AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಿತಕರ ಘಟನೆ ನಡೆಯುತ್ತದೆಂದು ಹೇಳಲಾಗದು; ಸೆ. 5ರ ಸಿಜೆಪಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಬ್ರಿಕ್ಸ್​ ಶೃಂಗಸಭೆ ಮುಗಿಯುವವರೆಗೂ ಸಿಜೆಪಿಗೆ ಮೆರವಣಿಗೆ ನಡೆಸಲು ಅನುಮತಿ ನಿರಾಕರಿಸಬೇಕು ಎಂದು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಸೆಪ್ಟೆಂಬರ್ 5ರಂದು ಸಿಜೆಪಿ ನಡೆಸುವ ಮೆರವಣಿಗೆಯನ್ನು ತಡೆಹಿಡಿಯಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​, ಯಾವುದೇ ಅಹಿತಕರ ಘಟನೆ ಸಂಭವಿಸುತ್ತದೆ ಎಂದು ನಂಬಲು ಯಾವುದೇ ನಿರ್ದಿಷ್ಟ ಕಾರಣವಿಲ್ಲ ಎಂದು ಹೇಳಿದೆ. ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲಾ ಪಕ್ಷಗಳು ಶಾಂತಿಯುತವಾಗಿ, ಜವಾಬ್ದಾರಿಯುತವಾಗಿ ವರ್ತಿಸುವಂತೆ ನೋಡಿಕೊಳ್ಳಬೇಕು ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದ್ದಾರೆ.

ಅಹಿತಕರ ಘಟನೆ ನಡೆಯುತ್ತದೆಂದು ಹೇಳಲಾಗದು; ಸೆ. 5ರ ಸಿಜೆಪಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
CJP Chief DipkeImage Credit source: TV9
ಸುಷ್ಮಾ ಚಕ್ರೆ
|

Updated on: Aug 31, 2026 | 4:50 PM

Share

ನವದೆಹಲಿ, ಆಗಸ್ಟ್ 31: ಸೆಪ್ಟೆಂಬರ್ 5ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಅಥವಾ ಈ ಕುರಿತು ಯಾವುದೇ ನಿರ್ದೇಶನಗಳನ್ನು ನೀಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಸೂಕ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅಗತ್ಯ ಬಿದ್ದರೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಭರವಸೆ ವ್ಯಕ್ತಪಡಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಇಂದು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಉದ್ದೇಶಿತ ಮೆರವಣಿಗೆಯ ಸಮಯದಲ್ಲಿ ಯಾವುದೇ ಅನಾಹುತ ಸಂಭವಿಸುತ್ತದೆ ಎಂದು ನಂಬಲು ಸದ್ಯಕ್ಕೆ ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿದೆ. ಆದರೆ, ಯಾವುದೇ ಗಂಭೀರ ಘಟನೆ ಸಂಭವಿಸಿದಲ್ಲಿ, ಅರ್ಜಿದಾರರು ತಕ್ಷಣವೇ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಪೀಠವು ತಿಳಿಸಿದೆ.

ಇದನ್ನೂ ಓದಿ: ಜಂತರ್ ಮಂತರ್ ಸೀಸನ್ 2 ಶೀಘ್ರದಲ್ಲೇ ಆರಂಭ; ಹೊಸ ಪ್ರತಿಭಟನೆಯ ಸುಳಿವು ನೀಡಿದ ಸಿಜೆಪಿ ನಾಯಕ ದಿಪ್ಕೆ

“ಎಲ್ಲರೂ ಜವಾಬ್ದಾರಿಯಿಂದ, ಶಾಂತಿಯುತವಾಗಿ ಮತ್ತು ಕಾನೂನಿನ ಪ್ರಕಾರ ವರ್ತಿಸುತ್ತಾರೆ ಎಂಬ ನಿರೀಕ್ಷೆಯೊಂದಿಗೆ ನಾವು ಮುಂದುವರಿಯುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಲ್ಲಾ ಕಡೆಯವರು ಕಾನೂನಿಗೆ ಬದ್ಧವಾಗಿರುತ್ತಾರೆ ಎಂಬ ಆಶಯ ವ್ಯಕ್ತಪಡಿಸಿದೆ.

ಜುಲೈ 25ರಂದು ಸಿಜೆಪಿ ಜತೆ ನಡೆಸಿದ್ದ ಸುದೀರ್ಘ ಆಂದೋಲನವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಜೆಪಿ ನಾಯಕರು ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: ಮಾತಿಗೆ ತಪ್ಪಿದ ಕೇಂದ್ರ ಸರ್ಕಾರ; ಸೆ. 5ರಂದು ದೆಹಲಿಯಲ್ಲಿ ಮತ್ತೆ ಬೃಹತ್ ಪ್ರತಿಭಟನೆ ಘೋಷಿಸಿದ ಸಿಜೆಪಿ

ದೆಹಲಿ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಮತ್ತು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ನೀಟ್ (NEET) ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಒಪ್ಪಿಕೊಂಡಿತ್ತು. ಆದರೆ ಸರ್ಕಾರ ಈ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸಿಜೆಪಿ ಆರೋಪಿಸಿದೆ. ಅಭಿಜಿತ್ ದೀಪ್ಕೆ ನೇತೃತ್ವದ ಸಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಘೋಷಿಸಲಾದ ಈ ಮೆರವಣಿಗೆಯನ್ನು ಮೃತ ವಿದ್ಯಾರ್ಥಿಗಳ ಕುಟುಂಬಸ್ಥರು ಮುನ್ನಡೆಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ