Sedition Law: ದೇಶದ್ರೋಹ ಕಾಯ್ದೆಗೆ ಸುಪ್ರೀಂಕೋರ್ಟ್​ ತಡೆ; ಜೈಲಿನಲ್ಲಿರುವವರಿಗೆ ಜಾಮೀನು ಕೋರಲು ಅವಕಾಶ

ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ದೇಶದ್ರೋಹ ಆರೋಪ ಹೊರಿಸುವ ಈ ಕಾಯ್ದೆ ಅನೂರ್ಜಿತಗೊಂಡಿರುತ್ತದೆ.

Sedition Law: ದೇಶದ್ರೋಹ ಕಾಯ್ದೆಗೆ ಸುಪ್ರೀಂಕೋರ್ಟ್​ ತಡೆ; ಜೈಲಿನಲ್ಲಿರುವವರಿಗೆ ಜಾಮೀನು ಕೋರಲು ಅವಕಾಶ
ಸುಪ್ರೀಂಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 11, 2022 | 12:48 PM

ದೆಹಲಿ: ಬ್ರಿಟಿಷರು ಭಾರತವನ್ನು ತಮ್ಮ ಅಧೀನದಲ್ಲಿ ಇರಿಸಿಕೊಳ್ಳುವ ಉದ್ದೇಶದಿಂದ ರೂಪಿಸಿದ್ದ ದೇಶದ್ರೋಹ ಕಾಯ್ದೆಯನ್ನು ಉಳಿಸಿಕೊಳ್ಳುವುದೋ? ಬೇಡವೋ ಎನ್ನುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ಈ ಕಾಯ್ದೆ ಅನೂರ್ಜಿತಗೊಂಡಿರುತ್ತದೆ. ದೇಶದ್ರೋಹ ಕಾಯ್ದೆಯ ಅಡಿ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದು ಸೂಚಿಸಿದೆ. ದೇಶದ್ರೋಹ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯಗಳಿಗೆ ಮನವಿ ಮಾಡಬಹುದಾಗಿದೆ.

ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸಿ, ಸುಪ್ರೀಂಕೋರ್ಟ್ ಮುಂದಿನ ನಿರ್ದೇಶನ ನೀಡುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾರ ವಿರುದ್ಧವೂ ಭಾರತೀಯ ದಂಡ ಸಂಹಿತೆ (Indian Penal Code – IPC) 124ಎ ವಿಧಿಯ ಅನ್ವಯ (ದೇಶದ್ರೋಹ ಕಾಯ್ದೆ) ಅನ್ವಯ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸೂಚಿಸಿದೆ.

‘ಈ ವಿಧಿಯ ಅನ್ವಯ ಪ್ರಕರಣಗಳನ್ನು ದಾಖಲಿಸಬೇಕೆ? ಎರಡೂ ಪಕ್ಷಗಳ ಕಕ್ಷಿದಾರರು ನ್ಯಾಯಾಲಯವನ್ನು ಪ್ರವೇಶಿಸಲು ಅವಕಾಶವಿದೆ. ಇಂಥ ಪ್ರಕರಣಗಳನ್ನು ನ್ಯಾಯಾಲಯಗಳು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಿವೆ. ಈಗಾಗಲೇ ಈ ಕಾಯ್ದೆಯ ಅನ್ವಯ ಯಾವುದೇ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಅಂಥವರು ಜಾಮೀನಿಗಾಗಿ ನ್ಯಾಯಾಲಯಗಳನ್ನು ಕೋರಬಹುದು’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಐಪಿಸಿ 124ಎ ವಿಧಿಯನ್ನು ಸದ್ಯದ ಮಟ್ಟಿಗೆ ಅನೂರ್ಜಿತಗೊಳಿಸುವುದು ಸರಿ ಎನಿಸುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳು ಯಾವೊಬ್ಬ ವ್ಯಕ್ತಿಯ ವಿರುದ್ಧವೂ ಈ ವಿಧಿಯ ಅನ್ವಯ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಸೂಚಿಸಿದರು.

ಐಪಿಸಿ 124ಎ ವಿಧಿಯ ಅನ್ವಯ ಕಾನೂನು ಬದ್ಧವಾಗಿ ಸ್ಥಾಪನೆಯಾದ ಸರ್ಕಾರದ ವಿರುದ್ಧ ಬರಹ, ಮಾತು, ಸಂಜ್ಞೆಗಳ ಮೂಲಕ ಅಸಮಾಧಾನ ತೋರಿಸುವುದು ದೇಶದ್ರೋಹವಾಗುತ್ತದೆ. ಇಂಥ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಲು ಅವಕಾಶವಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Supreme Court Sedition Law Hearing Highlights

ಇದನ್ನೂ ಓದಿ: Sedition law ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹ ಕಾನೂನು ತಡೆಹಿಡಿಯಿರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾಕೀತು

ಇದನ್ನೂ ಓದಿ: ಯಾವುದು ದೇಶದ್ರೋಹ: ಐಪಿಸಿ 124ಎ ವಿಧಿ ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದ ಕೇಂದ್ರ ಸರ್ಕಾರ

Published On - 12:24 pm, Wed, 11 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ