ಭೀಮಾ ಕೋರೆಗಾಂವ್ ಪ್ರಕರಣ: ಮಾಜಿ ಪ್ರೊಫೆಸರ್ ಜಾಮೀನು ಅರ್ಜಿ ಬಗ್ಗೆ ಎನ್ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಮಾಜಿ ಪ್ರೊಫೆಸರ್ ಬಾಬು ಪರ ವಾದ ಮಂಡಿಸಿದ ವಕೀಲ ಪಯೋಶಿ ರಾಯ್, ಅರ್ಜಿದಾರರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಮತ್ತು ಅಲ್ಪಾವಧಿಯ ಜಾಮೀನು ಕೋರಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎನ್‌ಐಎ ಮತ್ತು ಮಹಾರಾಷ್ಟ್ರ ಸರ್ಕಾರವು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಸೂಚಿಸಿದ ಮೂರು ವಾರಗಳ ನಂತರ ನ್ಯಾಯಾಲಯ ಈ ಬಗ್ಗೆ ವಿಚಾರಣೆ ನಡೆಸಲಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಮಾಜಿ ಪ್ರೊಫೆಸರ್ ಜಾಮೀನು ಅರ್ಜಿ ಬಗ್ಗೆ ಎನ್ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Jan 03, 2024 | 9:06 PM

ದೆಹಲಿ ಜನವರಿ 03: ಭೀಮಾ ಕೋರೆಗಾಂವ್ (Bhima Koregaon case) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ನಕ್ಸಲ್ ಸಂಘಟನೆಯಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಅಥವಾ ಸಿಪಿಐ (ಮಾವೋವಾದಿ) ನಂಟು ಹೊಂದಿರುವ ಆರೋಪ ಹೊತ್ತಿರುವ ದೆಹಲಿ ವಿವಿಯ ಮಾಜಿ ಪ್ರೊಫೆಸರ್ ಹನಿ ಬಾಬು (Hany Babu) ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್(Supreme Court) ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‌ಐಎ) ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕರೋಲ್ ಅವರ ಪೀಠವು ಸೆಪ್ಟೆಂಬರ್ 19, 2022 ರಂದು ಬಾಂಬೆ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ಬಾಬು ಸಲ್ಲಿಸಿದ ಮನವಿಯ ಮೇಲೆ ನೋಟಿಸ್ ನೀಡಿತು. ಪುಣೆಯಲ್ಲಿ 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದ ಹಿಂದಿನ ಪಿತೂರಿಯ ಭಾಗವಾಗಿದ್ದ ಆರೋಪದ ಪ್ರಕರಣದಲ್ಲಿ ಅವರಿಗೆ ಜಾಮೀನು ನಿರಾಕರಿಸಲಾಗಿದೆ.

ಮಾಜಿ ಪ್ರೊಫೆಸರ್ ಪರ ವಾದ ಮಂಡಿಸಿದ ವಕೀಲ ಪಯೋಶಿ ರಾಯ್, ಅರ್ಜಿದಾರರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಮತ್ತು ಅಲ್ಪಾವಧಿಯ ಜಾಮೀನು ಕೋರಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎನ್‌ಐಎ ಮತ್ತು ಮಹಾರಾಷ್ಟ್ರ ಸರ್ಕಾರವು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಸೂಚಿಸಿದ ಮೂರು ವಾರಗಳ ನಂತರ ನ್ಯಾಯಾಲಯ ಈ ಬಗ್ಗೆ ವಿಚಾರಣೆ ನಡೆಸಲಿದೆ.

ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕೆಲವು ಕೋಡ್ ನೇಮ್‌ಗಳನ್ನು ಹೊರತುಪಡಿಸಿ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ರಾಯ್ ನ್ಯಾಯಾಲಯಕ್ಕೆ ತಿಳಿಸಿದರು. ಪೀಠವು ದಾಖಲೆಗಳನ್ನು ಪರಿಶೀಲಿಸಿತು ಮತ್ತು ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಬಾಬು ಅವರ ಪಾತ್ರದ ಬಗ್ಗೆ ಹೈಕೋರ್ಟ್ ವಿವರವಾಗಿ ಚರ್ಚಿಸಿದೆ ಎಂದು ಕಂಡುಹಿಡಿದಿದೆ.

ಬಾಬು ಅವರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾರೆ. ಏತನ್ಮಧ್ಯೆ ಬಾಬು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎನ್ಐಎ ಆರೋಪಿಸಿತ್ತು. ಫೆಬ್ರವರಿ 2022 ರಲ್ಲಿ, ವಿಶೇಷ ಎನ್ಐಎ ನ್ಯಾಯಾಲಯವು ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಸೂಚಿಯನ್ನು ಪ್ರಚಾರ ಮಾಡುವಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ಹೈಕೋರ್ಟ್ ತನ್ನ ಸೆಪ್ಟೆಂಬರ್ 2022 ರ ತೀರ್ಪಿನಲ್ಲಿ ಎನ್ಐಎ ಸಲ್ಲಿಸಿದ ಸಂಪೂರ್ಣ ದಾಖಲೆಯನ್ನು ಪರಿಶೀಲಿಸಿತು. ಬಾಬು ಕೇವಲ ನಿಷ್ಕ್ರಿಯ ಸದಸ್ಯರಲ್ಲ, ಆದರೆ ಸಕ್ರಿಯ ಸದಸ್ಯ ಮತ್ತು ದಾಖಲೆಯಲ್ಲಿರುವ ವಿಷಯವು ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ.” ಈ ಪಿತೂರಿಯ ಅನುಸಾರವಾಗಿ, ಪೊಲೀಸರು, ಸಶಸ್ತ್ರ ಪಡೆಗಳು ಮತ್ತು ಸಾಂವಿಧಾನಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಸಂಘಟನೆ ಹಲವಾರು ಚಟುವಟಿಕೆಗಳನ್ನು ನಡೆಸಿರುವುದಾಗಿ ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್ ಜಾಮೀನು ಅರ್ಜಿ ಮೂರು ತಿಂಗಳ ಕಾಲ  ಮುಂದೂಡಿದ ಸುಪ್ರೀಂಕೋರ್ಟ್

“ಅಪೀಲುದಾರರು ಕೇವಲ ಸಂಘಟನೆಯೊಂದಿಗೆ ಸಹಾನುಭೂತಿ ಹೊಂದಿರುವುದಿಲ್ಲ ಆದರೆ ಸಿಪಿಐ (ಮಾವೋವಾದಿ) ನ ಸಂಘಟನೆಯಾದ ರೆವಲ್ಯೂಷನರಿ ಡೆಮಾಕ್ರಟಿಕ್ ಫ್ರಂಟ್‌ನ ಚಟುವಟಿಕೆಗಳನ್ನು ನಡೆಸುವುದು ಸೇರಿದಂತೆ ಗಣನೀಯ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ. ಬಾಬು ಅವರು ರಹಸ್ಯ ಸಂವಹನಕ್ಕೆ ಪ್ರಮುಖವಾದ ಕೋಡ್ ರಚನೆಯನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಭಯೋತ್ಪಾದನೆಯನ್ನು ಸೃಷ್ಟಿಸುವ ಸಂಘಟನೆಯ ದೊಡ್ಡ ಉದ್ದೇಶದ ಭಾಗವಾಗಿ ಪಕ್ಷ ನಿರ್ಮಾಣ ಮತ್ತು ಜನರನ್ನು ಸೇರಿಸುವಲ್ಲಿ ಅವರ ಪಾತ್ರವನ್ನು ತೋರಿಸಲು ಸಾಕ್ಷ್ಯಗಳು ಲಭ್ಯವಿವೆ ಎಂದು ಹೈಕೋರ್ಟ್ ಗಮನಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್