ಧಾರ್ಮಿಕ ಆರಾಧನಾ ಸ್ಥಳಗಳ ಪುನರುಜ್ಜೀವನದಲ್ಲಿ ಸಮಾನತೆ; ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸುಪ್ರೀಂ ಸೂಚನೆ

Supreme Court: 1991ರ ಧಾರ್ಮಿಕ ಆರಾಧಾನಾ ಸ್ಥಳಗಳ ಕಾನೂನು ಪ್ರಶ್ನಿಸಿ ಬಿಜೆಪಿ ನಾಯಕಿ ಅಶ್ವಿನಿ‌ ಉಪಾಧ್ಯಾಯ ಸಲ್ಲಿಸಿದ ಸಾರ್ವಜನಿಕ‌ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ನಿಲುವು ತಿಳಿಸಲು ಸೂಚಿಸಿದೆ.

ಧಾರ್ಮಿಕ ಆರಾಧನಾ ಸ್ಥಳಗಳ ಪುನರುಜ್ಜೀವನದಲ್ಲಿ ಸಮಾನತೆ; ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​
Follow us
guruganesh bhat
|

Updated on:Mar 12, 2021 | 6:43 PM

ದೆಹಲಿ: ‘ಹಿಂದೂಗಳು ಶ್ರೀಕೃಷ್ಣನ ಜನ್ಮಸ್ಥಳ ಮಥುರೆಯ ಪುನರುಜ್ಜೀವನಕ್ಕಾಗಿ ನೂರಾರು ವರ್ಷಗಳಿಂದ ಹೋರಾಡುತ್ತಿದ್ದಾರೆ. ಆದರೆ, ಸರ್ಕಾರ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯೊಂದನ್ನೇ ಅಭಿವೃದ್ಧಿಪಡಿಸಿದೆ. ಶ್ರೀಕೃಷ್ಣನ ಜನ್ಮಸ್ಥಳವನ್ನು ಪುನರುಜ್ಜೀವನಗೊಳಿಸುವುದರಿಂದ ಹೊರಗಿಟ್ಟಿದೆ. ಎರಡೂ ಅವತಾರಗಳು ಮಹಾವಿಷ್ಣುವಿನದೇ  ಆದರೂ ಒಂದು ಅವತಾರದ ಜನ್ಮಭೂಮಿಯನ್ನು ಪುನರುಜ್ಜೀವನಗೊಳಿಸಿಲ್ಲ’ ಎಂದು ದೂರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಆಲಿಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿಲುವು ತಿಳಿಸುವಂತೆ ಸೂಚನೆ ನೀಡಿದೆ.

1991ರ ಧಾರ್ಮಿಕ ಆರಾಧಾನಾ ಸ್ಥಳಗಳ ಕಾನೂನು ಪ್ರಶ್ನಿಸಿ ಬಿಜೆಪಿ ನಾಯಕಿ ಅಶ್ವಿನಿ‌ ಉಪಾಧ್ಯಾಯ ಸಲ್ಲಿಸಿದ ಸಾರ್ವಜನಿಕ‌ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ನಿಲುವು ತಿಳಿಸಲು ಸೂಚಿಸಿದೆ. 1947 ಅಗಸ್ಟ್ 15 ರಂದು ಧಾರ್ಮಿಕ ಆರಾಧನಾ ಸ್ಥಳಗಳ ಸ್ವರೂಪ ಹೇಗಿತ್ತೋ ಭವಿಷ್ಯದಲ್ಲೂ ಹಾಗೇ ಇರಬೇಕು ಎಂಬ ಕಾನೂನನ್ನು ಜಾರಿಗೊಳಿಸಲಾಗಿತ್ತು. ಆದರೆ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ಮಾತ್ರ ಈ ಕಾನೂನಿಂದ ದೂರವಿಡಲಾಗಿತ್ತು.

ಸಂವಿಧಾನದ ಆರ್ಟಿಕಲ್ 49 ಮತ್ತು ಆರ್ಟಿಕಲ್ 51A ಗಳ ಪ್ರಕಾರ ರಾಜ್ಯ ಆಡಳಿತಗಳು ಐತಿಹಾಸಿಕ ಸ್ಥಳಗಳನ್ನು ಕಾಪಾಡಬೇಕು. ಜತೆಗೆ ಧಾರ್ಮಿಕ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ಆದರೆ ಸರ್ಕಾರ  ತನ್ನ ಈ ಎರಡು ಕರ್ತವ್ಯಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಅರ್ಜಿದಾರರು ದೂರಿದ್ದರು. ಧಾರ್ಮಿಕ ಆರಾಧನಾ ಸ್ಥಳಗಳನ್ನು ಪುನರುಜ್ಜೀವನಗೊಳಿಸುವಲ್ಲಿ ಸರ್ಕಾರ ಸಮಾನತೆಯನ್ನು  ಅನುಸರಿಸಿಲ್ಲ ಎಂದು ಸಹ ಅರ್ಜಿ ವಿವರಿಸಿತ್ತು.

ಸಾರ್ವಜನಿಕ ಹಿತಾಸಕ್ತಿ‌ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಎ.ಬೋಬ್ಡೆ ಅವರು, ಕೇಂದ್ರ ಗೃಹ ಇಲಾಖೆ, ಕಾನೂನು‌ ಮತ್ತು ಸಂಸ್ಕೃತಿ ಇಲಾಖೆಗಳಿಗೆ ಈ ಕುರಿತು ನಿಲುವು ವ್ಯಕ್ತಪಡಿಸಲು ಸೂಚನೆ ನೀಡಿದೆ.  1991ರ ಕಾನೂನಿನಿಂದ ಧಾರ್ಮಿಕ ಆರಾಧನಾ ಸ್ಥಳಗಳ ಪುನರುಜ್ಜೀವನದಲ್ಲಿ ಸಮಾನತೆ ಕಾಪಾಡಲು ಸಾಧ್ಯವಾಗಿಲ್ಲ ಎಂದು ಸ್ವತಃ ವಕೀಲೆಯೂ ಆಗಿರುವ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು‌.

ಹಿಂದೂ, ಬೌದ್ಧ, ಸಿಖ್ ಮತ್ತು ಜೈನ ಸಮುದಾಯಗಳ ಧಾರ್ಮಿಕ‌ ಆರಾಧನಾ ಸ್ಥಳಗಳು 1947 ರ ಕಾನೂನು ಮುಂಚೆ ಹೇಗಿದ್ದವೋ ಹಾಗೇ ಇರಬೇಕು ಎಂದು ಸೂಚಿಸುತ್ತಿತ್ತು.

ಇಂದು ಇನ್ನೊಂದು ಮಹತ್ವದ ನಿರ್ಣಯ ನೀಡಿದ ಸುಪ್ರೀಂ

ಇಂದು ಸುಪ್ರೀಂ ಕೋರ್ಟ್ ಇನ್ನೊಂದು ಮಹತ್ವದ ನಿರ್ಣಯ ನೀಡಿದೆ. ಸರ್ಕಾರಿ ಉದ್ಯೋಗಿ, ಅಧಿಕಾರಿಗಳನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕಳೆದ ವರ್ಷ ನಡೆದಿದ್ದ ಗೋವಾ ರಾಜ್ಯದ ಸ್ಥಳೀಯ ಪಾಲಿಕೆ ಚುನಾವಣೆಯಲ್ಲಿ ಕಾನೂನು ಕಾರ್ಯದರ್ಶಿಯನ್ನೆ ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದ ಗೋವಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ನ ಈ ತೀರ್ಪು ಹಿನ್ನೆಡೆ ಉಂಟುಮಾಡಿದೆ. ಅಲ್ಲದೇ ಗೋವಾ ಸರ್ಕಾರ ಮಾಡಿದ್ದ ನೇಮಕಾತಿ ಕಾನೂನು ಬಾಹಿರ ಎಂದಿರುವ ಸರ್ವೋಚ್ಛ ನ್ಯಾಯಾಲಯ ಚುನಾವಣಾ ಆಯುಕ್ತರ ನೇಮಕಾತಿಯನ್ನು ರದ್ದುಗೊಳಿಸಿದೆ.

ಯಾವುದೇ ಸರ್ಕಾರಿ ಉದ್ಯೋಗಿಯೂ ಸಹ ಚುನಾವಣಾ ಆಯುಕ್ತರಾಗಿ ನೇಮಕವಾಗುವುದು ಪ್ರಜಾಪ್ರಭುತ್ವ ಪದ್ಧತಿಯಲ್ಲಿ ತಕ್ಕುದಾದ ನಡೆಯಲ್ಲ. ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಪ್ರಜಾಪ್ರಭುತ್ವವಾದಿ ಆಡಳಿತದಲ್ಲಿ ಕೊಂಚವೂ ಕಡಿಮೆಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಸರ್ಕಾರವೊಂದರ ಉದ್ಯೋಗಿಯನ್ನು ಚುನಾವಣಾ ಆಯೋಗದಲ್ಲಿ ಪ್ರಮುಖ ಹುದ್ದೆಯಾದ ಚುನಾವಣಾ ಆಯುಕ್ತರನ್ನಾಗಿ ನೇಮಿಸುವುದನ್ನು ‘ಅಪಹಾಸ್ಯ’ ಎಂದು ವ್ಯಾಖ್ಯಾನಿಸಿದೆ. ಅಲ್ಲದೆ, ಈ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿಂಟನ್​ ನಾರೀಮನ್, ಸರ್ಕಾರಿ ಉದ್ಯೋಗಿಯೋರ್ವರು ಚುನಾವಣೆ ನಡೆಸುವ ಆಯುಕ್ತರಾ್ಗಿ ನೇಮಕವಾಗಿದ್ದು ಪ್ರಜಾಪ್ರಭುತ್ವ ಪದ್ಧತಿಯಲ್ಲಿ ಸಮರ್ಪಕ ಉಪಕ್ರಮವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‘

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

Published On - 6:40 pm, Fri, 12 March 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ