AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಭದ್ರತೆ ಲೋಪ ತನಿಖೆಯ ನೇತೃತ್ವ ವಹಿಸಲಿರುವ ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಯಾರು? -ಇಂದು ಹೆಸರು ಪ್ರಕಟಿಸಲಿರುವ ಸಿಜೆಐ

ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟ ತನಿಖೆ ನಡೆಸಲು ನಾವು ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿ ನಮಗೆ ವರದಿ ನೀಡಲಿದೆ ಎಂದು, ಜನವರಿ 10ರಂದು ನಡೆಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ಹೇಳಿತ್ತು.

ಪ್ರಧಾನಿ ಭದ್ರತೆ ಲೋಪ ತನಿಖೆಯ ನೇತೃತ್ವ ವಹಿಸಲಿರುವ ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಯಾರು? -ಇಂದು ಹೆಸರು ಪ್ರಕಟಿಸಲಿರುವ ಸಿಜೆಐ
ಸುಪ್ರೀಂಕೋರ್ಟ್​
TV9 Web
| Updated By: Lakshmi Hegde|

Updated on:Jan 12, 2022 | 9:58 AM

Share

ಪಂಜಾಬ್​​ನಲ್ಲಿ ಉಂಟಾದ ಪ್ರಧಾನಿ ಭದ್ರತೆ ಲೋಪಕ್ಕೆ (PM Security Breach) ಸಂಬಂಧಪಟ್ಟಂತ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ (Supreme Court)​, ಘಟನೆ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ  ನಾಲ್ವರು ಸದಸ್ಯರ ಸಮಿತಿ ರಚಿಸುವುದಾಗಿ ಹೇಳಿದೆ. ಆ ನ್ಯಾಯಮೂರ್ತಿಗಳು ಯಾರು ಎಂಬುದನ್ನು ಇಂದು ಸುಪ್ರೀಂಕೋರ್ಟ್ ಹೇಳಲಿದೆ.  ಜನವರಿ 10ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಮತ್ತು ಹಿಮಾ ಕೊಹ್ಲಿ ನೇತೃತ್ವದ ಪೀಠ, ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟು ನಡೆಯುತ್ತಿರುವ ಎಲ್ಲ ತನಿಖೆಗಳನ್ನೂ ನಿಲ್ಲಿಸುವಂತೆ ಆದೇಶ ನೀಡಿತ್ತು. ಹಾಗೇ. ತಾವೇ ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ನಿವೃತ್ತ ನ್ಯಾಯಮೂರ್ತಿಯ ಹೆಸರನ್ನು ಪ್ರಕಟಪಡಿಸಿರಲಿಲ್ಲ.  

ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟ ತನಿಖೆ ನಡೆಸಲು ನಾವು ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿ ನಮಗೆ ವರದಿ ನೀಡಲಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಈ ತನಿಖಾ ಸಮಿತಿಯ ನೇತೃತ್ವ ವಹಿಸುತ್ತಾರೆ. ಚಂಡಿಗಢ್​​ನ ಡಿಜಿಪಿ (ಪೊಲೀಸ್ ಮಹಾನಿರ್ದೇಶಕರು), ರಾಷ್ಟ್ರೀಯ ತನಿಖಾದಳದ ಐಜಿ (IG Of NIA), ಪಂಜಾಬ್​-ಹರ್ಯಾಣ ಹೈಕೋರ್ಟ್​​ನ ರಿಜಿಸ್ಟ್ರಾರ್​ ಜನರಲ್​ ಮತ್ತು ಪಂಜಾಬ್​​ನ ಹೆಚ್ಚುವರಿ ಡಿಜಿಪಿ (ಭದ್ರತಾ ದಳ) ಈ ಸಮಿತಿಯಲ್ಲಿ ಇರುತ್ತಾರೆ ಎಂದು ಸಿಜೆಐ ಎನ್​.ವಿ.ರಮಣ ತಿಳಿಸಿದ್ದರು.

ಜನವರಿ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್​ನ ಫಿರೋಜ್​ಪುರಕ್ಕೆ ಭೇಟಿ ನೀಡುವವರು ಇದ್ದರು. ಆದರೆ ಅವರು ಪ್ರಯಾಣಿಸಬೇಕಾದ ರಸ್ತೆ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರಿಂದ, ಭದ್ರತೆ ಲೋಪವಾಗಿ ವಾಪಸ್​ ಬಂದಿದ್ದರು. ಅದಕ್ಕೂ ಮೊದಲು ಹುಸ್ಸೇನಿವಾಲಾ ಫ್ಲೈಓವರ್ ಮೇಲೆ ಅವರು 15-20 ನಿಮಿಷ ಕಾಯುವಂತಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾಯರ್ಸ್ ವೈಸ್​ ಎಂಬ ಎನ್​ಜಿಒ ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಲ್ಲೆ, ಸದ್ಯ ನಡೆಯುತ್ತಿರುವ ಎಲ್ಲ ತನಿಖೆಗಳನ್ನೂ ನಿಲ್ಲಿಸುವಂತೆ ಆದೇಶ ನೀಡಿದೆ. ಈ ಮಧ್ಯೆ ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯ ವಿಚಾರಣೆ ನಡೆಸದಂತೆ ಸುಪ್ರೀಂಕೋರ್ಟ್ ವಕೀಲರುಗಳಿಗೆ ಒಂದೇ ಸಮ ಬೆದರಿಕೆ ಕರೆಗಳು ಬರುತ್ತಿವೆ.

ಇದನ್ನೂ ಓದಿ: National Youth Day 2022: ಇಂದು ಪುದುಚೇರಿಯಲ್ಲಿ 25ನೇ ಯುವಜನ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ; ತಂತ್ರಜ್ಞಾನ ಕೇಂದ್ರ ಲೋಕಾರ್ಪಣೆ

Published On - 8:53 am, Wed, 12 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ