ಕೊವಿಡ್ ಸೋಂಕಿತರಿಗೆ ಚಿಕಿತ್ಸೆ; ಕೇಂದ್ರಕ್ಕೆ ನೊಟೀಸ್ ನೀಡಿದ ಸುಪ್ರೀಂಕೋರ್ಟ್

ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆಯ ಕುರಿತು ದೇಶದ ವಿವಿಧ ಹೈಕೋರ್ಟ್​ಗಳಲ್ಲಿ ನಡೆಯುತ್ತಿರುವ ವಿಚಾರಣೆಗಳು ಸಹ ಸರ್ವೋಚ್ಛ ನ್ಯಾಯಾಲಕ್ಕೆ ರವಾನೆಯಾಗುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಪ್ರಕಾರ ದೇಶದ 6 ಹೈಕೋರ್ಟ್​ಗಳಲ್ಲಿ ಇಂತಹುದೇ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.

ಕೊವಿಡ್ ಸೋಂಕಿತರಿಗೆ ಚಿಕಿತ್ಸೆ; ಕೇಂದ್ರಕ್ಕೆ ನೊಟೀಸ್ ನೀಡಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್​
Follow us
guruganesh bhat
|

Updated on:Apr 22, 2021 | 3:07 PM

ದೆಹಲಿ: ದೇಶದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಕುರಿತು ಗಂಭೀರ ನಿಲುವು ತಳೆದಿರುವ ಸುಪ್ರೀಂಕೋರ್ಟ್, ಕೊವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು  ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಮತ್ತು ನ್ಯಾಯಾಧೀಶರಾದ ಎಲ್.ನಾಗೇಶ್ವರ ರಾವ್, ಎಸ್.ರವೀಂದ್ರ ಭಟ್ ಅವರಗಳಿದ್ದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಈ ಕುರಿತು ನೊಟೀಸ್ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆಯ ಕುರಿತು ದೇಶದ ವಿವಿಧ ಹೈಕೋರ್ಟ್​ಗಳಲ್ಲಿ ನಡೆಯುತ್ತಿರುವ ವಿಚಾರಣೆಗಳು ಸಹ ಸರ್ವೋಚ್ಛ ನ್ಯಾಯಾಲಕ್ಕೆ ರವಾನೆಯಾಗುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಪ್ರಕಾರ ದೇಶದ 6 ಹೈಕೋರ್ಟ್​ಗಳಲ್ಲಿ ಇಂತಹುದೇ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.

1). ವೈದ್ಯಕೀಯ ಆಮ್ಲಜನಕದ ಪೂರೈಕೆ 2). ಅಗತ್ಯ ಔಷಧಗಳ ಪೂರೈಕೆ 3). ಲಸಿಕೆ ವಿತರಣೆಯ ವಿಧಾನ ಮತ್ತು ಬಗೆ 4). ಲಾಕ್​ಡೌನ್ ಘೋಷಣೆ ಮಾಡುವಲ್ಲಿ ರಾಜ್ಯ ಸರ್ಕಾರದ ಅಧಿಕಾರ

ಈ ನಾಲ್ಕು ವಿಷಯದ ಕುರಿತು ದೇಶ ಒಂದು ವಿಧಾನದಲ್ಲಿ ನಡೆಯಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ತಿಳಿಸಿದ್ದಾರೆ. ನಾಳೆಯೇ  ಈ ಪ್ರಕರಣದ ವಿಚಾರಣೆ ನಡೆಯಲಿದ್ದು ಕೇಂದ್ರ ಸರ್ಕಾರ ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆಗಳ ಆಗುಹೋಗುಗಳ ಕುರಿತು ಉತ್ತರಿಸಬೇಕಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಭೀಕರ ಸ್ವರೂಪಕ್ಕೆ ತಿರುಗುತ್ತಿದ್ದು, ಎಲ್ಲೆಡೆ ಸಾವು, ನೋವು, ಆತಂಕ ಹೆಚ್ಚಾಗುತ್ತಿದೆ. ಏತನ್ಮಧ್ಯೆ ದೇಶದಲ್ಲಿ ಕೊರೊನಾ ಹೊಸದೊಂದು ದಾಖಲೆ ನಿರ್ಮಿಸಿದ್ದು, 24 ಗಂಟೆಯ ಅವಧಿಯಲ್ಲಿ 3.14 ಲಕ್ಷ ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುವ ಮೂಲಕ ವಿಶ್ವದಲ್ಲಿ ಒಂದೇ ದಿನದಲ್ಲಿ ಅತ್ಯಧಿಕ ಸೋಂಕು ದಾಖಲಾದ ದೇಶ ಎಂದು ಗುರುತಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ದಾಖಲಾದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1.59 ಲಕ್ಷದ ಗಡಿ ದಾಟಿದೆ.

ಸದ್ಯ ದೇಶದ ಆರೋಗ್ಯ ವ್ಯವಸ್ಥೆಯಲ್ಲೂ ಏರುಪೇರಾಗಿದ್ದು ಆಕ್ಸಿಜನ್​ ಕೊರತೆ, ಐಸಿಯು ಕೊರತೆ, ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆ, ರೆಮ್​ಡೆಸಿವರ್​ ಇಂಜೆಕ್ಷನ್ ಅಭಾವ ಎದುರಾಗಿದೆ. ಏಪ್ರಿಲ್ 15 ರಿಂದೀಚೆಗೆ ಪ್ರತಿನಿತ್ಯ ಸುಮಾರು 2 ಲಕ್ಷ ಕೊರೊನಾ ಪ್ರಕರಣಗಳು ಹೊಸದಾಗಿ ದಾಖಲಾಗುತ್ತಿದ್ದು, ಕೊರೊನಾ ಎರಡನೇ ಅಲೆ ಉತ್ತುಂಗಕ್ಕೆ ಹೋದಾಗ ಇನ್ನೂ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳಲಿವೆ ಎಂಬ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹಲವು ರಾಜ್ಯಗಳು ಕಳೆದ ಬಾರಿಯಂತೆಯೇ ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳ ಮೊರೆ ಹೋಗಿದ್ದು, ನಿಯಮ ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ: ನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತಪರಾಕಿ

Tv9 Digital Live | ಕೊರೊನಾ ಕಠಿಣ ಮಾರ್ಗಸೂಚಿಗೆ ಮಿಶ್ರ ಅಭಿಪ್ರಾಯಗಳು

(Supreme Court takes suo moto cognizance on covid 19 treatment issues in nation)

Published On - 3:01 pm, Thu, 22 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ