ಅರವಿಂದ್ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ನಿಂದ ಮಧ್ಯಂತರ ಜಾಮೀನು ಸಾಧ್ಯತೆ

|

Updated on: May 03, 2024 | 7:03 PM

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಅರವಿಂದ್ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ನಿಂದ ಮಧ್ಯಂತರ ಜಾಮೀನು ಸಾಧ್ಯತೆ
ಅರವಿಂದ್ ಕೇಜ್ರಿವಾಲ್
Follow us on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಇದೀಗ ನಡೆಯುತ್ತಿರುವ ಲೋಕಸಭಾ ಚುನಾವಣೆಯ (Lok Sabha Elections)  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತ ಅವರ ನ್ಯಾಯಪೀಠ ಮಂಗಳವಾರ (ಮೇ 7) ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಶೀಲಿಸುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಅರವಿಂದ್ ಕೇಜ್ರಿವಾಲ್ ಅವರ ವಕೀಲರು ಸಿದ್ಧರಿರುವಂತೆ ಸೂಚನೆ ನೀಡಿದೆ.

ರದ್ದಾಗಿರುವ ದೆಹಲಿ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಮಾರ್ಚ್ 21ರಂದು ಬಂಧಿಸಿದ್ದರು. ಕೆಳ ನ್ಯಾಯಾಲಯಗಳಿಂದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಮನೀಷ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಈ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾದ ಮೂರನೇ ಪ್ರಮುಖ ಆಮ್ ಆದ್ಮಿ ಪಕ್ಷದ ನಾಯಕರಾಗಿದ್ದಾರೆ. ರಾಜ್ಯಸಭಾ ಸಂಸದರಾಗಿರುವ ಸಂಜಯ್ ಸಿಂಗ್ ಸದ್ಯಕ್ಕೆ ಜಾಮೀನಿನ ಮೇಲೆ ಹೊರಗಿದ್ದಾರೆ.

ಇದನ್ನೂ ಓದಿ: ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು. ಇಡಿಯಿಂದ ಬಂದ 9 ಸಮನ್ಸ್‌ಗಳಿಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ ಎಂದು ಅವರು ಹೇಳಿದರು. ಹಾಜರಾಗದಿರುವುದು ಬಂಧನಕ್ಕೆ ಆಧಾರವಾಗುವುದಿಲ್ಲ ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Fri, 3 May 24