Supreme Court: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಂನಲ್ಲಿ ಜುಲೈ 11ರಂದು ವಿಚಾರಣೆ

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದು ಅರ್ಜಿಯನ್ನು ಜುಲೈ 11ರಂದು ಸುಪ್ರೀಂ ಕೋರ್ಟ್​ನ 5 ಪೀಠ ಅರ್ಜಿ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

Supreme Court: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಂನಲ್ಲಿ ಜುಲೈ 11ರಂದು ವಿಚಾರಣೆ
ಸುಪ್ರೀಂಕೋರ್ಟ್
Follow us
|

Updated on: Jul 03, 2023 | 7:06 PM

ದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವುದು, ಇದೀಗ ಇದನ್ನು ರದ್ದು ಮಾಡಿ, ನಾಲ್ಕು ವರ್ಷಗಳು ಕಳೆದಿದೆ, ಈ ಬಗ್ಗೆ ಹಲವು ಪರ – ವಿರೋಧಗಳ ನಡುವೆ, ಶತಾಯಗತಾಯ ಎಂದು 370 ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಬಗ್ಗೆ ಕೇಂದ್ರ ನಿರ್ಧಾರ ಸರಿ ಇಲ್ಲ, ಈ ನಿರ್ಧಾರವನ್ನು ವಾಪಸ್ಸು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್​ಗೆ (Supreme Court) ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್​ ಇದೀಗ ಈ ಅರ್ಜಿ ವಿಚಾರಣೆಯನ್ನು ಜುಲೈ 11ರಂದು ನಡೆಸಲು ಸುಪ್ರೀಂನ ಪಂಚ ನ್ಯಾಯಮೂರ್ತಿ ಪೀಠ ಸಜ್ಜಾಗಿದೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ನಂತರ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು 20 ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.

ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​​ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ , ಸಂಜೀವ್ ಖನ್ನಾ , ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೂ ಒಳಗೊಂಡ 5 ನ್ಯಾಯಮೂರ್ತಿಗಳು ವಿಚಾರಣೆ ನಡೆಸಲಿದೆ.

ಈ ಪ್ರಕರಣವನ್ನು ಜುಲೈ 11ರಂದು ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​​ ಹೇಳಿದ್ದಾರೆ. ಈ ಹಿಂದೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಇದೀಗ ಅಲ್ಲಿಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿದೆ ಎಂದು ಈ ಅರ್ಜಿಯಲ್ಲಿ ತಿಳಿಸಲಾಗಿದೆ. ಆ ರಾಜ್ಯ ಸೂಕ್ಷ್ಮ ರಾಜ್ಯವಾಗಿದ್ದು, ಜತೆಗೆ ಅಲ್ಲಿ ಜಾತಿವಾರು, ಪ್ರಾದೇಶಿಕವಾಗಿ ವಿವಾದಗಳಿದ್ದು, ಈ ಸಮಯದಲ್ಲಿ 370 ರದ್ದು ಮಾಡಿರುವುದು ಸರಿಯಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ 

ಮಾರ್ಚ್ 2020ರಲ್ಲಿ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಅರ್ಜಿಗಳ ವಿಚಾರಣೆಯನ್ನು ಏಳು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸದಿರಲು ನಿರ್ಧರಿಸಿತು, ಐದು ನ್ಯಾಯಾಧೀಶರ ಪೀಠಗಳು ಸಲ್ಲಿಸಿದ ಮತ್ತು 370 ನೇ ವಿಧಿಯ ಬಗ್ಗೆ ವಾದಿಸಿದ ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಈ ಬಗ್ಗೆ ಇಬ್ಬರು ಕೂಡ ಸುಪ್ರೀಂನಲ್ಲಿ ವಾದಿಸಿದ್ದಾರೆ.

ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು, ಎರಡು ತೀರ್ಪುಗಳ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ