AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on:May 28, 2024 | 11:20 AM

Share

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ. ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್​, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ.

ಮತ್ತಷ್ಟು ಓದಿ: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾದ ತಕ್ಷಣ, ಅಭಿಷೇಕ್ ಮನು ಸಿಂಘ್ವಿ ನಮಗೆ ಇನ್ನೂ ಏಳು ದಿನಗಳ ಮಧ್ಯಂತರ ಜಾಮೀನು ವಿಸ್ತರಿಸಬೇಕೆಂದು ಹೇಳಿದರು. ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಇದು ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯದ ದುರ್ಬಳಕೆಯಲ್ಲ ಎಂದರು.

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ಈ ಕುರಿತು ಸಚಿವೆ ಅತಿಶಿ ಮಾತನಾಡಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಕ್ಯಾನ್ಸರ್​ ಇರಬಹುದು ಅಥವಾ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಯೂ ಆಗಿರಬಹುದು ಎಂದು ಹೇಳಿದ್ದರು. ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:17 am, Tue, 28 May 24