Lakhimpur Kheri ನಿಮ್ಮ ನಿಲುವೇನು?; ಲಖಿಂಪುರ ಖೇರಿ ಪ್ರಕರಣದ ಆರೋಪಿಗೆ ಜಾಮೀನು ರದ್ದು ಕೋರಿ ಯುಪಿ ಸರ್ಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರನ್ನು "ನಿಮ್ಮ ನಿಲುವು ಏನು? ಎಂದು ಕೇಳಿದೆ.

Lakhimpur Kheri ನಿಮ್ಮ ನಿಲುವೇನು?; ಲಖಿಂಪುರ ಖೇರಿ ಪ್ರಕರಣದ ಆರೋಪಿಗೆ ಜಾಮೀನು ರದ್ದು ಕೋರಿ ಯುಪಿ ಸರ್ಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
| Edited By: Rashmi Kallakatta

Updated on: Mar 30, 2022 | 3:11 PM

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ  (Lakhimpur Kheri violence case) ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ (Ashish Mishra) ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂಕೋರ್ಟ್ (Supreme Court) ಬುಧವಾರ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಅಕ್ಟೋಬರ್ 3, 2021 ರಂದು, ಅಜಯ್ ಮಿಶ್ರಾ ಅವರಿಗೆ ಸೇರಿದ ಒಂದು ವಾಹನ ಮತ್ತು ಬೆಂಗಾವಲು ವಾಹನ ರೈತರ ಗುಂಪಿನ ಮೇಲೆ ಹರಿದ ಪರಿಣಾಮ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು, ಒಂದು ವಾಹನದ ಚಾಲಕ ಮತ್ತು ಪತ್ರಕರ್ತ ಕೂಡ ಸಾವನ್ನಪ್ಪಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ನೇತೃತ್ವದ ಪೀಠವು ಬುಧವಾರ ಮೇಲ್ವಿಚಾರಣಾ ನ್ಯಾಯಾಧೀಶರ ವರದಿಯಿಂದ ಜಾಮೀನು ರದ್ದತಿಗೆ ಮೇಲ್ಮನವಿ ಸಲ್ಲಿಸಲು ಅವರು ಶಿಫಾರಸು ಮಾಡಿದ್ದಾರೆ ಎಂದು ತೋರುತ್ತದೆ ಎಂದು ಸೂಚಿಸಿದರು. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರನ್ನು “ನಿಮ್ಮ ನಿಲುವು ಏನು? ಎಂದು ಕೇಳಿದೆ. ನವೆಂಬರ್ 17, 2021 ರಂದು, ಪ್ರಕರಣದ ವಿಶೇಷ ತನಿಖಾ ತಂಡದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ಸುಪ್ರೀಂಕೋರ್ಟ್ ನೇಮಿಸಿತ್ತು.

ವರದಿಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಸೂಚನೆಗಳನ್ನು ಪಡೆಯಬೇಕಾಗುತ್ತದೆ ಎಂದು ಹಿರಿಯ ವಕೀಲರು ಹೇಳಿದರು. ಈ ಸಂಬಂಧ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿಗೆ ವಿಶೇಷ ತನಿಖಾ ತಂಡವು ಎರಡು ಪತ್ರಗಳನ್ನು ಬರೆದಿದೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಸೂಚಿಸಿದರು. ಮೇಲ್ವಿಚಾರಣಾ ನ್ಯಾಯಾಧೀಶರ ವರದಿಯಲ್ಲಿ ಈ ಪತ್ರಗಳನ್ನು ಉಲ್ಲೇಖಿಸಲಾಗಿದೆ ಎಂದು ಪೀಠ ಹೇಳಿದೆ. ಸೂಚನೆಗಳನ್ನು ಸ್ವೀಕರಿಸಿದ ನಂತರ ಜೇಠ್ಮಲಾನಿ ಅವರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಪತ್ರಗಳನ್ನು ಸ್ವೀಕರಿಸಿದಂತೆ ತೋರುತ್ತಿಲ್ಲ ಮತ್ತು ಪ್ರತಿಕ್ರಿಯಿಸಲು ಸಮಯ ಕೇಳಿದರು.  ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ಆಶಿಶ್ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡುವ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿದರು.

ಫೆಬ್ರವರಿ 10 ರಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಿತ್ತು.

ಹಿಂಸಾಚಾರಕ್ಕೆ ಬಲಿಯಾದ ಕೆಲವರ ಸಂಬಂಧಿಕರು ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಮಿಶ್ರಾ ಬಿಡುಗಡೆಯಾದ ನಂತರ, ಮಾರ್ಚ್ 10 ರಂದು ಪ್ರಕರಣದ ಒಬ್ಬ ಸಾಕ್ಷಿಯ ಮೇಲೆ ದಾಳಿ ನಡೆಸಲಾಯಿತು ಮತ್ತು ದಾಳಿಕೋರರು “ಆಶಿಶ್ ಮಿಶ್ರಾ ಜಾಮೀನಿನ ಮೇಲೆ ಹೊರಗಿದ್ದಾರೆ. ಆಡಳಿತ ಪಕ್ಷವು ಚುನಾವಣೆಯಲ್ಲಿ ಗೆದ್ದಿದೆ. ನಿಮ್ಮನ್ನು ನೋಡಿಕೊಳ್ತೇವೆ” ಎಂದು ಬೆದರಿಕೆ ಹಾಕಿದರು ಎಂದು ಹೇಳಿರುವ ಆರೋಪವಿದೆ.

ಆದಾಗ್ಯೂ, ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ರಾಜ್ಯವು ಆರೋಪಗಳನ್ನು ತಳ್ಳಿಹಾಕಿದೆ.  ಆರೋಪಿಸಿದಂತೆ ಮಾರ್ಚ್ 10 ರ ಘಟನೆಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.ಸಾಕ್ಷಿಯ ಮೇಲೆ ಕೆಲವರು ‘ಗುಲಾಲ್ (ಪುಡಿ ಬಣ್ಣಗಳು)’ ಎಸೆದ ನಂತರ ವಾಗ್ವಾದ ನಡೆದಿದೆ ಎಂದುಹೇಳಿದೆ. ತನಿಖೆಯ ಸಂದರ್ಭದಲ್ಲಿ, “ಗನ್ನರ್ ಮನೋಜ್ ಸಿಂಗ್ (ಈ ಗೌರವಾನ್ವಿತ ನ್ಯಾಯಾಲಯದ ಆದೇಶಗಳ ಪ್ರಕಾರ ಅವರನ್ನು ರಕ್ಷಿಸಲು ನಿಯೋಜಿಸಲಾಗಿದೆ) ಮತ್ತು ಘಟನೆಯ ಮೂವರು ಸ್ವತಂತ್ರ ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆಗೊಳಪಡಿಸಲಾಯಿತು. ಸಾಕ್ಷಿ ಮತ್ತು ಆಕ್ರಮಣಕಾರರ ನಡುವೆ ವಾಗ್ವಾದ ನಡೆದಿದ್ದು ಗುಲಾಲ್ (ಬಣ್ಣದ ಪುಡಿ) ಎರಚಿದ್ದಕ್ಕಾಗಿತ್ತು ಎಂದು ನಾಲ್ವರು ಹೇಳಿದ್ದಾರೆ. ಪೀಠವು ಈಗ ಏಪ್ರಿಲ್ 4 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಇದನ್ನೂ ಓದಿ:30-40 ಕಾಶ್ಮೀರಿ ಪಂಡಿತರನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದ ಬಿಟ್ಟಾ ಕರಾಟೆಗೆ ಶಿಕ್ಷೆ ಸನಿಹ?-ಹತ್ಯೆಯಾದ ಸ್ನೇಹಿತನ ಕುಟುಂಬದಿಂದ ಕೋರ್ಟ್​ಗೆ ಅರ್ಜಿ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ