AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಮನವಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇದೀಗ ಮತ್ತೆ ಇವಿಎಂ ಮತಗಳ ಎಣಿಕೆ ಜೊತೆಗೆ ವಿವಿಪ್ಯಾಟ್ ಸ್ಲಿಪ್ ಎಣಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಅಸ್ತಿತ್ವದಲ್ಲಿರುವ ಪದ್ಧತಿಯ ಬದಲು ಎಲ್ಲ ವಿವಿಪ್ಯಾಟ್ ಎಣಿಕೆಗೆ ಸೂಚನೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಜೊತೆಗೆ ಪ್ರತಿಪಕ್ಷಗಳ ಅಭಿಪ್ರಾಯವನ್ನೂ ಕೋರಿದೆ.

ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಮನವಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಸುಪ್ರೀಂ ನೋಟಿಸ್
ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಮನವಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಸುಪ್ರೀಂ ನೋಟಿಸ್
Ganapathi Sharma
|

Updated on: Apr 02, 2024 | 8:12 AM

Share

ನವದೆಹಲಿ, ಏಪ್ರಿಲ್ 2: ಚುನಾವಣೆಗಳಲ್ಲಿ ಇವಿಂಗಳ (EVMs) ಜತೆ ಎಲ್ಲ ವಿವಿಪ್ಯಾಟ್ ಸ್ಲಿಪ್‌ಗಳನ್ನು ಎಣಿಕೆ ಮಾಡುವಂತೆ ಕೋರಿ ವಕೀಲ ಮತ್ತು ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಇವಿಎಂ ಮತ್ತು ವಿವಿಪ್ಯಾಟ್‌ ಎಲ್ಲವನ್ನೂ ಒಟ್ಟಿಗೆ ಎಣಿಕೆ ಮಾಡುವುದು ಸಾಧ್ಯವೇ ಎಂಬ ಬಗ್ಗೆ ಉತ್ತರಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿತು.

ಪ್ರಸ್ತುತ, ಕೇವಲ ಐದು ವಿವಿಪ್ಯಾಟ್ ಸ್ಲಿಪ್‌ಗಳನ್ನು ಪರಿಶೀಲಿಸುವ ಪದ್ಧತಿ ಅಸ್ತಿತ್ವದಲ್ಲಿದೆ. ಇದರ ಬದಲಾಗಿ ವಿವಿಪ್ಯಾಟ್ ಸ್ಲಿಪ್‌ಗಳ ಸಂಪೂರ್ಣ ಎಣಿಕೆಗೆ ವಿಪಕ್ಷಗಳು ಸಹ ಒತ್ತಾಯಿಸಿವೆ. ನಾಲ್ಕು ವಾರಗಳಲ್ಲಿ ಈ ಬಗ್ಗೆ ವಿರೋಧ ಪಕ್ಷಗಳಿಂದ ಉತ್ತರ ಕೇಳಲಾಗಿದೆ.

ವಿವಿಪ್ಯಾಟ್ ಪರಿಶೀಲನೆಯನ್ನು ಅನುಕ್ರಮವಾಗಿ ನಡೆಸಲಾಗುವುದು ಎಂದು ಹೇಳಿರುವ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸಂವಿಧಾನದ ಪರಿಚ್ಛೇದ 19(1) (ಎ) ಮತ್ತು 21ರ ಪ್ರಕಾರ ಮಾಹಿತಿಯ ಹಕ್ಕನ್ನು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗವಾಗಿ ಪರಿಗಣಿಸಲಾಗಿದೆ. ಹೀಗಾಗಿ, ಚುನಾವಣೆಗಳು ನ್ಯಾಯಸಮ್ಮತವಾಗಿರುವುದು ಮಾತ್ರವಲ್ಲ ಪಾರದರ್ಶಕವಾಗಿರಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮೇ 17 ರಂದು ಅರ್ಜಿಯ ಮುಂದಿನ ವಿಚಾರಣೆ ನಡೆಯಲಿದೆ. ಸುಮಾರು 24 ಲಕ್ಷ ವಿವಿಪ್ಯಾಟ್‌ಗಳ ಖರೀದಿಗೆ ಸರ್ಕಾರವು ಸುಮಾರು 5,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಆದರೆ ಪ್ರಸ್ತುತ, ಸುಮಾರು 20,000 ವಿವಿಪ್ಯಾಟ್ ಸ್ಲಿಪ್‌ಗಳನ್ನು ಮಾತ್ರ ಪರಿಶೀಲಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ತನಿಖಾ ಸಂಸ್ಥೆಗಳು ದೇಶದ ವಿರುದ್ಧವಿರುವ ಅಪರಾಧಗಳ ಬಗ್ಗೆ ಗಮನ ಹರಿಸಲಿ: ಸಿಜೆಐ

2019ರಲ್ಲಿ ಸುಪ್ರೀಂ ಮೆಟ್ಟಿಲೇರಿದ್ದ ವಿಪಕ್ಷ ನಾಯಕರು

2019 ರ ಲೋಕಸಭೆ ಚುನಾವಣೆಗೆ ಮುನ್ನವೇ 21 ವಿರೋಧ ಪಕ್ಷಗಳ ನಾಯಕರು ಇವಿಎಂಗಳ ಕನಿಷ್ಠ 50ರಷ್ಟು ವಿವಿಪ್ಯಾಟ್ ಪರಿಶೀಲನೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಕೇಂದ್ರ ಚುನಾವಣಾ ಆಯೋಗ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇವಿಎಂ ಮತಗಳ‌ ಜೊತೆಗೆ ಕೇವಲ ಒಂದು ವಿವಿಪ್ಯಾಟ್ ಚೀಟಿಯನ್ನು ಮಾತ್ರ ತಾಳೆ‌ ಹಾಕುತ್ತಿತ್ತು. 2019 ರ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಈ ಸಂಖ್ಯೆಯನ್ನು 1 ರಿಂದ 5 ಕ್ಕೆ ಹೆಚ್ಚಿಸಿತು. ಇದೀಗ ಎಲ್ಲಾ ವಿವಿಪ್ಯಾಟ್ ಮತ ಚೀಟಿಗಳನ್ನು ಲೆಕ್ಕ ಹಾಕುವಂತೆ ಸುಪ್ರೀಂಕೋರ್ಟ್​​​​ಗೆ ಅರ್ಜಿ ಸಲ್ಲಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!