AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Kumar Mishra: ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಸೇವಾವಧಿ 3ನೇ ಬಾರಿಗೆ ವಿಸ್ತರಿಸುವುದು ಕಾನೂನುಬಾಹಿರ: ಸುಪ್ರೀಂ

ಜಾರಿ ನಿರ್ದೇಶನಾಲಯ(ED)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ(Sanjay Kumar Mishra) ಅವರ ಸೇವಾವಧಿ ವಿಸ್ತರಣೆ ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್​ ಹೇಳಿದೆ.

Sanjay Kumar Mishra: ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಸೇವಾವಧಿ 3ನೇ ಬಾರಿಗೆ ವಿಸ್ತರಿಸುವುದು ಕಾನೂನುಬಾಹಿರ: ಸುಪ್ರೀಂ
ಸಂಜಯ್ ಕುಮಾರ್
ನಯನಾ ರಾಜೀವ್
|

Updated on: Jul 11, 2023 | 3:03 PM

Share

ಜಾರಿ ನಿರ್ದೇಶನಾಲಯ(ED)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ(Sanjay Kumar Mishra) ಅವರ ಸೇವಾವಧಿ ವಿಸ್ತರಣೆ ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಅವರು ಜುಲೈ 31ರವರೆಗೆ ಈ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮೂರನೇ ಬಾರಿಗೆ ಮಿಶ್ರಾ ಅವರ ಸೇವಾವಧಿ ವಿಸ್ತರಣೆ ಸರಿಯಲ್ಲ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಸೇವಾವಧಿ ವಿಸ್ತರಣೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ. ನ್ಯಾಯಾಲಯದ ಉನ್ನತಾಧಿಕಾರ ಸಮಿತಿಯ ಶಿಫಾರಸಿನ ಮೇರೆಗೆ ಅವಧಿಯನ್ನು ವಿಸ್ತರಿಸುವ ಅಧಿಕಾರ ಕೇಂದ್ರಕ್ಕಿದೆ.

ಮತ್ತಷ್ಟು ಓದಿ: ಭಯದ ವಾತಾವರಣ ಸೃಷ್ಟಿಸಬೇಡಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ತರಾಟೆ

ಸಂಜಯ್ ಮಿಶ್ರಾ ಅವರನ್ನು ಮೊದಲು 2018ರ ನವೆಂಬರ್ 19ರಂದು ಎರಡು ವರ್ಷಗಳ ಅವಧಿಗೆ ಇಡಿ ನಿರ್ದೇಶಕರನ್ನಾಗಿ ನೇಮಿಸಲಾಯಿತು. ನವೆಂಬರ್ 2020ಕ್ಕೆ ಅವರ ಅಧಿಕಾರಾವಧಿ ಕೊನೆಗೊಳ್ಳಬೇಕಿತ್ತು, ಅದಕ್ಕೂ ಮೊದಲೇ ಮೇ ತಿಂಗಳಲ್ಲಿಯೇ ಅವರ ವಯಸ್ಸು 60 ಆಗಿತ್ತು. ನವೆಂಬರ್ 2020ರಲ್ಲಿ ಅವರ ಅವಧಿ ಮುಗಿಯುವ ಮೊದಲು ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ಎರಡು ವರ್ಷಗಳ ಬದಲಿಗೆ ಮೂರು ವರ್ಷಗಳವರೆಗೆ ವಿಸ್ತರಿಸಿತ್ತು.

ಇದಾದ ಬಳಿಕ 2021ರಲ್ಲಿ ಕೇಂದ್ರ ವಿಚಕ್ಷಣ ಕಮಿಷನ್ ಕಾಯ್ದೆ ಹಾಗೂ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಯ ತಿದ್ದುಪಡಿ ಮಾಡಲು ಸುಗ್ರೀವಾಜ್ಞೆಯನ್ನು ತಂದಿತು. ಅದರ ಅಡಿಯಲ್ಲಿ ಸಿಬಿಐ ಮತ್ತು ಇಡಿ ಮುಖ್ಯಸ್ಥರಿಗೆ ಮೂರು ಸೇವಾ ವಿಸ್ತರಣೆಗಳನ್ನು ನೀಡಲಾಯಿತು.

2022ರ ನವೆಂಬರ್​ರಲ್ಲಿ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಸಂಜಯ್ ಕುಮಾರ್ ಮಿಶ್ರಾಗೆ ಒಂದು ವರ್ಷದ ವಿಸ್ತರಣೆಯನ್ನು ನೀಡಿತು. ಇದರ ಪ್ರಕಾರ ಮಿಶ್ರಾ ಅವರ ಅಧಿಕಾರಾವಧಿ 2023ರ ನವೆಂಬರ್ 18 ರಂದು ಪೂರ್ಣಗೊಳ್ಳಲಿದೆ. ಆದರೆ ಅದಕ್ಕೂ ಮುನ್ನ ಸುಪ್ರೀಂಕೋರ್ಟ್​ ವಿಸ್ತರಣೆ ಆದೇಶವನ್ನು ರದ್ದುಗೊಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್