ಕೋಟಾ: ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ ಎಂದ ಸುಪ್ರೀಂಕೋರ್ಟ್​

|

Updated on: Nov 21, 2023 | 9:29 AM

ಕೋಟಾ ಆತ್ಮಹತ್ಯೆ ಪ್ರಕರಣದಲ್ಲಿ ಮಕ್ಕಳ ಪೋಷಕರೇ ಹೊಣೆಗಾರರೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋಟಾದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣಕ್ಕೆ ಪೋಷಕರು ಮಾತ್ರ ಕಾರಣ ಎಂದು ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಾಲಯ ಹೇಳಿದೆ. ಇದರೊಂದಿಗೆ ಕೋಚಿಂಗ್ ಸೆಂಟರ್‌ಗಳಿಗೆ ಲಗಾಮು ಹಾಕಲು ಕೋರ್ಟ್ ನಿರಾಕರಿಸಿದೆ. ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 24 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಟಾ: ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ ಎಂದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Image Credit source: India Today
Follow us on

ಕೋಟಾ(Kota) ಆತ್ಮಹತ್ಯೆ ಪ್ರಕರಣದಲ್ಲಿ ಮಕ್ಕಳ ಪೋಷಕರೇ ಹೊಣೆಗಾರರೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋಟಾದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣಕ್ಕೆ ಪೋಷಕರು ಮಾತ್ರ ಕಾರಣ ಎಂದು ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಾಲಯ ಹೇಳಿದೆ. ಇದರೊಂದಿಗೆ ಕೋಚಿಂಗ್ ಸೆಂಟರ್‌ಗಳಿಗೆ ಲಗಾಮು ಹಾಕಲು ಕೋರ್ಟ್ ನಿರಾಕರಿಸಿದೆ. ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 24 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಷಕರು ತಮ್ಮ ಮಕ್ಕಳಿಂದ ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಇದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಹೆಜ್ಜೆ ಇಡುತ್ತಾರೆ. ಮಕ್ಕಳ ಆತ್ಮಹತ್ಯೆಗೆ ಕೋಚಿಂಗ್ ಸೆಂಟರ್‌ಗಳೇ ಕಾರಣ ಎಂದು ಮುಂಬೈ ಮೂಲದ ವೈದ್ಯ ಅನಿರುದ್ಧ್ ನಾರಾಯಣ್ ಮಲ್ಪಾನಿ ​​ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದರೊಂದಿಗೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಕನಿಷ್ಠ ಗುಣಮಟ್ಟವನ್ನು ಕಾಯ್ದುಕೊಳ್ಳುವ ಬಗ್ಗೆಯೂ ಅವರು ತಮ್ಮ ಅರ್ಜಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಕಾನೂನು ರೂಪಿಸಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು, ತಪ್ಪು ಮಕ್ಕಳ ಪೋಷಕರಲ್ಲಿದೆಯೇ ಹೊರತು ಕೋಚಿಂಗ್ ಸಂಸ್ಥೆಗಳದ್ದಲ್ಲ.

ಮತ್ತಷ್ಟು ಓದಿ: ಕೋಟಾದಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಇದು 17ನೇ ಪ್ರಕರಣ

ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ವಯಸ್ಸು 14-16 ವರ್ಷಗಳು. ಈ ವರ್ಷ ರಾಜಸ್ಥಾನದ ಕೋಟಾದಲ್ಲಿ ನೀಟ್ ಮತ್ತು ಜೆಇಇ ಕೋಚಿಂಗ್‌ಗೆ ಬಂದ 24 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಅಂಕಿ ಅಂಶವು ಕಳೆದ 8 ವರ್ಷಗಳಲ್ಲಿಯೇ ಅತ್ಯಧಿಕವಾಗಿದೆ. ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ತರಬೇತಿ ಸಂಸ್ಥೆಗಳಿಗೆ ವಿಶೇಷ ಶಿಫಾರಸುಗಳನ್ನು ಸಹ ಮಾಡಲಾಗಿದೆ. ಇಷ್ಟೆಲ್ಲಾ ಇದ್ದರೂ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಮುಖವಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ