
ನವದೆಹಲಿ, ಅಕ್ಟೋಬರ್ 13: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 13) ಹಳೆಯ ಮಹತ್ವದ ಪ್ರಕರಣವೊಂದರಲ್ಲಿ ದೊಡ್ಡ ರಿಲೀಫ್ ನೀಡಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ “ಚೌಕಿದಾರ್ ಚೋರ್ ಹೇ” ಎಂದು ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂಬೈ ಹೈಕೋರ್ಟ್‌ನ ಸೆಪ್ಟೆಂಬರ್ ತಿಂಗಳ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
2018ರ ಸೆಪ್ಟೆಂಬರ್ 20ರಂದು ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರನ್ನು “ಹಿಂದುಸ್ತಾನದ ಚೌಕಿದಾರ್ ಕಳ್ಳ”, “ಕಳ್ಳರ ಕಮಾಂಡರ್” ಎಂದು ಕರೆದಿದ್ದರು ಎಂದು ಆರೋಪಿಸಿ ಬಿಜೆಪಿ ಸದಸ್ಯ ಮಹೇಶ್ ಶ್ರೀಶ್ರೀಮಾಲ್ ಅವರು ಮುಂಬೈನ ಗಿರ್ಗಾಂವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
Supreme Court stays the trial court proceedings against Lok Sabha Leader of Opposition Rahul Gandhi in a criminal defamation case over his alleged ‘Chowkidar Chor Hai’ remarks against Prime Minister Narendra Modi.
Supreme Court also issues notice on Rahul Gandhi’s plea against the Bombay High Court order refusing to quash the defamation case.
— ANI (@ANI) October 13, 2026
ಇದನ್ನೂ ಓದಿ: ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯ ತಳ್ಳಿದ ರಾಹುಲ್ ಗಾಂಧಿ, ಆಸ್ಪತ್ರೆಗೆ ದಾಖಲು
ಬಳಿಕ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಸಮನ್ಸ್ ಹಾಗೂ ವಿಚಾರಣೆಯನ್ನು ರದ್ದುಗೊಳಿಸಲು ಸೆಪ್ಟೆಂಬರ್‌ನಲ್ಲಿ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:12 pm, Tue, 13 October 26