AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಕುರಿತ ಅವಹೇಳನಕಾರಿ ಹೇಳಿಕೆ ಪ್ರಕರಣ; ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿದ್ದರೆನ್ನಲಾದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಾಂಬೆ ಹೈಕೋರ್ಟ್ ಹಾಗೂ ಗಿರ್ಗಾಂವ್ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠವು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದೆ.

ಮೋದಿ ಕುರಿತ ಅವಹೇಳನಕಾರಿ ಹೇಳಿಕೆ ಪ್ರಕರಣ; ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ರಾಹುಲ್ ಗಾಂಧಿ- ಪ್ರಧಾನಿ ಮೋದಿImage Credit source: PTI
ಸುಷ್ಮಾ ಚಕ್ರೆ
|

Updated on:Oct 13, 2026 | 12:15 PM

Share

ನವದೆಹಲಿ, ಅಕ್ಟೋಬರ್ 13: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 13) ಹಳೆಯ ಮಹತ್ವದ ಪ್ರಕರಣವೊಂದರಲ್ಲಿ ದೊಡ್ಡ ರಿಲೀಫ್ ನೀಡಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ “ಚೌಕಿದಾರ್ ಚೋರ್ ಹೇ” ಎಂದು ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂಬೈ ಹೈಕೋರ್ಟ್‌ನ ಸೆಪ್ಟೆಂಬರ್ ತಿಂಗಳ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

2018ರ ಸೆಪ್ಟೆಂಬರ್ 20ರಂದು ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರನ್ನು “ಹಿಂದುಸ್ತಾನದ ಚೌಕಿದಾರ್ ಕಳ್ಳ”, “ಕಳ್ಳರ ಕಮಾಂಡರ್” ಎಂದು ಕರೆದಿದ್ದರು ಎಂದು ಆರೋಪಿಸಿ ಬಿಜೆಪಿ ಸದಸ್ಯ ಮಹೇಶ್ ಶ್ರೀಶ್ರೀಮಾಲ್ ಅವರು ಮುಂಬೈನ ಗಿರ್ಗಾಂವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯ ತಳ್ಳಿದ ರಾಹುಲ್ ಗಾಂಧಿ, ಆಸ್ಪತ್ರೆಗೆ ದಾಖಲು

ಬಳಿಕ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಸಮನ್ಸ್ ಹಾಗೂ ವಿಚಾರಣೆಯನ್ನು ರದ್ದುಗೊಳಿಸಲು ಸೆಪ್ಟೆಂಬರ್‌ನಲ್ಲಿ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:12 pm, Tue, 13 October 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​