
ನವದೆಹಲಿ, ನವೆಂಬರ್ 07: ಏರ್ ಇಂಡಿಯಾ(Air India) ವಿಮಾನ ಅಪಘಾತಕ್ಕೆ ನಿಮ್ಮ ಮಗ ಕಾರಣ ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ ಎಂದು ಪೈಲಟ್ ತಂದೆಗೆ ಸುಪ್ರೀಂಕೋರ್ಟ್ ಸಾಂತ್ವನ ಹೇಳಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್‌ನ ತಂದೆ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕ (ಡಿಜಿಸಿಎ) ಅವರಿಂದ ಉತ್ತರ ಕೇಳಿದ್ದು, ಅಪಘಾತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸೂಚಿಸಿದೆ.
ಕಮಾಂಡರ್ ಸುಮೀತ್ ಸಭರ್ವಾಲ್ ಅವರ 91 ವರ್ಷದ ತಂದೆ ಬಳಿ ನ್ಯಾಯಮೂರ್ತಿಗಳು ಮಾತನಾಡಿ, ನೀವು ಕೊಲೆಗಾರನೆಂಬ ಈ ಹೊರೆಯನ್ನು ಹೊತ್ತುಕೊಳ್ಳುವುದು ಬೇಡ ಎಂದು ಹೇಳಿದ್ದಾರೆ. ವಿಮಾನ ಅಪಘಾತ ತನಿಖಾ ಬ್ಯೂರೋ ( ಎಎಐಬಿ ) ಯ ಪ್ರಾಥಮಿಕ ವರದಿಯು ಪೈಲಟ್ ತಪ್ಪಿದೆ ಎಂದು ಹೇಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ಇದು ಅವರ ಮಗನ ತಪ್ಪು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಅವರಿಗೆ ಭರವಸೆ ನೀಡಿತು.
ಅಪಘಾತಕ್ಕೆ ವಿಮಾನದಲ್ಲಿ ಇಂಧನ ಸ್ಥಗಿತಗೊಂಡಿದ್ದೇ ಕಾರಣ ಎಂಬುದು ತಿಳಿದುಬಂದಿದೆ, ಪೈಲಟ್ ಎಲ್ಲಾದರೂ ಇಂಧನ ಸ್ಥಗಿತಗೊಳಿಸುತ್ತಾರಾ ಎಂದು ನ್ಯಾಯಮೂರ್ತಿಗಳು ಕೇಳಿದ್ದಾರೆ.
ಮತ್ತಷ್ಟು ಓದಿ: ಏರ್ ಇಂಡಿಯಾ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿಯ ಸ್ಥಿತಿ ಏನಾಗಿದೆ ಗೊತ್ತೇ?
ಜೂನ್ 12 ರಂದು, ಏರ್ ಇಂಡಿಯಾದ AI-171 ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. ಕೆಲವು ಸೆಕೆಂಡುಗಳ ನಂತರ, ಅದು ಹತ್ತಿರದ ವೈದ್ಯಕೀಯ ಕಾಲೇಜಿನ ಮೇಲೆ ಅಪ್ಪಳಿಸಿತು, ಒಬ್ಬ ಪ್ರಯಾಣಿಕ ಮತ್ತು ಹಲವಾರು ವೈದ್ಯಕೀಯ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ 260 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಭಾರತೀಯ ಪೈಲಟ್‌ಗಳ ಒಕ್ಕೂಟದ ಬೆಂಬಲದೊಂದಿಗೆ ಸಲ್ಲಿಸಲಾದ ಈ ಅರ್ಜಿಯು, ನಡೆಯುತ್ತಿರುವ AAIB ತನಿಖೆಯನ್ನು ಮುಕ್ತಾಯಗೊಳಿಸಬೇಕು ಮತ್ತು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಾಯುಯಾನ ತಜ್ಞರ ಸ್ವತಂತ್ರ ಸಮಿತಿಯನ್ನು ಸ್ಥಾಪಿಸಬೇಕೆಂದು ಒತ್ತಾಯಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:45 pm, Fri, 7 November 25