ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ಸುಪ್ರೀಂಕೋರ್ಟ್ ಆದೇಶ

ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಯನ್ನು ನಿಲ್ಲಿಸಿ ಸುಪ್ರೀಂಕೋರ್ಟ್ ಬುಧವಾರ ಯಥಾಸ್ಥಿತಿಗೆ ಆದೇಶಿಸಿದೆ.

ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ಸುಪ್ರೀಂಕೋರ್ಟ್ ಆದೇಶ
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 20, 2022 | 2:59 PM

ದೆಹಲಿ: ಹನುಮ ಜಯಂತಿಯಂದು ನಡೆದ ಹಿಂಸಾಚಾರದಿಂದ ತತ್ತರಿಸಿರುವ ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ (Jahangirpuri) ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಯನ್ನು ನಿಲ್ಲಿಸಿ ಸುಪ್ರೀಂಕೋರ್ಟ್ (Supreme Court) ಬುಧವಾರ ಯಥಾಸ್ಥಿತಿಗೆ (status quo)ಆದೇಶಿಸಿದೆ. ಹಿರಿಯ ವಕೀಲರಾದ ದುಷ್ಯಂತ್ ದವೆ, ಕಪಿಲ್ ಸಿಬಲ್, ಪಿವಿ ಸುರೇಂದ್ರನಾಥ್ ಮತ್ತು ಪ್ರಶಾಂತ್ ಭೂಷಣ್ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ಮುಂದೆ ಈ ವಿಷಯ ಪ್ರಸ್ತಾಪಿಸಿದರು. ಗಲಭೆ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಮತ್ತು ಯಾರಿಗೂ ನೋಟಿಸ್ ನೀಡಿಲ್ಲ ಎಂದು ದುಶ್ಯಂತ್ ದವೆ ಉಲ್ಲೇಖಿಸಿದ್ದರಿಂದ, ಸಿಜೆಐ ಯಥಾಸ್ಥಿತಿಗೆ ಆದೇಶಿಸಿದ್ದಾರೆ. “ಇತರ ವಿಷಯದ ಜೊತೆಗೆ ವಿಷಯವನ್ನು ನಾಳೆ ತೆಗೆದುಕೊಳ್ಳಲಿ” ಎಂದು ಸಿಜೆಐ ಹೇಳಿದರು.ಮಧ್ಯಪ್ರದೇಶದ ಖರಗೋನ್​​ನಲ್ಲಿ ನಡೆದ ಗಲಭೆ-ಆರೋಪಿಗಳ ಆಸ್ತಿಗಳನ್ನು ಧ್ವಂಸಗೊಳಿಸಲು ಬುಲ್ಡೋಜರ್‌ಗಳನ್ನು ಬಳಸುವುದರ ವಿರುದ್ಧ ಜಮೀಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯಲ್ಲಿಯೂ ಜಹಾಂಗೀರ್‌ಪುರಿ ಧ್ವಂಸ ಅಭಿಯಾನದ ವಿಷಯವನ್ನು ಉಲ್ಲೇಖಿಸಲಾಗಿದೆ. ಜಹಾಂಗೀರ್‌ಪುರಿ ಧ್ವಂಸವು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಬೇಕಿತ್ತು ಆದರೆ ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಬೇಕಾಗಿರುವುದರಿಂದ, ಕಾರ್ಯಾಟರಣೆ 9 ಗಂಟೆಗೆ ಪ್ರಾರಂಭವಾಯಿತು ಎಂದು ದವೆ ಹೇಳಿದರು.

ಜಹಾಂಗೀರ್‌ಪುರಿ ಧ್ವಂಸ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ನಿವಾಸಿಗಳಿಗೆ ಪೂರ್ವ ಸೂಚನೆ ನೀಡಲಾಗಿಲ್ಲ. ಅವರಲ್ಲಿ ಹಲವರಿಗೆ ಮನೆಯಲ್ಲಿಯೂ ಇಲ್ಲ ಎಂದು ವಕೀಲರು ಹೇಳಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿ ವಕೀಲರು ಧ್ವಂಸ ಕಾರ್ಯಾಚರಣೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ನಿಲ್ಲಿಸುವಂತೆ ಕೋರಿದ್ದಾರೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಇಂದೇ ವಿಷಯದ ಪಟ್ಟಿಗೆ ಅನುಮತಿ ನೀಡಿದೆ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಅವರಿಗೆ ಸೂಚನೆಗಳೊಂದಿಗೆ ಸಿದ್ಧರಾಗುವಂತೆ ಕೇಳಿದೆ. ಇದು ಸಾರ್ವಜನಿಕ ಭೂಮಿಯನ್ನು ಅತಿಕ್ರಮಣವಾಗಿದ್ದರೆ ಇದು ಕಾನೂನುಬಾಹಿರವೇ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಕೇಳಿತು. ಸಂಬಂಧಿಸಿದ ಪ್ರದೇಶವು ಅಧಿಸೂಚಿತ ‘ಜುಗ್ಗಿ ಕ್ಲಸ್ಟರ್’ ಆಗಿದೆಯೇ ಎಂದು ದೆಹಲಿ ಹೈಕೋರ್ಟ್ ಪೀಠವು ಕೇಳಿದೆ.

ಬಿಜೆಪಿ ಆಡಳಿತವಿರುವ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಮತ್ತು ಗುರುವಾರ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಧ್ವಂಸ ಕಾರ್ಯಾಚರಣೆ ನಿಗದಿಪಡಿಸಿದೆ. ನಾಗರಿಕ ಮಂಡಳಿಯು ದೆಹಲಿ ಪೊಲೀಸರಿಂದ 400 ಪೊಲೀಸ್ ಸಿಬ್ಬಂದಿಯನ್ನು ಇದಕ್ಕಾಗಿ ಕೋರಿದೆ.

ಧ್ವಂಸ ಕಾರ್ಯಾಚರಣೆಗೆ ಸಿದ್ಧತೆಯಾಗಿ ಬುಧವಾರ ಬೆಳಗ್ಗೆ ಜಹಾಂಗೀರ್​​ಪುರಿಯಲ್ಲಿ ಭಾರೀ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿತ್ತು. ಉಪ ಪೊಲೀಸ್ ಆಯುಕ್ತ (ಡಿಸಿಪಿ), ವಾಯುವ್ಯ, ಉಷಾ ರಂಗಣ್ಣಿ ಮತ್ತು ಇತರ ಪೊಲೀಸ್ ಸಿಬ್ಬಂದಿ ಬೆಳಿಗ್ಗೆ ಪ್ರದೇಶವನ್ನು ಪರಿಶೀಲಿಸಿದರು.

ಎನ್‌ಡಿಎಂಸಿ ಮೇಯರ್ ರಾಜಾ ಇಕ್ಬಾಲ್ ಸಿಂಗ್, ಸುಪ್ರಿಂಕೋರ್ಟ್ ಆದೇಶವನ್ನು ಅನುಸರಿಸಲಾಗುವುದು ಮತ್ತು ಕೆಡವುವ ಕಾರ್ಯ ಆರಂಭವಾದ ಕೂಡಲೇ ಆದೇಶ ಬಂದಿರುವುದರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಎನ್‌ಡಿಎಂಸಿ ಕಮಿಷನರ್ ಸಂಜಯ್ ಗೋಯೆಲ್ ಮಾತನಾಡಿ, ನಾಗರಿಕ ಸಂಸ್ಥೆಯು ಮೊದಲು ಆದೇಶವನ್ನು ಜಾರಿಗೊಳಿಸುತ್ತದೆ ನಂತರ ಅದರಂತೆ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ. ಸುಪ್ರೀಂಕೋರ್ಟ್‌ನ ಆದೇಶದ ಸುಮಾರು ಒಂದು ಗಂಟೆಯ ನಂತರ, ದುಶ್ಯಂತ್ ದವೆ ಮತ್ತೆ ವಿಷಯವನ್ನು ಪ್ರಸ್ತಾಪಿಸಿ ಕೆಡವುವ ಕಾರ್ಯಾಚರಣೆಯನ್ನು ನಿಲ್ಲಿಸಿಲ್ಲ ಎಂದು ದೂರಿದರು. ನಂತರ ಎನ್‌ಡಿಎಂಸಿ ಮೇಯರ್, ಕಮಿಷನರ್ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ತಡೆಯಾಜ್ಞೆಯನ್ನು ತಿಳಿಸುವಂತೆ ಸಿಜೆಐ ಸುಪ್ರೀಂಕೋರ್ಟ್  ರಿಜಿಸ್ಟ್ರಿಯನ್ನು ಕೇಳಿದರು.

ಇದನ್ನೂ ಓದಿ: Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣದ ತನಿಖೆ ಕ್ರೈಂ ಬ್ರಾಂಚ್‌ಗೆ ಹಸ್ತಾಂತರ

Published On - 2:38 pm, Wed, 20 April 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್