ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್, ರಾಜಕೀಯ ಪಕ್ಷಗಳ 'ಉಚಿತ ಗ್ಯಾರಂಟಿ' ಘೋಷಣೆಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯಗಳು ನಷ್ಟದಲ್ಲಿದ್ದರೂ ಉಚಿತ ಸೌಲಭ್ಯಗಳನ್ನು ನೀಡುವುದು ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗುತ್ತದೆ. ವಿವೇಚನಾರಹಿತವಾಗಿ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ ಆರ್ಥಿಕತೆ ಹದಗೆಡುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಶ್ರೀಮಂತ-ಬಡವ ಭೇದವಿಲ್ಲದೆ ಎಲ್ಲರಿಗೂ ಉಚಿತ ಸೌಲಭ್ಯಗಳನ್ನು ನೀಡುವ ಬದಲು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವಂತೆ ರಾಜ್ಯಗಳಿಗೆ ಸಲಹೆ ನೀಡಿದೆ.

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
Image Credit source: PTI

Updated on: Feb 19, 2026 | 1:29 PM

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ.

ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು, ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಹಲವಾರು ಶಿಫಾರಸುಗಳನ್ನು ಸಹ ನೀಡಿದೆ. ತಮಿಳುನಾಡು ವಿದ್ಯುತ್ ಮಂಡಳಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ತಮಿಳುನಾಡು ವಿದ್ಯುತ್ ಮಂಡಳಿಯು ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡುತ್ತಾ ಬಂದಿದೆ. ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್, ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ಉಚಿತ ಗ್ಯಾರಂಟಿ ಸಂಸ್ಕೃತಿಯು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ.

ನ್ಯಾಯಾಲಯ ಹೇಳಿದ್ದೇನು?
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಇತರ ನ್ಯಾಯಮೂರ್ತಿಗಳನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಹೆಚ್ಚಿನ ರಾಜ್ಯಗಳು ಈಗಾಗಲೇ ನಷ್ಟದಲ್ಲಿವೆ, ಆದರೆ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಸೌಲಭ್ಯಗಳನ್ನು ನೀಡುತ್ತಿವೆ ಎಂದು ಬಲವಾದ ಟೀಕೆ ಮಾಡಿತು. ಪಾವತಿಸಲು ಸಾಧ್ಯವಾಗದವರಿಗೆ ನೆರವು ನೀಡುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತ ವಸ್ತುಗಳನ್ನು ನೀಡುವುದು ತಪ್ಪು ನೀತಿ. ಜನರು ಬೆಳಗ್ಗೆಯಿಂದ ಸಂಜೆಯವರೆಗೆ ಉಚಿತ ಆಹಾರ, ಸೈಕಲ್ ಮತ್ತು ವಿದ್ಯುತ್ ಪಡೆದರೆ, ಕೆಲಸ ಮಾಡುವ ಮನೋಭಾವ ಕಡಿಮೆಯಾಗುತ್ತದೆ ಎಂದು ಹೇಳಿದೆ.

ಮತ್ತಷ್ಟು ಓದಿ: ಬಾಡಿಗೆದಾರರು ಎಂದಿಗೂ ಆ ಮನೆಯ ಮಾಲೀಕರಾಗಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ರಾಜ್ಯಗಳಿಗೆ ಸಲಹೆ
ಉಚಿತ ವಸ್ತುಗಳನ್ನು ವಿತರಿಸುವ ಬದಲು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸುವಂತೆ ನ್ಯಾಯಾಲಯವು ರಾಜ್ಯಗಳಿಗೆ ಸಲಹೆ ನೀಡಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಭಾರತದಲ್ಲಿ ನಾವು ಯಾವ ರೀತಿಯ ಸಂಸ್ಕೃತಿಯನ್ನು ಸೃಷ್ಟಿಸುತ್ತಿದ್ದೇವೆ? ಇದು ಮತ ಗಳಿಸುವ ನೀತಿಯಾಗುವುದಿಲ್ಲವೇ ಎಂದು ಕೇಳಿದರು. ಪ್ರಸ್ತುತ, ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಇತರ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯು ಅಂತಹ ಉಚಿತ ವಿದ್ಯುತ್ ಯೋಜನೆಗಳಿಗೆ ಯಾವ ನಿಯಮಗಳು ಅನ್ವಯಿಸುತ್ತವೆ ಎಂಬುದನ್ನು ನಿರ್ಧರಿಸುತ್ತದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 1:28 pm, Thu, 19 February 26

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us