AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ನ್ಯಾಯಸಮ್ಮತೆಯನ್ನು ಪದೇ ಪದೇ ಏಕೆ ಪ್ರಶ್ನಿಸುತ್ತೀರಿ; ಸುಪ್ರೀಂ ಕೋರ್ಟ್ ಛೀಮಾರಿ

ಇವಿಎಂಗಳ ಬಳಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಷಯವನ್ನು ಆಗಾಗ್ಗೆ ಪ್ರಸ್ತಾಪಿಸುವ ಅಗತ್ಯವನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಇವಿಎಂ ನ್ಯಾಯಸಮ್ಮತೆಯನ್ನು ಪದೇ ಪದೇ ಏಕೆ ಪ್ರಶ್ನಿಸುತ್ತೀರಿ; ಸುಪ್ರೀಂ ಕೋರ್ಟ್ ಛೀಮಾರಿ
ಸುಪ್ರೀಂ ಕೋರ್ಟ್
Ganapathi Sharma
|

Updated on: Sep 09, 2023 | 4:52 PM

Share

ನವದೆಹಲಿ, ಸೆಪ್ಟೆಂಬರ್ 9: ವಿದ್ಯುನ್ಮಾನ ಮತಯಂತ್ರಗಳ (EVMs) ನ್ಯಾಯಸಮ್ಮತೆಯನ್ನು ಪದೇ ಪದೇ ಏಕೆ ಪ್ರಶ್ನಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್​​ (Supreme Court) ಛೀಮಾರಿ ಹಾಕಿದೆ. ಶೇ 100ರಷ್ಟು ವಿವಿಪ್ಯಾಟ್ ಪರಿಶೀಲನೆಯ ಕಲ್ಪನೆಯು ಸೂಕ್ತವಲ್ಲ ಮತ್ತು ಇದು ಮತಪತ್ರ ವ್ಯವಸ್ಥೆಗೆ ಬದಲಾಗುವುದನ್ನು ಹೋಲುತ್ತದೆ. ಶೇ 100ರಷ್ಟು ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡುವುದು ಮತಪತ್ರಕ್ಕಿಂತ ಕೆಟ್ಟದು ಮತ್ತು ಇದು ಫಲಿತಾಂಶ ತಿರುಚುವಿಕೆಗೆ ಕಾರಣವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಅಫಿಡವಿಟ್​ನಲ್ಲಿ ತಿಳಿಸಿದ ನಂತರ ಸುಪ್ರೀಂ ಕೋರ್ಟ್​ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದವರನ್ನು ತರಾಟೆಗೆ ತೆಗೆದುಕೊಂಡಿದೆ.

ಇವಿಎಂಗಳ ಬಳಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಷಯವನ್ನು ಆಗಾಗ್ಗೆ ಪ್ರಸ್ತಾಪಿಸುವ ಅಗತ್ಯವನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಎಇವಿಎಂ ವಿರುದ್ಧದ ಅರ್ಜಿಗಳ ಹಾಗೂ ಅಸೋಷಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗದ ನಡುವಣ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಅವರು, ಚುನಾವಣಾ ಆಯೋಗ ವಿಸ್ತೃತ ಪಮಾಣ ಪತ್ರ ಸಲ್ಲಿಸಿದೆ. ಪದೇ ಪದೇ ಇವಿಎಂ ವಿಚಾರವನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಕಾಲತ್ತು ವಹಿಸಿರುವ ಪ್ರಶಾಂತ್ ಭೂಷಣ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಅರ್ಜಿದಾರರು ಅತಿಯಾದ ಅನುಮಾನಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಇಂತಹ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಚುನಾವಣಾ ಆಯೋಗವು ಸಲ್ಲಿಸಿರುವ ಪುಮಾಣಪತ್ರ ಅತ್ಯಂತ ವಿವರವಾಗಿದೆ. ಎಷ್ಟು ಬಾರಿ ಈ ವಿಚಾರವನ್ನು ಪ್ರಸ್ತಾಪಿಸುತ್ತೀರಿ? ಪ್ರತಿ 6 ರಿಂದ 8 ತಿಂಗಳಲ್ಲಿ ಹೊಸದಾಗಿ ಇವಿಎಂ ವಿಚಾರ ಪ್ರಸ್ತಾಪವಾಗುತ್ತಿದೆ ಎಂದು ನ್ಯಾಯಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: G20 Summit: ತಾಜ್ ಮಹಲ್‌ಗೆ ಭೇಟಿ ನೀಡಿದ ಇಂಡೋನೇಷ್ಯಾ ಅಧ್ಯಕ್ಷರ ಮಗ-ಸೊಸೆ

ಚುನಾವಣಾ ಆಯೋಗವು ವಿವರವಾದ ಪಮಾಣ ಪತ್ರವನ್ನು ಪರಿಶೀಲಿಸಿದ ನಂತರ ಅರ್ಜಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿತು. ಪ್ರಶಾಂತ್ ಭೂಷಣ್ ಅವರು ಚುನಾವಣಾ ಆಯೋಗ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸರಿಯಾದ ಮಾಹಿತಿಯನ್ನು ಒದಗಿಸಿರುವುದಿಲ್ಲ ಮತ್ತು ಸದರಿ ಪಿಐಎಲ್ ನ್ನು ಎರಡು ವಾರಗಳ ನಂತರ ಪಟ್ಟಿ ಮಾಡಬೇಕೆಂದು ಕೋರಿದರು. ಇದನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದ್ದಾರೆ. ಚುನಾವಣಾ ಆಯೋಗ ಸಲ್ಲಿಸಿರುವ ಪಮಾಣಪತ್ರವನ್ನು ವಿವರವಾಗಿ ಗಮನಿಸಿದ ನಂತರ ಅದನ್ನು ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ನಿರಾಕರಿಸಿದ್ದಾರೆ. ಅರ್ಜಿದಾರರಿಗೆ ಸೃಷ್ಟಿಕರಣ ಸಲ್ಲಿಸಲು ಒಂದು ವಾರಗಳ ಕಾಲಾವಕಾಶ ನೀಡಲಾಗಿದೆ ಮತ್ತು ಪ್ರಕರಣವನ್ನು ನವಂಬರ್ ತಿಂಗಳಲ್ಲಿ ವಿಚಾರಣೆಗೆ ಕೈಗತ್ತಿಕೂಳ್ಳುವುದಾಗಿ ತಿಳಿಸಿದರು.

ಈ ಹಿಂದೆ ಇವಿಎಂ ಸಮಗ್ರತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ನ್ಯಾಯಾಲಯಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅವುಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಎನ್ನುವುದಕ್ಕಿಂತ ಪ್ರಚಾರ ಹಿತಾಸಕ್ತಿ ಮೊಕದ್ದಮೆಗಳು ಎನ್ನಬಹುದು ಎಂದು ಚಾಟಿ ಬೀಸಿದ್ದವು ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು