ಲೈಂಗಿಕ ಕಿರುಕುಳ : ಮಹಿಳಾ ನ್ಯಾಯಾಧೀಶೆ ಬರೆದ ಪತ್ರದ ಆಧಾರದ ಮೇಲೆ ಕ್ರಮ ಕೈಗೊಂಡ ಸುಪ್ರೀಂಕೋರ್ಟ್
ಉತ್ತರ ಪ್ರದೇಶದ ಬುಂದೇಲ್ಖಂಡ್ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಮಹಿಳಾ ಸಿವಿಲ್ ನ್ಯಾಯಾಧೀಶೆಯೊಬ್ಬರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರಬರೆದಿದ್ದಾರೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸುಪ್ರೀಂಕೋರ್ಟ್ ತನಿಖೆಗೆ ಮುಂದಾಗಿದೆ.
ಉತ್ತರ ಪ್ರದೇಶ(Uttar Pradesh)ದ ಬುಂದೇಲ್ಖಂಡ್ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಮಹಿಳಾ ಸಿವಿಲ್ ನ್ಯಾಯಾಧೀಶೆಯೊಬ್ಬರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರಬರೆದಿದ್ದಾರೆ. ಈ ಪತ್ರದಿಂದಾಗಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸುಪ್ರೀಂಕೋರ್ಟ್ ತನಿಖೆಗೆ ಮುಂದಾಗಿದೆ.
ಬಂದಾ ಸಿವಿಲ್ ನ್ಯಾಯಾಧೀಶೆಯಾಗಿರುವ ಅರ್ಪಿತಾ ಸಾಹು ಅವರು ಸಿಜೆಐಗೆ ಬರೆದ ಪತ್ರದಲ್ಲಿ, ಬಾರಾಬಂಕಿ ಸಿವಿಲ್ ನ್ಯಾಯಾಲಯದಲ್ಲಿ ಪೋಸ್ಟಿಂಗ್ ಸಮಯದಲ್ಲಿ ಅವರು ಅನುಭವಿಸಿದ ದೈಹಿಕ ಹಾಗೂ ಮಾನಸಿಕ ಹಿಂಸೆಯ ವಿವಿರಗಳನ್ನು ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಧೀಶರು ತನಗೆ ನೀಡಿದ ಕಿರುಕುಳವನ್ನು ಹಾಗೂ ನೋವಿನ ಕಥೆಯನ್ನು ವಿವರಿಸಿದ್ದಾರೆ.
ಅವರು ಬರೆದಿರುವ ಎರಡು ಪುಟಗಳ ಪತ್ರವು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ಲಭ್ಯವಾಗಿದೆ. ನ್ಯಾಯಾಧೀಶೆ ಸಾಹು ಅವರು ಜಿಲ್ಲಾ ನ್ಯಾಯಾಧೀಶರ ಅನುಚಿತ ಬೇಡಿಕೆಗಳು ಹಾಗೂ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾರೆ.
ಮತ್ತಷ್ಟು ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡಿದ ಆರೋಪ: ಶಿವಮೊಗ್ಗದ ಇಬ್ಬರು ಶಿಕ್ಷಕರು ಅಮಾನತು
ನಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳದಂತೆ ಹಲವು ಭಾರಿ ಕೇಳಿಕೊಂಡರೂ ತಮ್ಮ ಮಾತಿಗೆ ಕಿಂಚಿತ್ತು ಬೆಲೆಯೂ ಸಿಗಲಿಲ್ಲ, ರಾತ್ರಿ ಹೊತ್ತು ತಮ್ಮನ್ನು ಭೇಟಿಯಾಗುವಂತೆ ಜಿಲ್ಲಾ ನ್ಯಾಯಾಧೀಶರು ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಿದ್ದಾರೆ.
ಈ ಕುರಿತ ಹಲವು ಬಾರಿ ದೂರುಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಇದರಿಂದ ಬೇಸತ್ತು ತನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ಅನುಮತಿ ಕೋರಿ ಪತ್ರ ಬರೆಯುತ್ತಿದ್ದೇನೆ ಎಂದು ಸಿಜೆಐಗೆ ತಿಳಿಸಿದ್ದಾರೆ.
ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ, ನನ್ನನ್ನು ಕಾಲು ಕಸದಂತೆ ನಡೆಸಿಕೊಂಡಿದ್ದಾರೆ. ಇದೀಗ ಈ ವಿಚಾರ ಕುರಿತು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವರದಿ ಕೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಗ್ಗೆ ವರದಿಯನ್ನು ಕೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ