ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಹೈಕೋರ್ಟ್ ಆದೇಶವು ಅಸಂಬದ್ಧ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದೆ
ಅತ್ಯಾಚಾರ ಸಂತ್ರಸ್ತೆಯ ಜಾತಕವನ್ನು ಯನ್ನು ಮೂರು ವಾರಗಳಲ್ಲಿ ಪರೀಕ್ಷಿಸುವ ಮೂಲಕ ಆಕೆಗೆ ಕುಜ ದೋಷ (Mangali/Mangalik) ಇದೆಯೇ ಇಲ್ಲವೇ ಎಂಬುದನ್ನು ನಿರ್ಧರಿಸುವಂತೆ ಲಕ್ನೋ ವಿಶ್ವವಿದ್ಯಾಲಯದ ವಿಭಾಗದ ಮುಖ್ಯಸ್ಥರಿಗೆ (ಜ್ಯೋತಿಷ್ಯ) ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ (Allahabad high court) ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ಶನಿವಾರ ತಡೆ ನೀಡಿದೆ. ಹೈಕೋರ್ಟ್‌ನ ಲಕ್ನೋ ಪೀಠ ನೀಡಿದ ಆದೇಶವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂಕೋರ್ಟ್, ಪ್ರಕರಣದಲ್ಲಿ ಜ್ಯೋತಿಷ್ಯ ಅಂಶವನ್ನು ಅನ್ವಯಿಸುವ ಪ್ರಸ್ತುತತೆಯನ್ನು ಪ್ರಶ್ನಿಸಿದೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರ ಪೀಠವು ಹೈಕೋರ್ಟ್ ಆದೇಶವು ಅಸಂಬದ್ಧ. ಪ್ರಕರಣದಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದೆ. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಆದೇಶ ಸರಿಯಾದುದಲ್ಲ ಅದನ್ನು ರದ್ದು ಮಾಡಬಹುದು ಎಂದು ಹೇಳಿದರು. ಪ್ರಕರಣದ ಇತರ ಅರ್ಹತೆಗಳ ಮೇಲೆ ಹೈಕೋರ್ಟ್ ಜಾಮೀನು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಹಿಂದೂ ನಂಬಿಕೆಯ ಪ್ರಕಾರ, ಮಂಗಳ ಗ್ರಹ(ಕುಜ) ಪ್ರಭಾವದಡಿಯಲ್ಲಿ ಜನಿಸಿದ ವ್ಯಕ್ತಿಯು ಮಂಗಳ ದೋಷದಿಂದ (ದೋಷ)ದಿಂದ ಕೂಡಿರುತ್ತಾನೆ. ಈ ದೋಷವಿರುವ ವ್ಯಕ್ತಿಯನ್ನು ಮದುವೆಯಾದರೆ ಸಂಗಾತಿಗೆ ತೊಂದರೆ ಎಂದು ಹೇಳಲಾಗುತ್ತದೆ. ಹಿಂದೂ ವಿವಾಹಗಳಲ್ಲಿ, ಅನೇಕ ಕುಟುಂಬಗಳು ಜಾತಕ ಹೊಂದಾಣಿಕೆಯ ಮೇಲೆ ಒತ್ತು ನೀಡುತ್ತವೆ.
ಹೈಕೋರ್ಟ್‌ನ ನಿರ್ದೇಶನವು ಹಿಂದೂ ನಂಬಿಕೆ ಅವೈಜ್ಞಾನಿಕ ಮತ್ತು ಮೂಢನಂಬಿಕೆ ಎಂಬ ಕಾರಣಕ್ಕಾಗಿ ಅಲ್ಲ, ಆದರೆ ಅತ್ಯಾಚಾರ ಆರೋಪಿಯು ಸಂತ್ರಸ್ತೆಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರದ ಆರೋಪವನ್ನು ನಿರಾಕರಿಸಲು ಇದನ್ನು ಆಧಾರವಾಗಿ ಬಳಸಲು ಮುಂದಾದ ಬಗ್ಗೆ ಸುಪ್ರೀಂ ಗರಂ ಆಗಿದೆ.
ಆರೋಪಿಯು ಮದುವೆಯ ಭರವಸೆ ನೀಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ನಂತರ ಆಕೆಗೆ ಕುಜ ದೋಷವಿದೆ ಎಂದು ಮದುವೆಯಿಂದ ಹಿಂದೆ ಸರಿದಿದ್ದಾನೆ.
ಮಹಿಳೆ ಪರ ವಕೀಲರಾದ ಅಜಯ್ ಕುಮಾರ್ ಸಿಂಗ್ ಅವರು, ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ರ ಅಡಿಯಲ್ಲಿ ಹೈಕೋರ್ಟ್ ನಿರ್ದೇಶನವನ್ನು ನೀಡಿದೆ. ಇದು ಕಕ್ಷಿದಾರರ ಒಪ್ಪಿಗೆಯೊಂದಿಗೆ ತಜ್ಞರ ಅಭಿಪ್ರಾಯವನ್ನು ಪಡೆಯಲು ನ್ಯಾಯಾಲಯಕ್ಕೆ ಅನುವು ಮಾಡಿಕೊಡುತ್ತದೆ ಎಂದು ಪೀಠಕ್ಕೆ ತಿಳಿಸಿದರು.
ಆದಾಗ್ಯೂ, ನಿರ್ದೇಶನವು ವಿಷಯಕ್ಕೆ ಸಂಬಂಧಿಸಿದ್ದಲ್ಲ ಮತ್ತು ಗೌಪ್ಯತೆಯ ಹಕ್ಕು ಮತ್ತು ಇತರ ಹಲವು ಅಂಶಗಳನ್ನು ಒಳಗೊಂಡಿರುತ್ತದೆ ಎಂದು ಪೀಠ ಹೇಳಿದೆ.
ಜ್ಯೋತಿಷ್ಯವನ್ನು ವಿಜ್ಞಾನವೆಂದು ಪರಿಗಣಿಸಲಾಗುತ್ತದೆ. ವಿಶ್ವವಿದ್ಯಾಲಯವು ಕೋರ್ಸ್ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪದವಿಗಳನ್ನು ನೀಡುತ್ತದೆ ಎಂದು ಸಿಂಗ್ ಸಮರ್ಥಿಸಿದಾಗ, ಇದು ವಿಷಯವನ್ನು ಪ್ರಶ್ನಿಸುವುದಿಲ್ಲ ಅಥವಾ ಜ್ಯೋತಿಷ್ಯವು ವಿಜ್ಞಾನವೇ ಎಂಬ ವಿಷಯಕ್ಕೆ ಸೇರುವುದಿಲ್ಲ ಎಂದು ಪೀಠ ಹೇಳಿದೆ.
“ನಾವು ಅದನ್ನು ಗೌರವಿಸುತ್ತೇವೆ,” ನ್ಯಾಯಾಂಗ ವೇದಿಕೆಯು ಈ ನಿರ್ದೇಶನವನ್ನು ನೀಡಬಹುದೇ ಎಂಬುದು ಇಲ್ಲಿ ಪ್ರಶ್ನೆಯಾಗಿದೆ ಎಂದು ಪೀಠ ಹೇಳಿದೆ. ನ್ಯಾಯದ ಹಿತದೃಷ್ಟಿಯಿಂದ ಪ್ರಕರಣದ ಅರ್ಹತೆ ಅಥವಾ ಆದೇಶದ ಬಗ್ಗೆ ನಾವು ಏನನ್ನೂ ಹೇಳುವುದಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ಹೇಳಿದೆ. ಅದೇ ವೇಳೆ ಆರೋಪಿಯ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಆಧಾರದ ಮೇಲೆ ನಿರ್ಧರಿಸಲು ಹೈಕೋರ್ಟ್‌ಗೆ ನಿರ್ದೇಶಿಸಿದೆ.
ಪ್ರಕರಣದ ಮುಂದಿನ ವಿಚಾರಣೆ ಜೂನ್ 26 ರಂದು ನಡೆಯಲಿದೆ.
ಏನಿದು ಪ್ರಕರಣ?
ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಗಿದೆ.ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವಕೀಲರಿಗೆ ಅವರ ಕಕ್ಷಿದಾರರ ಜಾತಕವನ್ನು ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗಕ್ಕೆ ಸಲ್ಲಿಸುವಂತೆ ಆದೇಶಿಸಿದ್ದು, ಆಕೆಗೆ ಕುಜ ದೋಷ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಕವರ್ ವರದಿಯನ್ನು ಸಲ್ಲಿಸುವಂತೆ ಹೇಳಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:00 pm, Sat, 3 June 23