ರಾಜಕೀಯ ಹಾಗೂ ಧರ್ಮ ಬೇರ್ಪಟ್ಟಾಗ ದ್ವೇಷಪೂರಿತ ಭಾಷಣಗಳು ನಿಲ್ಲುತ್ತವೆ: ಸುಪ್ರೀಂಕೋರ್ಟ್​

ದ್ವೇಷಪೂರಿತ ಭಾಷಣವನ್ನು ನಿಲ್ಲಿಸಬೇಕೆಂದರೆ ಧರ್ಮವನ್ನು ರಾಜಕೀಯದಿಂದ ಬೇರ್ಪಡಿಸಬೇಕು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ರಾಜಕೀಯವನ್ನು ಧರ್ಮದಿಂದ ಬೇರ್ಪಡಿಸುವವರೆಗೆ ನಾವು ದ್ವೇಷದ ಭಾಷಣವನ್ನು ತೊಡೆದುಹಾಕಲು ಸಾಧ್ಯವಿಲ್ಲ.

ರಾಜಕೀಯ ಹಾಗೂ ಧರ್ಮ ಬೇರ್ಪಟ್ಟಾಗ ದ್ವೇಷಪೂರಿತ ಭಾಷಣಗಳು ನಿಲ್ಲುತ್ತವೆ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on: Mar 30, 2023 | 8:42 AM

ದ್ವೇಷಪೂರಿತ ಭಾಷಣವನ್ನು ನಿಲ್ಲಿಸಬೇಕೆಂದರೆ ಧರ್ಮವನ್ನು ರಾಜಕೀಯದಿಂದ ಬೇರ್ಪಡಿಸಬೇಕು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ರಾಜಕೀಯವನ್ನು ಧರ್ಮದಿಂದ ಬೇರ್ಪಡಿಸುವವರೆಗೆ ನಾವು ದ್ವೇಷದ ಭಾಷಣವನ್ನು ತೊಡೆದುಹಾಕಲು ಸಾಧ್ಯವಿಲ್ಲ. ರಾಜಕಾರಣಿಗಳು ಧರ್ಮವನ್ನು ಬಳಸುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಮ್ಮ ದೇಶದಲ್ಲಿ ಧರ್ಮ ಮತ್ತು ರಾಜಕೀಯ ಒಂದಕ್ಕೊಂದು ಹೆಣೆದುಕೊಂಡಿದೆ. ದ್ವೇಷದ ಭಾಷಣಗಳಿಗೆ ಇವೇ ಕಾರಣ. ಒಂದೊಂದು ಧರ್ಮದವರ ಮನವೊಲಿಸಲು ಮತ್ತೊಂದು ಧರ್ಮವನ್ನು ತೆಗಳುವ ಕೆಲಸವಾಗುತ್ತಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಕೆಎಂ ಜೋಸೆಫ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ಪೀಠವು ದ್ವೇಷದ ಭಾಷಣವನ್ನು ವಿಷವರ್ತುಲವೆಂದು ಬಣ್ಣಿಸಿದೆ. ಸಹೋದರತ್ವದ ಕಲ್ಪನೆಯು ಹೋಗಿ ಎಲ್ಲರ ಮನಸ್ಸಿನಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.

ಪಂಡಿತ್ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರಂತಹ ಭಾಷಣಕಾರರನ್ನು ದೇಶವು ಹೊಂದಿದ್ದ ಕಾಲವೊಂದಿತ್ತು. ಅವರ ಭಾಷಣ ಕೇಳಲು ದೂರದ ಊರುಗಳಿಂದ ಮಧ್ಯರಾತ್ರಿ ಜನ ಬರುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವ್ಯಕ್ತಿಗಳ ಮನಸ್ಥಿತಿ ಬದಲಾಗುತ್ತಿದೆ.

ಮತ್ತಷ್ಟು ಓದಿ: ದ್ವೇಷಪೂರಿತ ಭಾಷಣ ಪ್ರಕರಣ: SP ನಾಯಕ ಅಜಂ ಖಾನ್​ಗೆ ಜಾಮೀನು

ಪ್ರತಿಯೊಬ್ಬ ಪ್ರಜೆಯೂ ಸಂಯಮದಿಂದ ವರ್ತಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದ ಜನತೆಯು ಬೇರೆಯವರನ್ನು ಅವಮಾನಿಸುವುದಿಲ್ಲ ಎಂದು ಪ್ರಮಾಣ ಮಾಡಬೇಕು. ರಾಜಕೀಯ ಮತ್ತು ಧರ್ಮ ಎರಡೂ ಪ್ರತ್ಯೇಕವಾದಾಗ ಮಾತ್ರ ಇದು ಕೊನೆಗೊಳ್ಳುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಂದರೆ ರಾಜಕೀಯದಲ್ಲಿ ಧರ್ಮದ ಬಳಕೆ ನಿಲ್ಲುತ್ತದೆ.

ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ನ್ಯಾಯಾಲಯವು ಇತ್ತೀಚಿನ ತೀರ್ಪಿನಲ್ಲಿ ಹೇಳಿರುವುದನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೋಸೆಫ್ ನೆನಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್