ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್

ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಬಹುಮುಖ್ಯವಾಗಿ ಆಕ್ಸಿಜನ್​ ಪೂರೈಕೆ, ಅಗತ್ಯ ಔಷಧೀಯ ಉತ್ಪನ್ನಗಳ ಪೂರೈಕೆ, ಕೊರೊನಾ ಲಸಿಕೆ ವಿತರಣೆ ಹಾಗೂ ಲಾಕ್​ಡೌನ್ ಮಾಡುವ ಅಧಿಕಾರದ ಬಗ್ಗೆ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿ ಹಾಗೂ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಆಲಿಸಲಾಗುವುದು ಎಂದು ಸುಪ್ರೀಂ ತಿಳಿಸಿದೆ.

ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 22, 2021 | 3:38 PM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅತ್ಯಂತ ಅಪಾಯಕಾರಿ ವರ್ತನೆ ತೋರುತ್ತಿದ್ದು, ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇನ್ನೊಂದೆಡೆ ವೈದ್ಯಕೀಯ ವ್ಯವಸ್ಥೆಗಳಲ್ಲಿ ಕೊರತೆ ಕಾಣಿಸಿಕೊಳ್ಳುತ್ತಿರುವುದರಿಂದ ಪರಿಸ್ಥಿತಿ ನಿಯಂತ್ರಣ ಕ್ಲಿಷ್ಟಕರವಾಗಿದೆ. ಈ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯ ಕೊರೊನಾಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಎಸ್.​ಎ .ಬೋಬ್ಡೆ ನೇತೃತ್ವದ ಪೀಠ ಹರೀಶ್ ಸಾಳ್ವೆ ಅವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸರ್ವೋಚ್ಛ ನ್ಯಾಯಾಲಯ, ಕೊರೊನಾಕ್ಕೆ ಸಂಬಂಧಿಸಿದಂತೆ ದೆಹಲಿ, ಬಾಂಬೆ, ಸಿಕ್ಕಿಂ, ಮಧ್ಯಪ್ರದೇಶ, ಕೋಲ್ಕತ್ತಾ ಮತ್ತು ಅಲಹಾಬಾದ್ ಈ ಆರು ನ್ಯಾಯಾಲಯಗಳೂ ಉತ್ತಮವಾಗಿಯೇ ಕಾರ್ಯ ನಿರ್ವಹಿಸಿವೆ. ಆದರೆ, ಕೊರೊನಾ ನಿರ್ವಹಣೆ ಕುರಿತಾದ ವಿಚಾರಣೆಯಲ್ಲಿ ಸ್ವಲ್ಪ ಗೊಂದಲ ಸೃಷ್ಟಿಯಾಗಿದೆ ಎಂದು ತಿಳಿಸಿದೆ.

ಹೀಗಾಗಿ ಕೊರೊನಾ ನಿರ್ವಹಣೆ ವಿಚಾರದ ಬಗ್ಗೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹರೀಶ್ ಸಾಳ್ವೆ ಹಾಜರಿರಲಿದ್ದಾರೆ. ಜತೆಗೆ, ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡುವ ವಿಚಾರದ ಬಗ್ಗೆ ಹಾಗೂ ಹೈಕೋರ್ಟ್‌ಗಳ ನ್ಯಾಯಾಂಗ ಅಧಿಕಾರದ ಬಗ್ಗೆ ಪರಿಶೀಲನೆ ನಡೆಯಲಿದೆ.

ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಬಹುಮುಖ್ಯವಾಗಿ ಆಕ್ಸಿಜನ್​ ಪೂರೈಕೆ, ಅಗತ್ಯ ಔಷಧೀಯ ಉತ್ಪನ್ನಗಳ ಪೂರೈಕೆ, ಕೊರೊನಾ ಲಸಿಕೆ ವಿತರಣೆ ಹಾಗೂ ಲಾಕ್​ಡೌನ್ ಮಾಡುವ ಅಧಿಕಾರದ ಬಗ್ಗೆ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿ ಹಾಗೂ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಆಲಿಸಲಾಗುವುದು ಎಂದು ಸುಪ್ರೀಂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೊಸ ದಾಖಲೆ ಬರೆದ ಭಾರತ! ಒಂದೇ ದಿನದಲ್ಲಿ 3.14 ಲಕ್ಷ ಹೊಸ ಪ್ರಕರಣ ದಾಖಲು 

ವೈದ್ಯಕೀಯ ಆಮ್ಲಜನಕ ಕೊರತೆ: ಬೇಡಿಕೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ರಾಜ್ಯಗಳಿಗೆ ಸಲಹೆ ನೀಡಿದ ಪಿಯೂಷ್ ಗೋಯಲ್​

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು