AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಮಯ ವ್ಯರ್ಥ ಮಾಡಬೇಡಿ, ಸಿಜೆಪಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿ ತಳ್ಳಿ ಹಾಕಿದ ಸುಪ್ರೀಂ

ಸುಪ್ರೀಂ ಕೋರ್ಟ್ ಸಿಜೆಪಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ವಿರುದ್ಧದ ಅರ್ಜಿಯನ್ನು ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, "ನಮ್ಮ ಸಮಯ ವ್ಯರ್ಥ ಮಾಡಬೇಡಿ" ಎಂದು ಖಡಕ್ ಆಗಿ ತಿಳಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಬಲಪ್ರಯೋಗ ಮಾಡಿದ್ದರು. ದೆಹಲಿ ಹೈಕೋರ್ಟ್ ಸಹ ಈ ಹಿಂದೆ ಇದೇ ರೀತಿಯ ಅರ್ಜಿಯನ್ನು ತಿರಸ್ಕರಿಸಿತ್ತು.

ನಮ್ಮ ಸಮಯ ವ್ಯರ್ಥ ಮಾಡಬೇಡಿ, ಸಿಜೆಪಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿ ತಳ್ಳಿ ಹಾಕಿದ ಸುಪ್ರೀಂ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Jul 22, 2026 | 11:57 AM

Share

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್​ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಬಲ ಪ್ರಯೋಗ, ಲಾಠಿಚಾರ್ಜ್​ ಖಂಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್(Supreme Court)​ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿದ್ದ ಪೀಠವು, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಅರ್ಜಿದಾರ ಪರ ವಕೀಲರಿಗೆ ಖಡಕ್ ಆಗಿ ತಿಳಿಸಿದೆ.

ವೀಡಿಯೊ ನೋಡಲು ನಮಗೆ ಸಮಯವಿಲ್ಲ: ಸಿಜೆಐ ಸೂರ್ಯ ಕಾಂತ್ ಅರ್ಜಿ ಪ್ರಸ್ತಾಪಿಸಿದ ವಕೀಲ ನರೇಂದ್ರ ಮಿಶ್ರಾ, ಪೊಲೀಸರ ಕ್ರೌರ್ಯ ಮತ್ತು ಲಾಠಿಚಾರ್ಜ್ ಪ್ರದರ್ಶಿಸುವ ವೀಡಿಯೊ ಆಧಾರಗಳು ತಮ್ಮ ಬಳಿಯಿವೆ ಎಂದು ಪೀಠದ ಗಮನಕ್ಕೆ ತರಲು ಯತ್ನಿಸಿದರು. ನಮಗೆ ವೀಡಿಯೊಗಳನ್ನು ವೀಕ್ಷಿಸಲು ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ. ಈ ವಿಷಯದಲ್ಲಿ ನ್ಯಾಯಾಲಯದ ಸಮಯವನ್ನು ದಯವಿಟ್ಟು ವ್ಯರ್ಥ ಮಾಡಬೇಡಿ ಎಂದು ಸಿಜೆಐ ಅರ್ಜಿದಾರರ ಮಾತಿಗೆ ಅಡ್ಡಿಪಡಿಸಿದರು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಇನ್ನೂ ಸ್ಥಳದಲ್ಲೇ ಇದ್ದಾರೆ, ದಯವಿಟ್ಟು ಗುರುವಾರ ವಿಚಾರಣೆಗೆ ಪಟ್ಟಿ ಮಾಡಿ ಎಂದು ವಕೀಲರು ವಿನಂತಿಸಿದಾಗ, ಇಲ್ಲ, ನಾಳೆ ನಮಗೆ ಸಮಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತು. ಸುಪ್ರೀಂ ಕೋರ್ಟ್‌ಗಿಂತ ಒಂದು ದಿನ ಮುಂಚಿತವಾಗಿ, ಅಂದರೆ ಮಂಗಳವಾರವಷ್ಟೇ ದೆಹಲಿ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಈ ರೀತಿಯ ವಿಷಯಗಳು ಮತ್ತು ರಾಜಕೀಯ ಪ್ರತಿಭಟನೆಗಳೊಳಗೆ ನ್ಯಾಯಾಲಯವನ್ನು ಎಳೆದು ತರಬೇಡಿ ಎಂದು ಹೈಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತ್ತು.

ಮತ್ತಷ್ಟು ಓದಿ: ಪ್ರಶ್ನೆಪತ್ರಿಕೆ ಸೋರಿಕೆ ಇಡೀ ದೇಶದ ಸಮಸ್ಯೆ, ತಡೆಯಲು ಗೆಹ್ಲೋಟ್ ಯತ್ನಿಸಿದರೂ ಸಾಧ್ಯವಾಗಲಿಲ್ಲ, ಪ್ರಿಯಾಂಕಾ ಗಾಂಧಿ ಮುಕ್ತ ಮಾತು

ಸಿಜೆಪಿ ಪ್ರತಿಭಟನೆಯ ಹಿನ್ನೆಲೆ ನೀಟ್  ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜುಲೈ 20 ರಂದು ನಡೆದ ‘ಸಂಸತ್ ಚಲೋ’ ಮೆರವಣಿಗೆಯ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ನಡೆದು, ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿದ್ದರು. ಈ ಘಟನೆಯಲ್ಲಿ 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪೊಲೀಸರ ಈ ಅತಿಯಾದ ಬಲಪ್ರಯೋಗದ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ನ್ಯಾಯಾಲಯದ ಬಾಗಿಲು ತಟ್ಟಿದ್ದ ಪ್ರತಿಭಟನಾಕಾರರಿಗೆ ಈಗ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಎರಡರಿಂದಲೂ ಹಿನ್ನಡೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ