದಿಂದ ತಾಯಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದೆ.

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಯ ಎಲ್ಲ ಖರ್ಚುಗಳನ್ನು ಆಯಾಯ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ನಿರ್ದೇಶನ ನೀಡಿದೆ. ಅರ್ಜಿದಾರೊಬ್ಬರು ಎರಡು ಮಕ್ಕಳನ್ನು ಪಡೆದ ತಾಯಿಗೆ ಮೂರನೇ ಮಗುವಿಗೆ ಗರ್ಭ ಧರಿಸಿದಾಗ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗುವ ಕಾರಣ ಆಕೆಗೆ ಗರ್ಭಪಾತ ಮಾಡಿಸಲು ಅವಕಾಶ ನೀಡಬೇಕು ಎಂದು ಹೇಳಿದರು. ಆದರೆ ಈ ಹಿಂದೆ ಈ ಬಗ್ಗೆ ಏಮ್ಸ್​​ ಆಸ್ಪತ್ರೆಗೆ ವರದಿಯನ್ನು ಕೇಳಿದ್ದ ಸುಪ್ರೀಂ. ಇದೀಗ ಈ ವೈದ್ಯಕೀಯ ವರದಿ ಪ್ರಕಾರ ಸುಪ್ರೀಂ ಈ ಆದೇಶವನ್ನು ನೀಡಿದೆ.

ಇದನ್ನೂ ಓದಿ: ‘ಮಗುವನ್ನು ಕೊಲ್ಲಲು ಸಾಧ್ಯವಿಲ್ಲ’: ಗರ್ಭಪಾತ ಪ್ರಕರಣ ವಿಚಾರಣೆ ವೇಳೆ ಸುಪ್ರೀಂಕೋರ್ಟ್

ಏಮ್ಸ್​​ ಆಸ್ಪತ್ರೆ ನೀಡಿದ ವರದಿ ಪ್ರಕಾರ ಮಹಿಳೆ ಗರ್ಭಾವಸ್ಥೆಯಲ್ಲಿ ಮುಂದುವರಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಇದರಿಂದ ಆಕೆಗೆ ಪೋಸ್ಟ್ ಪಾರ್ಟಮ್ ಸೈಕೋಸಿಸ್ (ಪ್ರಸವಾನಂತರದ ಮನೋರೋಗ) ಉಂಟಾಗುತ್ತದೆ. ಇದಕ್ಕೆ ವೈದ್ಯರು ಸೂಚಿಸಿದ ಸರಿಯಾದ ಚಿಕಿತ್ಸೆ ಮತ್ತು ಔಷಧಿಯನ್ನು ತೆಗೆದುಕೊಂಡರೆ ಮಗುವಿನಗೆ ಅಥವಾ ತಾಯಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 16 October 23

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ