ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಮನವಿ; ಇದು ನ್ಯಾಯಾಲಯದ ಕೆಲಸವೇ? ಎಂದು ಅರ್ಜಿ ವಜಾ ಮಾಡಿದ ಸುಪ್ರೀಂ

ಇದು ನ್ಯಾಯಾಲಯದ ಕೆಲಸವೇ? ವೆಚ್ಚವನ್ನು ವಿಧಿಸಲು ನಾವು ಒತ್ತಾಯಿಸಿದಾಗ ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಯಾವ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ?

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಮನವಿ; ಇದು ನ್ಯಾಯಾಲಯದ ಕೆಲಸವೇ? ಎಂದು ಅರ್ಜಿ ವಜಾ ಮಾಡಿದ ಸುಪ್ರೀಂ
ಪ್ರಾತಿನಿಧಿಕ ಚಿತ್ರ
Updated By: ರಶ್ಮಿ ಕಲ್ಲಕಟ್ಟ

Updated on: Oct 10, 2022 | 2:42 PM

ದೆಹಲಿ: ಗೋವನ್ನು (Cow) ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ (Supreme Court) ಸೋಮವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಅರ್ಜಿದಾರರಿಗೆ ನಿಮ್ಮ ಯಾವ ಮೂಲಭೂತ ಹಕ್ಕಿನ ಮೇಲೆ ಇದು ಪರಿಣಾಮ ಬೀರುತ್ತಿದೆ ಎಂದು ಕೇಳಿದೆ. “ಇದು ನ್ಯಾಯಾಲಯದ ಕೆಲಸವೇ? ವೆಚ್ಚವನ್ನು ವಿಧಿಸಲು ನಾವು ಒತ್ತಾಯಿಸಿದಾಗ ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಯಾವ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ? ನೀವು ನ್ಯಾಯಾಲಯಕ್ಕೆ ಬಂದಿರುವುದರಿಂದ ನಾವು ಕಾನೂನನ್ನು ಗಾಳಿಗೆ ತೂರಬೇಕೇ? ಎಂದು ಪೀಠ ಖಾರವಾಗಿಯೇ ಹೇಳಿದೆ. ಗೋಸಂರಕ್ಷಣೆ ಬಹಳ ಮುಖ್ಯ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು.

ವೆಚ್ಚವನ್ನು ವಿಧಿಸುವುದಾಗಿ ಪೀಠವು ವಕೀಲರಿಗೆ ಎಚ್ಚರಿಕೆ ನೀಡಿದ ನಂತರ ಅವರು ಮನವಿಯನ್ನು ಹಿಂತೆಗೆದುಕೊಂಡರು. ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಗೋವಂಶ್ ಸೇವಾ ಸದನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

Published On - 2:41 pm, Mon, 10 October 22