ಅಬಕಾರಿ ನೀತಿ ಪ್ರಕರಣ; ಸುಪ್ರೀಂ ಕೋರ್ಟ್​ನಲ್ಲಿ ಇಂದು ಅರವಿಂದ್ ಕೇಜ್ರಿವಾಲ್‌ ಭವಿಷ್ಯ ನಿರ್ಧಾರ

Excise Policy Case: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 13) ಮಹತ್ವದ ತೀರ್ಪನ್ನು ನೀಡಲಿದೆ.

ಅಬಕಾರಿ ನೀತಿ ಪ್ರಕರಣ; ಸುಪ್ರೀಂ ಕೋರ್ಟ್​ನಲ್ಲಿ ಇಂದು ಅರವಿಂದ್ ಕೇಜ್ರಿವಾಲ್‌ ಭವಿಷ್ಯ ನಿರ್ಧಾರ
ಅರವಿಂದ್ ಕೇಜ್ರಿವಾಲ್
Follow us
|

Updated on: Sep 13, 2024 | 7:42 AM

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಬಂಧನವನ್ನು ಪ್ರಶ್ನಿಸಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ನೀಡಲಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ತೀರ್ಪನ್ನು ಸೆಪ್ಟೆಂಬರ್ 5ರಂದು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ನಂತರ ಈ ಬೆಳವಣಿಗೆ ನಡೆದಿದೆ.

ಅರವಿಂದ್ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆಯಿದೆ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಯಿದೆ ಎಂದು ಸಿಬಿಐ ವಾದಿಸಿದ ನಂತರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಲಾಗಿತ್ತು.

ಇದನ್ನೂ ಓದಿ: ಕೇಜ್ರಿವಾಲ್, ಅತಿಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಣೆ

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್ ಆಗಸ್ಟ್ ರಂದು ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿತ್ತು. ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿತ್ತು. ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾರಣವಾಯಿತು.

ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಬಿಐ ಪ್ರತಿಕ್ರಿಯೆ ಕೇಳಿತ್ತು. ಆದರೆ ಆ ಹಂತದಲ್ಲಿ ಜಾಮೀನು ನಿರಾಕರಿಸಿತು. ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು. ದೆಹಲಿ ಮುಖ್ಯಮಂತ್ರಿ ಮತ್ತು ಇತರ ಹಲವು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ದೆಹಲಿಯ ಅಬಕಾರಿ ನೀತಿಯಲ್ಲಿ ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಹಣ ವರ್ಗಾವಣೆ ಮಾಡಿದ ಆರೋಪ ಹೊತ್ತಿದ್ದಾರೆ.

ಇದನ್ನೂ ಓದಿ: ಮದ್ಯ ನೀತಿ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ನಾಳೆ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯ ಮೂಲಕ ಅಕ್ರಮ ಹಣದಿಂದ ಆಮ್ ಆದ್ಮಿ ಪಕ್ಷ (ಎಎಪಿ) ಲಾಭ ಪಡೆದಿದೆ ಎಂದು ಸಿಬಿಐ ಆರೋಪಿಸಿದೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಒಟ್ಟಾರೆ ಉಸ್ತುವಾರಿಯೂ ಆಗಿರುವ ಅರವಿಂದ್ ಕೇಜ್ರಿವಾಲ್ ಮೊದಲಿನಿಂದಲೂ ನೀತಿ ನಿರೂಪಣೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ