ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು: ಸುಪ್ರೀಂ

ಕೇಂದ್ರ ಸರ್ಕಾರ ಮತ್ತು ದೆಹಲಿ(Delhi) ಸರ್ಕಾರದ ನಡುವಿನ ಜಟಾಪಟಿ ನಡುವೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಬಿದ್ದಿದೆ.

ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು: ಸುಪ್ರೀಂ
ಸುಪ್ರೀಂಕೋರ್ಟ್​
Follow us
| Updated By: ಡಾ. ಭಾಸ್ಕರ ಹೆಗಡೆ

Updated on:May 11, 2023 | 4:15 PM

ಕೇಂದ್ರ ಸರ್ಕಾರ ಮತ್ತು ದೆಹಲಿ(Delhi) ಸರ್ಕಾರದ ನಡುವಿನ ಶೀತಲ ಯುದ್ಧಕ್ಕೆ ಕೊನೆಗೂ ತೆರೆ ಬಿದ್ದಿದ್ದು ಈ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೀರ್ಪಿನ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಜಯ ಸಿಕ್ಕಂತಾಗಿದೆ. ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಎಲ್ಲ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣ ಕೇಂದ್ರ ಸರ್ಕಾರದ ಬಳಿ ಇರಬೇಕಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಇರುವುದರ ಉದ್ದೇಶವೇನು ಎಂದು ಗುರುವಾರ ಪ್ರಶ್ನಿಸಿದೆ.

ರಾಜಧಾನಿ ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ವಿವಾದದ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ.

ಮತ್ತಷ್ಟು ಓದಿ: ದಿಲ್ಲಿಯಲ್ಲಿ ಉಚಿತ ವಿದ್ಯುತ್ ನಿಂತುಹೋಯ್ತಂತೆ! ಕಾರಣವೇನು?

ಸರ್ಕಾರವು ಅಧಿಕಾರಿಗಳನ್ನು ನೇಮಕ ಮಾಡುವ ಮತ್ತು ವರ್ಗಾವಣೆ ಮಾಡುವ ಹಕ್ಕನ್ನು ಹೊಂದಿರುತ್ತದೆ ಎಂದು ಹೇಳಿದೆ. ತೀರ್ಪು ಪ್ರಕಟಿಸುವ ಮುನ್ನ ಸಿಜೆಐ, ಎಲ್ಲ ನ್ಯಾಯಾಧೀಶರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಸಂಬಂಧಿತ ಅಧಿಕಾರಗಳು ಕೇಂದ್ರದ ಬಳಿ ಇರುತ್ತವೆ ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್ ಗುರುವಾರ ಸರ್ವಾನುಮತದ ತೀರ್ಪಿನಲ್ಲಿ ಚುನಾಯಿತ ಸರ್ಕಾರದ ಪರವಾಗಿ ತೀರ್ಪು ನೀಡಿತು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭೂಮಿ ಹೊರತುಪಡಿಸಿ ಎಲ್ಲಾ ಸೇವೆಗಳ ಮೇಲೆ ಅಧಿಕಾರವನ್ನು ಹೊಂದಿರುತ್ತದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 11 May 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ