6 ತಿಂಗಳಲ್ಲಿ ಅಮರಾವತಿಯನ್ನು ಆಂಧ್ರದ ರಾಜಧಾನಿಯಾಗಿ ಅಭಿವೃದ್ಧಿಪಡಿಸುವ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ

ರಾಜ್ಯಕ್ಕೆ ತನ್ನ ಮಹತ್ವಾಕಾಂಕ್ಷೆಯ 3 ರಾಜಧಾನಿ ಯೋಜನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಆಂಧ್ರಪ್ರದೇಶ ಸರ್ಕಾರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

6 ತಿಂಗಳಲ್ಲಿ ಅಮರಾವತಿಯನ್ನು ಆಂಧ್ರದ ರಾಜಧಾನಿಯಾಗಿ ಅಭಿವೃದ್ಧಿಪಡಿಸುವ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ
ಸುಪ್ರೀಂ ಕೋರ್ಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 28, 2022 | 2:54 PM

ನವದೆಹಲಿ: ಮುಂದಿನ 6 ತಿಂಗಳೊಳಗೆ ಅಮರಾವತಿಯನ್ನು (Amaravati) ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High Court) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಈ ಆದೇಶ ನೀಡಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಈ ನ್ಯಾಯಪೀಠವು ವಿಚಾರಣೆ ನಡೆಸುತ್ತಿದೆ. ಜನವರಿ 31ರಂದು ಈ ವಿಷಯಕ್ಕೆ ಸಂಬಂಧಿಸಿದ ಕಾನೂನು ಪ್ರಶ್ನೆಗಳನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿದೆ. ಆಂಧ್ರಪ್ರದೇಶ ಸರ್ಕಾರದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನೂ ಕೇಳಿದೆ.

ಆಂಧ್ರಪ್ರದೇಶ ರಾಜ್ಯದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಮರಾವತಿ ರಾಜಧಾನಿ ಮತ್ತು ಆ ಪ್ರದೇಶದಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಪ್ರಕ್ರಿಯೆಯನ್ನು 1 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಆಂಧ್ರಪ್ರದೇಶ ಸರ್ಕಾರ ಮತ್ತು ಆಂಧ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು.

ಮಾರ್ಚ್ 3ರಂದು ಅಮರಾವತಿಯನ್ನು ರಾಜ್ಯದ ಏಕೈಕ ರಾಜಧಾನಿಯನ್ನಾಗಿ ಘೋಷಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆಂಧ್ರಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ, ಅಭಿವೃದ್ಧಿಯ ವಿಕೇಂದ್ರೀಕರಣಕ್ಕಾಗಿ ಮೂರು ರಾಜಧಾನಿಗಳನ್ನು ಸ್ಥಾಪಿಸಲು ಪ್ರಸ್ತಾಪಿಸುತ್ತಿದೆ ಎಂದು ಹೇಳಿತ್ತು.

ಇದನ್ನೂ ಓದಿ: PM Modi Andhra Visit: ಪ್ರಧಾನಿ ಮೋದಿಯಿಂದ ಇಂದು ಆಂಧ್ರಪ್ರದೇಶ, ತೆಲಂಗಾಣದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಶಾಸಕಾಂಗವು ರಾಜ್ಯದ ರಾಜಧಾನಿಯ ಬಗ್ಗೆ ಯಾವುದೇ ಶಾಸನವನ್ನು ಮಾಡುವ ಅಧಿಕಾರವನ್ನು ಹೊಂದಿಲ್ಲ ಮತ್ತು ಪ್ರಸ್ತುತ ರಾಜಧಾನಿ ಅಮರಾವತಿಯಿಂದ ಯಾವುದೇ ಕಚೇರಿಯನ್ನು ಸ್ಥಳಾಂತರಿಸದಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿತ್ತು.

ರಾಜಧಾನಿ ಅಮರಾವತಿಯನ್ನು ಅಭಿವೃದ್ಧಿಪಡಿಸುವ ಕುರಿತು ತನ್ನ ಆದೇಶದ ಅನುಷ್ಠಾನದ ಬಗ್ಗೆ ನಿಯಮಿತವಾಗಿ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಆಂಧ್ರಪ್ರದೇಶದ ಪ್ರಸ್ತುತ ರಾಜಧಾನಿ ಪ್ರದೇಶವಾದ ಅಮರಾವತಿಯ ರೈತರು ರಾಜ್ಯ ಸರ್ಕಾರವು 3 ರಾಜಧಾನಿಗಳ ರಚನೆಯ ಪ್ರಸ್ತಾಪವನ್ನು ಪ್ರಶ್ನಿಸಿದ್ದರು. ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದ ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ನಗರಗಳಲ್ಲಿ 3 ರಾಜಧಾನಿಗಳನ್ನು ಮಾಡಲು ನಿರ್ಧರಿಸಿತ್ತು. ಆದರೆ, ಹೈಕೋರ್ಟ್‌ನಲ್ಲಿ ವಿವಿಧ ಅರ್ಜಿಗಳನ್ನು ಸಲ್ಲಿಸುವುದರಿಂದ ವಿಶಾಖಪಟ್ಟಣದಲ್ಲಿ ಉದ್ದೇಶಿತ ಆಡಳಿತಾತ್ಮಕ ರಾಜಧಾನಿ, ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿ ಮತ್ತು ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿಯನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು.

ರಾಜ್ಯಕ್ಕೆ ತನ್ನ ಮಹತ್ವಾಕಾಂಕ್ಷೆಯ 3 ರಾಜಧಾನಿ ಯೋಜನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಆಂಧ್ರಪ್ರದೇಶ ಸರ್ಕಾರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. “ರಾಜ್ಯಕ್ಕೆ ತನ್ನ ರಾಜಧಾನಿಯನ್ನು ನಿರ್ಧರಿಸುವ ಅಧಿಕಾರವಿಲ್ಲ ಎಂದು ಹೇಳುವುದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ” ಎಂದು ರಾಜ್ಯವು ವಕೀಲ ಮಹಫೂಜ್ ಎ ನಾಜ್ಕಿ ಮೂಲಕ ಸಲ್ಲಿಸಿದ ಮೇಲ್ಮನವಿಯಲ್ಲಿ ಹೇಳಿದೆ.

ಇದನ್ನೂ ಓದಿ: Supreme Court: ಅಮರಾವತಿ ರಾಜಧಾನಿ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋದ ಆಂಧ್ರ ಸರ್ಕಾರ

ವಿಶಾಖಪಟ್ಟಣದಲ್ಲಿ ಕಾರ್ಯಾಂಗ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿ ಎಂಬ 3 ರಾಜಧಾನಿಗಳನ್ನು ರೂಪಿಸುವ ಮೂಲಕ ಆಡಳಿತದ ವಿಕೇಂದ್ರೀಕರಣಕ್ಕೆ ಬದ್ಧವಾಗಿದೆ ಎಂದು ಆಂಧ್ರಪ್ರದೇಶ ಸರ್ಕಾರ ಸ್ಪಷ್ಟಪಡಿಸಿದೆ.

ತನ್ನ 307 ಪುಟಗಳ ಮಾರ್ಚ್ 3ರ ಆದೇಶದಲ್ಲಿ ರಾಜ್ಯದ ಎಲ್ಲಾ 3 ನಾಗರಿಕ ವಿಭಾಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಅಮರಾವತಿಯನ್ನು ಸಾಮಾನ್ಯ ರಾಜಧಾನಿಯನ್ನಾಗಿ ಮಾಡಬಹುದು ಎಂದು ಹೈಕೋರ್ಟ್ ಹೇಳಿತ್ತು. ಇದರ ನಂತರ ರಾಜಧಾನಿ ನಗರ ಮತ್ತು ರಾಜಧಾನಿ ಪ್ರದೇಶದ ಅಭಿವೃದ್ಧಿಗಾಗಿ ಲ್ಯಾಂಡ್ ಪೂಲಿಂಗ್ ಯೋಜನೆಯಲ್ಲಿ ತಮ್ಮ ಕೃಷಿ ಭೂಮಿಯನ್ನು ಬಿಟ್ಟುಕೊಟ್ಟ ಭೂಮಾಲೀಕರು ಅರ್ಜಿಗಳನ್ನು ಸಲ್ಲಿಸಿದ್ದರು.

ಅರ್ಜಿದಾರ ಭೂಮಾಲೀಕರು ಆಂಧ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರದ್ದತಿ ಕಾಯಿದೆ, 2020 ಮತ್ತು ಆಂಧ್ರಪ್ರದೇಶದ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯಿದೆ, 2020 ಅನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದರ ಮೂಲಕ ರಾಜ್ಯವು ಅಮರಾವತಿಯನ್ನು ರಾಜ್ಯದ ರಾಜಧಾನಿಯನ್ನಾಗಿ ಬದಲಾಯಿಸಲು ಬಯಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್